Asianet Suvarna News Asianet Suvarna News

ಎಸ್ಸೆಸ್ಸೆಲ್ಸಿ ಫಲಿತಾಂಶದ ಬಗ್ಗೆ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಿಷ್ಟು

* ಜು.19 ಮತ್ತು 22ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ
* ವಿದ್ಯಾರ್ಥಿಗಳು ಲಿಖಿತವಾಗಿ ಯಾವುದೇ ಉತ್ತರ ಬರೆಯುವಂತಿಲ್ಲ
* ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆಗಸ್ಟ್‌ನಲ್ಲಿ ಮತ್ತೊಂದು ಪರೀಕ್ಷೆ 

Minister Suresh Kumar Talks Over SSLC Result in Karnataka  grg
Author
Bengaluru, First Published Jul 17, 2021, 9:44 AM IST

ಬೆಂಗಳೂರು(ಜು.17): ಜುಲೈ 19 ಮತ್ತು 22ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಆಗಸ್ಟ್‌ 10ರೊಳಗೆ ನೀಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. 

ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಕೇವಲ ಬಹು ಆಯ್ಕೆ ಮಾದರಿ ಉತ್ತರಗಳಲ್ಲಿ ಸರಿ ಉತ್ತರವನ್ನು ಒಎಂಆರ್‌ ಶೀಟ್‌ನಲ್ಲಿ ಗುರುತಿಸಬೇಕಷ್ಟೆ. ಹಾಗಾಗಿ ಮೌಲ್ಯಮಾಪನಕ್ಕೆ ಹೆಚ್ಚಿನ ಕಾಲಾವಕಾಶ ಬೇಕಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆ.10ರೊಳಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ನೀಡಲಾಗುವುದು ಎಂದರು.

ರಾಯಚೂರು: ಪರೀಕ್ಷಾ ಭಯ ದೂರ ಮಾಡಲು SSLC ವಿದ್ಯಾರ್ಥಿಗಳಿಗೆ ಅಣುಕು ಪರೀಕ್ಷೆ

ಜು.19 ಮತ್ತು 22ರಂದು ನಡೆಯಲಿರುವ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಾರಿ ವಿದ್ಯಾರ್ಥಿಗಳು ಲಿಖಿತವಾಗಿ ಯಾವುದೇ ಉತ್ತರ ಬರೆಯುವಂತಿಲ್ಲ.

ಈ ಬಾರಿ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆಗಸ್ಟ್‌ನಲ್ಲಿ ಮತ್ತೊಂದು ಪರೀಕ್ಷೆ ನಡೆಸುತ್ತೇವೆ. ಬೇರೆ ಬೇರೆ ಕಾರಣಗಳಿಂದ ಕೆಲವು ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಅಂತಹವರಿಗೆ ಅವಕಾಶ ನೀಡಲು ಆಗಸ್ಟ್‌ನಲ್ಲೇ ಮತ್ತೊಂದು ಪರೀಕ್ಷೆ ನಡೆಸಲಾಗುವುದು ಎಂದರು.
 

Follow Us:
Download App:
  • android
  • ios