ಚಾಮರಾಜನಗರ, (ಅ.03): ಕೇಂದ್ರ ಸರ್ಕಾರ ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ಅನ್ ಲಾಕ್ 5.0 ಮಾರ್ಗಸೂಚಿಯನ್ನು ಜಾರಿಗೊಳಿಸಿದೆ. ಅಕ್ಟೋಬರ್ 15 ರ ವರೆಗೆ ಯಾವುದೇ ಶಾಲಾ-ಕಾಲೇಜು ಪ್ರಾರಂಭ ಇಲ್ಲ ಎಂದು ಸ್ಪಷ್ಟಪಡಿಸಿದೆ.

"

ಇನ್ನು ಈ ಬಗ್ಗೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಶಾಲೆಗಳು ಯಾವಾಗ ಆರಂಭವಾಗಲಿವೆ ಎನ್ನುವ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ.

ಅನ್‌ಲಾಕ್ 5: ಹಂತ-ಹಂತವಾಗಿ ಶಾಲಾ-ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್

ಇಂದು (ಶನಿವಾರ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತೊಳಸಿಗೆರೆ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸುರೇಶ್ ಕುಮಾರ್, ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಅಕ್ಟೋಬರ್ 15ರಿಂದ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸುವಂತೆ ಅವಕಾಶ ನೀಡಿದೆ. ಆದ್ರೆ, ಶಿಕ್ಷಣ ಇಲಾಖೆಯಿಂದ ಈ ಬಗ್ಗೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಶಿಕ್ಷಣ ತಜ್ಞರು, ಜನಪ್ರತಿನಿಧಿಗಳು, ಪೋಷಕರು, ಶಿಕ್ಷಣ ಸಂಸ್ಥೆಗಳೊಂದಿಗೆ ಚರ್ಚಿಸಲಾಗುತ್ತದೆ. ಅವರು ನೀಡುವಂತಹ ಅಭಿಪ್ರಾಯಗಳನ್ನು ಆಲಿಸಲಾಗುತ್ತದೆ ಎಂದರು.

ಹೀಗೆ ಎಲ್ಲರಿಂದ ಮಾಹಿತಿ ಪಡೆದ ನಂತರ ರಾಜ್ಯದಲ್ಲಿ ಶಾಲೆಗಳನ್ನು ಯಾವಾಗ, ಹೇಗೆ, ಮೊದಲು ಯಾವ ತರಗತಿ ಆರಂಭಿಸಬೇಕು ಎಂಬ ತೀರ್ಮಾನವನ್ನು ಒಂದೇ ವಾರದಲ್ಲಿ ಕೈಗೊಂಡು ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

ಟ್ಯೂಶನ್ ಶಿಕ್ಷಕನಿಂದ ಶಾಲಾ ಮಕ್ಕಳಿಗೆ ಕೊರೋನಾ ಸೋಂಕು

"