1 ರಿಂದ 9 ನೇ ತರಗತಿ ಪರೀಕ್ಷೆ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವ ಸುರೇಶ್ ಕುಮಾರ್

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದರಿಂದ ಒಂದರಿಂದ ಒಂಭತ್ತನೇ ತರಗತಿ ಪರೀಕ್ಷೆ ನಡೆಸಬೇಕೋ ಬೇಡವೋ ಎನ್ನುವ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿವೆ. ಇನ್ನು ಈ ಬಗ್ಗೆ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದ ಹೀಗೆ

Minister Suresh kumar Reacts On 1 to 9th class Exams

ಚಿಕ್ಕಮಗಳೂರು, (ಏ.17): 1 ರಿಂದ 9 ನೇ ತರಗತಿ ಪರೀಕ್ಷೆ ನಡೆಸುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಸುರೇರ್ಶ ಕುಮಾರ್.. ಇನ್ನೆರಡು ದಿನದಲ್ಲಿ ಶಿಕ್ಷಣ ಇಲಾಖೆ ತೀರ್ಮಾನ ಪ್ರಕಟಿಸಲಿದೆ ಎಂದಿದ್ದಾರೆ.

ಈ ಕುರಿತು ಚಿಕ್ಕಮಗಳೂರಿನಲ್ಲಿ ಇಂದು (ಶನಿವಾರ) ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಸಂಬಂಧಪಟ್ಟವರನ್ನ ಕರೆದು ಚರ್ಚಿಸಿದ್ದೇವೆ. ಅವರೆಲ್ಲರ ಅಭಿಪ್ರಾಯ ಸ್ವೀಕರಿಸಿದ್ದೇವೆ. ನಾವು ಒಂದು ಹಂತಕ್ಕೆ ಬಂದಿದ್ದೇವೆ. ಇನ್ನೆರಡು ದಿನದಲ್ಲಿ ಶಿಕ್ಷಣ ಇಲಾಖೆ ತೀರ್ಮಾನ ಪ್ರಕಟಿಸಲಿದೆ ಎಂದು ಎಂದು ಸ್ಪಷ್ಟಪಡಿಸಿದರು.

ಕೊರೋನಾ, ಸಾರಿಗೆ ಮುಷ್ಕರ: ವಿವಿಧ ಪರೀಕ್ಷೆಗಳು ಮುಂದೂಡಿಕೆ

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದರಿಂದ ಒಂದರಿಂದ ಒಂಭತ್ತನೇ ತರಗತಿ ಪರೀಕ್ಷೆ ನಡೆಸಬೇಕೋ ಬೇಡವೋ ಎನ್ನುವ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿವೆ.

ಕೆಲ ರಾಜ್ಯಗಳಲ್ಲಿ 10  ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಆದ್ರೆ, ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಈಗಾಗಲೇ ವೇಳಾಪಟ್ಟಿಯನ್ನು ಸಹ ಪ್ರಕಟಸಿದೆ. ಆದ್ರೆ, 1ರಿಂದ 9 ನೇ ಕ್ಲಾಸ್ ಪರೀಕ್ಷೆ ಬಗ್ಗೆ ಇನ್ನೆರಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios