ಸರಕಾರಿ ಶಾಲೆಯಲ್ಲಿ ನ್ಯಾನೊ ಉಪಗ್ರಹ ನಿರ್ಮಾಣಕ್ಕೆ 1.90 ಕೋಟಿ ರೂ. ಬಿಡುಗಡೆ

ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಅಂಗವಾಗಿ ರಾಜ್ಯದ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಒಂದು ನ್ಯಾನೊ ಉಪಗ್ರಹವನ್ನು ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ 1.90 ಕೋಟಿ ರೂ. ಬಿಡುಗಡೆ ಮಾಡಲು ಆದೇಶಿಸಲಾಗಿದೆ.

Nano satellite construction project in Karnataka government school gow

ಬೆಂಗಳೂರು: ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಅಂಗವಾಗಿ ರಾಜ್ಯದ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಒಂದು ನ್ಯಾನೊ ಉಪಗ್ರಹವನ್ನು ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ 1.90 ಕೋಟಿ ರೂ. ಬಿಡುಗಡೆ ಮಾಡಲು ಆದೇಶಿಸಲಾಗಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಇದರ ಅಂಗವಾಗಿ ಬೆಂಗಳೂರಿನ ಆಯ್ದ ಒಂದು ಸರಕಾರಿ ಶಾಲೆಯಿಂದ ಪ್ರಾಯೋಗಿಕವಾಗಿ ನ್ಯಾನೊ ಉಪಗ್ರಹವನ್ನು ವಿನ್ಯಾಸಗೊಳಿಸಿ, ಉಡಾವಣೆ ಮಾಡಲಾಗುವುದು ಎಂದಿದ್ದಾರೆ.

ತಾಂತ್ರಿಕ ತಜ್ಞರ ಸಮಿತಿಯು ಯೋಜನೆಯ ಅನುಷ್ಠಾನದ ಉಸ್ತುವಾರಿ ನೋಡಿಕೊಳ್ಳಲಿದ್ದು, ಕೆಜಿಎಸ್3ಸ್ಯಾಟ್ ಯೋಜನೆಯಡಿ ಇದನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಜತೆಗೆ ಕೇಂದ್ರ ಸರಕಾರದ ಬಾಹ್ಯಾಕಾಶ ಇಲಾಖೆಯ `ಇನ್-ಸ್ಪೇಸ್’ ವಿಭಾಗವು ಕೂಡ ಇದಕ್ಕೆ ಅಗತ್ಯ ಸಹಕಾರ ನೀಡಲಿದೆ. 9ರಿಂದ 12 ತಿಂಗಳ ಅವಧಿಯಲ್ಲಿ ನನಸಾಗಲಿರುವ ಯೋಜನೆಗೆ  ಇಸ್ರೋ ಮತ್ತು ಭಾರತೀಯ ತಂತ್ರಜ್ಞಾನ ಕಾಂಗ್ರೆಸ್ ಒಕ್ಕೂಟದ (ಐಟಿಸಿಎ) ಸಹಯೋಗವನ್ನೂ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

IFFCO RECRUITMENT 2022: ಇಫ್ಕೊನಲ್ಲಿ ಬಿಸಿಎ ಪಾಸಾದವರಿಗೆ ಉದ್ಯೋಗವಕಾಶ

ಗಣರಾಜ್ಯೋತ್ಸವಕ್ಕೆ ಶಿಕ್ಷಣ ಸಂಸ್ಥೆಗಳಲ್ಲಿ ಸೂರ್ಯ ನಮಸ್ಕಾರಕ್ಕೆ ಯುಜಿಸಿ ಸೂಚನೆ: 75ನೇ ಗಣರಾಜ್ಯೋತ್ಸವದ ಅಂಗವಾಗಿ ದೇಶದಲ್ಲಿರುವ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳು ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಯುಜಿಸಿ (University Grant Commission) ಸೂಚಿಸಿದೆ. ಭಾರತದ ಸ್ವಾತಂತ್ರ್ಯದ 75 ವರ್ಷಗಳ ಸ್ಮರಣಾರ್ಥವಾಗಿ ನಡೆಯುತ್ತಿರುವ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಭಾರತದ ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟವು ಈ ಈವೆಂಟ್ ಅನ್ನು ಆಯೋಜಿಸಿದೆ. 'ಅಮೃತ್ ಮಹೋತ್ಸವ ಸ್ಮರಣಾರ್ಥವಾಗಿ, ರಾಷ್ಟ್ರೀಯ ಯೋಗಾಸನ ಸ್ಪೋರ್ಟ್ಸ್ ಫೆಡರೇಷನ್ (Sports Federation) ಜನವರಿ 1 ರಿಂದ ಫೆಬ್ರವರಿ 7 ರವರೆಗೆ 30 ರಾಜ್ಯಗಳಲ್ಲಿ 750 ಮಿಲಿಯನ್ ಸೂರ್ಯ ನಮಸ್ಕಾರ ಯೋಜನೆಯನ್ನು ನಡೆಸಲು ನಿರ್ಧರಿಸಿದೆ.

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದಡಿ ಬರುವ 30 ಸಾವಿರ ಸಂಸ್ಥೆಗಳು ಮತ್ತು 3 ಲಕ್ಷ ವಿದ್ಯಾರ್ಥಿಗಳು  ಈ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ. ಜನವರಿ 26 ರಂದು ತ್ರಿವರ್ಣ ಧ್ವಜದ ಮುಂದೆ ಸಂಗೀತ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುತ್ತದೆ. ಭಾರತೀಯ ಸಂಸ್ಕೃತಿ  (India Culture) ಹಾಗೂ ಪರಂಪರೆಯಲ್ಲಿ (Heritage) ಈ ಸೂರ್ಯ ನಮಸ್ಕಾರಕ್ಕೆ ವಿಶಿಷ್ಟ ಸ್ಥಾನವಿದೆ. ಯೋಗ (Yoga) ಆರಂಭವಾಗುವುದೇ ಈ ಸೂರ್ಯ ನಮಸ್ಕಾರದಿಂದ. ಹಾಗಾಗಿ, ಅದರ ಮಹತ್ವವನ್ನು ಸಾರುವುದಕ್ಕಾಗಿ ಈ ರೀತಿಯ ಕಾರ್ಯಕ್ರಮವನ್ನು ಯುಜಿಸಿ ಹಮ್ಮಿಕೊಂಡಿದೆ.

ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಸಂಯೋಜಿತ ಕಾಲೇಜುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಯುಜಿಸಿ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ವ್ಯಾಪಕ ಪ್ರಚಾರ ನೀಡುವ ಮೂಲಕ ಈ ಈವೆಂಟ್ ಅನ್ನು ಉತ್ತೇಜಿಸಲು ಆಯೋಗವು ಶಿಕ್ಷಣ ಸಂಸ್ಥೆಗಳನ್ನು ಕೇಳಿಕೊಂಡಿದೆ.

Guest Lecturers: ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಗಳ ಮಹಾಪೂರ

'ಅಮೃತ್ ಮಹೋತ್ಸವ್ ನೆನಪಿಗಾಗಿ, ಒಕ್ಕೂಟವು 30 ರಾಜ್ಯಗಳಲ್ಲಿ 30000 ಸಂಸ್ಥೆಗಳನ್ನು ಒಳಗೊಂಡ 750 ಮಿಲಿಯನ್ ಸೂರ್ಯ ನಮಸ್ಕಾರದ ಯೋಜನೆಯನ್ನು ನಡೆಸಲು ನಿರ್ಧರಿಸಿದೆ. ಇದರಲ್ಲಿ 3 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದು, ಜನವರಿ 1 ರಿಂದ ಫೆಬ್ರವರಿ 7 ರವರೆಗೆ ಈವೆಂಟ್ ನಡೆಯಲಿದೆ. ಜನವರಿ 26 ರಂದು ತ್ರಿವರ್ಣ ಧ್ವಜದ ಮುಂದೆ ಲಕ್ಷಾಂತರ ವಿದ್ಯಾರ್ಥಿಗಳು ಸಂಗೀತ ಸೂರ್ಯ ನಮಸ್ಕಾರವನ್ನು ಮಾಡಲಿದ್ದಾರೆ. ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಸಂಯೋಜಿತ ಕಾಲೇಜುಗಳು ಈವೆಂಟ್‌ನಲ್ಲಿ ಭಾಗವಹಿಸಲು ವಿನಂತಿಸಲಾಗಿದೆ,' ಎಂದು ಆಯೋಗವು ಅಧಿಸೂಚನೆಯಲ್ಲಿ ತಿಳಿಸಿದೆ.

Latest Videos
Follow Us:
Download App:
  • android
  • ios