ನಮ್ಮ ಮಕ್ಕಳಿಗೆ ಬಸ್ ಬಿಡಿ : ಸಚಿವ ಸುರೇಶ್ ಕುಮಾರ್
ನಮ್ಮ ಮಕ್ಕಳಿಗಾಗಿ ಬಸ್ ಬಿಡಿ ಎಂದು ಸಾರಿಗೆ ಸಚಿವರಿಗೆ ಕರ್ನಾಟಕ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಬೆಂಗಳೂರು (ಫೆ.05): ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸಾರಿಗೆ ಸಚಿವರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ಉಪಮುಖ್ಯಮಂತ್ರಿಗಳೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಪತ್ರ ಬರೆದಿರುವ ಅವರು, ಸಾರಿಗೆ ಬಸ್ಸುಗಳು ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸುಗಳನ್ನು ನೀಡಿ ಅನುಕೂಲ ಮಾಡಿಕೊಟ್ಟಿವೆ.
ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಡಿಸಿಎಂ ಲಕ್ಷ್ಮಣ್ ಸವದಿ ...
ಆದರೆ, ಬಹುತೇಕ ಕಡೆ ಸರ್ಕಾರಿ ಬಸ್ಸಿನ ಸೌಲಭ್ಯವನ್ನು ಅವಲಂಬಿಸಿರುವ ಮಕ್ಕಳಿಗೆ ಬಸ್ಸುಗಳು ಲಭ್ಯವಾಗದೆ ಸಮಯಕ್ಕೆ ಸರಿಯಾಗಿ ಶಾಲೆಗೆ ತೆರಳು ಸಾಧ್ಯವಾಗುತ್ತಿಲ್ಲ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಬಸ್ಸುಗಳ ಸಂಖ್ಯೆ ಹೆಚ್ಚಿಸಬೇಕೆಂದು ಕೋರಿದ್ದಾರೆ.