Asianet Suvarna News Asianet Suvarna News

ಆನ್​ಲೈನ್ ಶಿಕ್ಷಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವರಿಂದ ಮಹತ್ವದ ಸುತ್ತೋಲೆ

ಆನ್‌ಲೈನ್ ಶಿಕ್ಷಣ ಮಾರ್ಗಸೂಚಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ , ಸುರೇಶ್ ಕುಮಾರ್ ಅವರು ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ.

Minister Suresh Kumar Writes about guidelines for online education rbj
Author
Bengaluru, First Published Oct 21, 2020, 7:00 PM IST

ಬೆಂಗಳೂರು, (ಅ.21) : ಆನ್‌ಲೈನ್ ಶಿಕ್ಷಣಕ್ಕೆ ಗೈಡ್‌ ಲೈನ್ ಬಗ್ಗೆ  ವಿವರವಾದ ಸುತ್ತೋಲೆ ಹೊರಡಿಸುವಂತೆ ಸಾರ್ವಜನಿಕ ಇಲಾಖೆಯ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ರಾಜ್ಯದಲ್ಲಿ ನಡೆಯುತ್ತಿರುವ ಆನ್ ಲೈನ್ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳ ಕಣ್ಣಿಗೆ ಹೆಚ್ಚಾಗಿ ತೊಂದರೆಯಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿರುತ್ತದೆ.

ರಾಜ್ಯದ ಶಾಲಾ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ಗುಡ್ ನ್ಯೂಸ್

ಆನ್​ಲೈನ್​ ಶಿಕ್ಷಣಕ್ಕೆ ಸಂಬಂಧಿಸಿದಂತೆ ತಜ್ಞರು ನೀಡಿರುವ ಸಲಹೆ ಮತ್ತು ವರದಿಗಳನ್ನು ಆಧರಿಸಿ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಆ ಮಾರ್ಗಸೂಚಿಯನ್ನು ಆಧರಿಸಿ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಆನ್​ಲೈನ್​ ಶಿಕ್ಷಣ ನೀಡಬೇಕು. ಈ ಕುರಿತು ವಿವರವಾದ ಸುತ್ತೋಲೆ ಹೊರಡಿಸುವಂತೆ ಸಾರ್ವಜನಿಕ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಆನ್ ಲೈನ್ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಕಲಿಕೆ ಮುಂದುವರೆಸಲಾಗಿದೆ. ಆದರೆ, ವಿದ್ಯಾರ್ಥಿಗಳು ಆನ್ ಲೈನ್ ತರಗತಿಗೆ ಹಾಜರಾಗುತ್ತಿರುವುದರಿಂದ ಅವರುಗಳು ಕಣ್ಣಿನ ಸಮಸ್ಯೆ ಎದುರಿಸುವಂತಾಗಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ ಇಂದೇ ಆನ್ ಲೈನ್ ಶಿಕ್ಷಣದ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

Follow Us:
Download App:
  • android
  • ios