ವಿಜಯನಗರ ಸಾಮ್ರಾಜ್ಯ ಸ್ಥಾಪಕರು ಯಾರು? ವಿದ್ಯಾರ್ಥಿಯ ಫನ್ನಿ ಉತ್ತರ ವೈರಲ್
ವಿಜಯನಗರ ಸಾಮ್ರಾಜ್ಯದ ಸ್ಥಾಪಕ ಯಾರು ಎಂಬ ಪ್ರಶ್ನೆಗೆ ವಿದ್ಯಾರ್ಥಿಯೋರ್ವ ಬರೆದ ಉತ್ತರ ಸಾಮಾಜಿಕ ಜಾಲತಾಣಗಳಲ್ಲಿ ಸಖ್ ವೈರಲ್ ಆಗುತ್ತಿದೆ.
ಬಳ್ಳಾರಿ, (ಫೆ.03): ವಿಜಯನಗರ ಸಾಮ್ರಾಜ್ಯದ ಸ್ಥಾಪಕರು ಯಾರು..? ಈ ಪ್ರಶ್ನೆಗೆ ವಿದ್ಯಾಥಿರ್ಯೊಬ್ಬ ಶಾಸಕ ಆನಂದ ಸಿಂಗ್ ಎಂದು ಉತ್ತರಿಸಿದ್ದಾನೆ. ಈ ಕುರಿತ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನೋಟ್ಬುಕ್ನಲ್ಲಿ ವಿಜಯನಗರ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳನ್ನು ಬರೆಯಲಾಗಿದ್ದು, ಅದರಲ್ಲಿ ವಿಜಯನಗರ ಸಾಮ್ರಾಜ್ಯದ ಸ್ಥಾಪಕ ಯಾರು ಎಂದು ಒಂದೇ ವಾಕ್ಯದಲ್ಲಿ ಉತ್ತರಿಸಿ ಎಂದು ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆಗೆ ವಿಜಯನಗರ ಸಾಮ್ರಾಜ್ಯದ ಸ್ಥಾಪಕ ಆನಂದ ಸಿಂಗ್ ಎಂದು ಬರೆಯಲಾಗಿದೆ.
100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿನಿಯ ಕನ್ನಡ ಉತ್ತರ ಪತ್ರಿಕೆ ಹೀಗಿದೆ ನೋಡಿ.....
ವಿಜಯನಗರ ಕ್ಷೇತ್ರದ ಶಾಸಕ ಆನಂದ ಸಿಂಗ್ ಮೂಲ ಸೌಕರ್ಯ, ಹಜ್ ಮತ್ತು ವಕ್ಫ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ವಿಜಯನಗರ ಜಿಲ್ಲೆ ರಚನೆ ಬೇಡಿಕೆಯೊಂದಿಗೆ ಆನಂದ ಸಿಂಗ್ ತೀವ್ರ ಚರ್ಚೆಯಲ್ಲಿದ್ದಾರೆ.
ವಿಜಯನಗರ ಜಿಲ್ಲೆಯನ್ನಾಗಿ ಮಾಡುವಲ್ಲಿ ಸಚಿವ ಆನಂದ್ ಸಿಂಗ್ ಯಶಸ್ವಿಯಾಗಿದ್ದು, ಬಳ್ಳಾರಿ ರೆಡ್ಡಿ ಸಹೋದರರ ವಿರೋಧದ ನಡುವೆಯೂ ಸರ್ಕಾರಕ್ಕೆ ಒತ್ತಡ ಹಾಕಿ ವಿಜಯನಗರವನ್ನು ರಾಜ್ಯದ 31 ಜಿಲ್ಲೆಯನ್ನಾಗಿ ಮಾಡಿಸಿದ್ದಾರೆ.
1336ರಲ್ಲಿ ಸಂಗಮ ರಾಜಮನೆತನದ ಅಕ್ಕ-ಬುಕ್ಕರು ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪನೆ ಮಾಡಿದ್ದಾರೆ.