Asianet Suvarna News Asianet Suvarna News

ಮುಂದುವರೆದ SSLC, PUC ಪರೀಕ್ಷೆ ಗೊಂದಲ: ಶಿಕ್ಷಣ ಸಚಿವರಿಂದ ಹೊರಬಿತ್ತು ಮಹತ್ವದ ಸ್ಪಷ್ಟನೆ

* ಹಲವು ರಾಜ್ಯಗಳಲ್ಲಿ 12 ತರಗತಿ ಪರೀಕ್ಷೆಗಳು ರದ್ದು
* ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಇನ್ನೂ ಗೊಂದಲ
* ಈ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಸುರೇಶ್ ಕುಮಾರ್
 

Minister Suresh Kumar Reacts about SSLC Second PUC Exams rbj
Author
Bengaluru, First Published Jun 2, 2021, 7:53 PM IST

ಬೆಂಗಳೂರು, (ಜೂನ್.02): ಕೇಂದ್ರ ಸರ್ಕಾರ ಸಿಬಿಎಸ್‌ಇ 12ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದೆ. ಇದರ ಬೆನ್ನಲ್ಲೇ ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳು 12ನೇ ಕ್ಲಾಸ್ ಪರೀಕ್ಷೆಗಳನ್ನು ರದ್ದು ಮಾಡಿವೆ.

ಆದ್ರೆ, ಕರ್ನಾಟಕದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಇನ್ನೂ ಗೊಂದಲ ಮುಂದುವರೆದಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಜ್ಞರು ಹಾಗೂ ಅಧಿಕಾರಿಗಳ ಜೊತೆ ನಿರಂತರ ಚರ್ಚೆಗಳನ್ನ ಮಾಡುತ್ತಿದ್ದಾರೆ. ಆದ್ರೆ, ಇನ್ನು ಒಂದು ದಿಟ್ಟ ನಿರ್ಧಾರ ತೆಗೆದುಕೊಂಡಿಲ್ಲ.

12ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಎಂಪಿ ಸರ್ಕಾರ

ಇನ್ನು ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸುರೇಶ್ ಕುಮಾರ್, ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಸ್ಪಷ್ಟಪಡಿಸಿದ್ದಾರೆ.

ಕೊರೋನಾ ಎರಡನೇ ಅಲೆ ನಡುವೆಯೇ ಮೂರನೇ ಅಲೆಯ ಆತಂಕವೂ ಎದುರಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವರ್ಷ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯು ಪರೀಕ್ಷೆ ನಡೆಸುವುದು ಬೇಡ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. 

ಈ ನಡುವೆ ಪ್ರಕಟಣೆ ಹೊರಡಿಸಿರುವ ಸಚಿವ ಸುರೇಶ್ ಕುಮಾರ್, ಪರೀಕ್ಷೆ ಬಗ್ಗೆ ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ಪೋಷಕರ ಜೊತೆ ಸಮಾಲೋಚನೆ ಮುಂದುವರಿದಿದೆ. ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ದೃಷ್ಟಿಯಿಂದ ಶೀಘ್ರವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Follow Us:
Download App:
  • android
  • ios