ಮೈಸೂರು (ಅ.16): ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ  ಕಾರ್ಯಕ್ರಮ ಅಕ್ಟೋಬರ್ 19 ರಂದು ನಡೆಯಲಿದೆ. 

ಮೈಸೂರು ಕ್ರಾಫರ್ಡ್ ಹಾಲ್‌ ಸಭಾಂಗಣದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದ್ದು, ಘಟಿಕೋತ್ಸವ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. 

ವರ್ಚುವಲ್ ಲೈವ್ ಮೂಲಕ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, 25ನಿಮಿಷಗಳ ಕಾಲ ಕಾರ್ಯಕ್ರಮ ಉದ್ದೇಶಿಸಿ  ಮಾತನಾಡಲಿದ್ದಾರೆ. 100ನೇ ಘಟಿಕೋತ್ಸವದ ಅಂಗವಾಗಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ. 

ಸುಧಾಮೂರ್ತಿಗೆ ಗೌರವ ಡಾಕ್ಟರೇಟ್ 

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷರಾದ ಸುಧಾಮೂರ್ತಿಗೆ ಈ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.  

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ ...

ಇನ್ನು ಕೊರೊನಾ ಹಿನ್ನಲೆ ಕಾರ್ಯಕ್ರಮಕ್ಕೆ 100ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.  ಪದವಿ ಪ್ರಧಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಬಾಯಿ ರೂಡಾಭಾಯ್ ವಾಲಾ, ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಭಾಗಿಯಾಗಲಿದ್ದು,  ಈ ಬಾರಿ 29,018 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ. 

654 ವಿದ್ಯಾರ್ಥಿಗಳಿಗೆ ಪಿಹೆಚ್‌ಡಿ ಪ್ರಧಾನ ಮಾಡಲಾಗುತ್ತದೆ. ಈ ವೇಳೆ ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಕೂಡಾ ಪಿಹೆಚ್‌ಡಿ ಸ್ವೀಕಾರ ಮಾಡಲಿದ್ದಾರೆ.  ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕ್ರಮದ ಲೈವ್ ವ್ಯವಸ್ಥೆ ಮಾಡಲಾಗಿದ್ದು, ಮೂರು ಭಾಗಗಳಲ್ಲಿ ಎಲ್ಇಡಿ ಸ್ಕೀನ್ ಮೂಲಕ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾಗಿದೆ. ಈ ಬಗ್ಗೆ  ಮೈಸೂರು ವಿವಿ ಕುಲಪತಿ ಪ್ರೋ.ಹೇಮಂತ್ ಕುಮಾರ್ ಮಾಹಿತಿ ನೀಡಿದ್ದಾರೆ..