ಬೆಳಗಾವಿ(ಫೆ.09): ಕಳೆದ ವರ್ಷ ಕೋವಿಡ್‌ನಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಮುಂಬರುವ ಬೇಸಿಗೆ ರಜೆ ದಿನಗಳನ್ನು ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದ್ದಾರೆ. 

ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ, ಕಾಲೇಜು ಪ್ರಾರಂಭ ಮಾಡದ ಹಿನ್ನೆಲೆಯಲ್ಲಿ ಶಿಕ್ಷಣದಿಂದ ಮಕ್ಕಳು ದೂರ ಸರಿಯುತ್ತಿದ್ದಾರೆ. ಅಲ್ಲದೆ ಬಾಲ್ಯ ವಿವಾಹದ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. 

ಫೆ. 15 ರಿಂದ 5 ರಿಂದ 8 ನೇ ತರಗತಿ ಶಾಲೆಗಳು ಪ್ರಾರಂಭ.?

ವಿವಿಧ ಕಡೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಈ ಕುರಿತು ವರದಿ ಪಡೆದು ನೇಮಕ ಮಾಡಿಕೊಳ್ಳಲಾಗುವುದು ಎಂದಿದ್ದಾರೆ.