SSLC,PUC ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ
* ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ
* ಜೂನ್ 21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಬೇಕಿತ್ತು
*ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ.
ಚಾಮರಾಜನಗರ, (ಮೇ.17): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಳವಾಗುತ್ತಿರುವುದರಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ಬಗ್ಗೆ ಶಿಕ್ಷಣ ಇಲಾಖೆ ನಿರಂತರ ಚರ್ಚೆಗಳನ್ನ ಮಾಡುತ್ತಿದೆ.
"
ಇನ್ನು ಈ ಬಗ್ಗೆ ಚಾಮರಾಜನಗರದಲ್ಲಿ ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೊರೋನಾ ಸೋಂಕು ಕಡಿಮೆಯಾದ ಬಳಿಕ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕೊರೋನಾ ಆತಂಕ; SSLC ಪರೀಕ್ಷೆ ಮುಂದಕ್ಕೆ ಹಾಕಿದ ಸರ್ಕಾರ
ಮುಂಬೈ ನಗರದಲ್ಲಿಯೇ ಕೊರೋನಾ ಕಡಿಮೆಯಾಗಿದೆ. ಇನ್ನು ರಾಜ್ಯದಲ್ಲಿ ಕೊರೊನಾ ಕಡಿಮೆಯಾಗುವುದಿಲ್ಲವೇ. ಮೊದಲು ಕೊರೊನಾ ನಿಯಂತ್ರಣದ ಬಗ್ಗೆ ಗಮನಹರಿಸೋಣ. ಬಳಿಕ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನ ಮಾಡೋಣ ಎಂದು ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಅಭಿಪ್ರಾಯಪಟ್ಟರು.
ಜೂನ್ 21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಬೇಕಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದ್ದು, ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ ಹೇಳಿದ್ದರು.
ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು, ಶಾಲಾ ಸಂಘಟನೆಗಳು, ಶಿಕ್ಷಕರು, ಪಾಲಕರ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದರು.