ಶಿಕ್ಷಣ ಇಲಾಖೆಯ ಸಭೆ ಅಂತ್ಯ: ಶಾಲೆ ಪ್ರಾರಂಭದ ಬಗ್ಗೆ ಮಹತ್ವದ ನಿರ್ಧಾರ ಪ್ರಕಟ
ಕರ್ನಾಟಕದಲ್ಲಿ ಶಾಲೆ ಪ್ರಾರಂಭಕ್ಕೆ ಸರ್ಕಾರ ಚಿಂತೆನೆ ನಡೆಸಿದ್ದು, ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದು, ಸುದೀರ್ಘ ಚರ್ಚೆ ನಡೆಸಿದರು.
ಬೆಂಗಳೂರು, (ನ.04): ಕೆಲ ರಾಜ್ಯಗಳಲ್ಲಿ ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು, ಅದರಂತೆ ನವೆಂಬರ್ ಕೊನೆ ವಾರದಲ್ಲಿ ಶಾಲೆ ಪ್ರಾರಂಭಕ್ಕೆ ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು (ಬುಧವಾರ) ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗಿನ ಮಹತ್ವದ ಸಭೆ ನಡೆಸಿದ್ದು, ಸಾಧಕ-ಬಾಧಕ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಶಾಲೆಗಳ ಪುನಾರಂಭ ಸದ್ಯಕ್ಕಿಲ್ಲ. ವರದಿ ಸಂಗ್ರಹದ ನಂತರವಷ್ಟೇ ನಿರ್ಧಾರ ಕೈಗೊಳ್ಳಲಾಗುವುದೆಂದು ಎಂದು ಸ್ಪಷ್ಟಪಡಿಸಿದರು.
ಬಿಗ್ ನ್ಯೂಸ್: ಕರ್ನಾಟಕದಲ್ಲಿ ಶಾಲೆ ಪ್ರಾರಂಭಿಸಲು ಸಕಲ ಸಿದ್ಧತೆ
ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭವಿಲ್ಲ. ಶಾಲೆ ಆರಂಭದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ವಸತಿ ಶಾಲೆಗಳ ಆರಂಭ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಎರಡು ದಿನಗಳಲ್ಲಿ ಸಿಎಂಗೆ ವರದಿ ನೀಡಲಾಗುವುದು. ಸಿಎಂ ನಿರ್ಧಾರದ ನಂತರ ಶಾಲೆ ಆರಂಭದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು. ಅಲ್ಲದೇ ಅಧಿಕಾರಿಗಳ ಅಭಿಪ್ರಾಯಗಳನ್ನ ಸಹ ಸಗ್ರಹಿಸಿ ಬಳಿಕ ಈ ನಿರ್ಧಾರ ಪ್ರಕಟಿಸಿದರು.