ಬೆಂಗಳೂರು(ಡಿ.24): ಭಾರತ್‌ ನೆಟ್‌ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ಸರ್ಕಾರಿ ಶಾಲೆಗಳಿಗೆ ಕೇಬಲ್‌ ಮೂಲಕ ಹೈಸ್ಪೀಡ್‌ ಇಂಟರ್ನೆಟ್‌ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಆಲೋಚಿಸಲಾಗುತ್ತಿದೆ ಎಂದು ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಆಂಗ್ಲ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ತಿಳಿಸಿರುವ ಸಚಿವರು, ಈ ಕುರಿತಂತೆ ಸಂಬಂಧಿಸಿದ ಇಲಾಖೆಯೊಂದಿಗೆ ಪ್ರಾಥಮಿಕ ಚರ್ಚೆ ನಡೆಸಲಾಗಿದ್ದು, ಮೊದಲ ಹಂತದಲ್ಲಿ ಕ್ಲಸ್ಟರ್‌ ಮಟ್ಟದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಇದು ಮುಂದಿನ ಒಂದು ವರ್ಷದೊಳಗೆ ಸಾಕಾರವಾಗುವ ನಿರೀಕ್ಷೆ ಇದೆ ಎಂದಿದ್ದಾರೆ.

ಶಾಲೆ ಆರಂಭದ ಡೇಟ್ ಘೋಷಿಸಿದ ಕರ್ನಾಟಕ ಸರ್ಕಾರ..ನಿಯಮ ಏನು?

ಸರ್ಕಾರದ ಈ ಕ್ರಮ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲಾ ಶಿಕ್ಷಣ ವ್ಯವಸ್ಥೆಗೆ ಹೊಸ ದಿಶೆಯನ್ನು ಕಲ್ಪಿಸಲಿದೆ. ಕೋವಿಡ್‌ ಸೃಷ್ಟಿಸಿರುವ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ತಂತ್ರಜ್ಞಾನಾಧಾರಿತ ಕಲಿಕೆಗೆ ವಿಶೇಷ ಒತ್ತು ನೀಡುವುದು ಅನಿವಾರ್ಯವಾಗಿದೆ ಎಂದಿದ್ದಾರೆ.