Asianet Suvarna News Asianet Suvarna News

20 ಸಾವಿರ ಅಂಗನವಾಡಿಗಳಲ್ಲೂ ಎನ್‌ಇಪಿ ಜಾರಿ: ಸಚಿವ ನಾಗೇಶ್‌ ಘೋಷಣೆ

ರಾಜ್ಯದಲ್ಲಿ ಈಗಾಗಲೇ ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸಿರುವ ಸರ್ಕಾರ ಮುಂಬರುವ ಶೈಕ್ಷಣಿಕ ಸಾಲಿನಿಂದ ಶಾಲಾ ಶಿಕ್ಷಣದಲ್ಲಿ ಎನ್‌ಇಪಿ ಜಾರಿಗೆ ತರುವ ನಿಟ್ಟಿನಲ್ಲಿ ನವೆಂಬರ್‌ನಿಂದ ಮೊದಲ ಹಂತದಲ್ಲಿ 20 ಸಾವಿರ ಅಂಗನವಾಡಿಗಳಲ್ಲಿ ಪ್ರಾಯೋಗಿಕವಾಗಿ ಎನ್‌ಇಪಿ ಜಾರಿಗೊಳಿಸಲು ನಿರ್ಧರಿಸಲಾಗಿದೆ.

National Education Policy 2020 To Be Implemented In Schools And Anganwadis From Next Year Says BC Nagesh
Author
Bangalore, First Published Aug 26, 2022, 10:19 AM IST

ಬೆಂಗಳೂರು (ಆ.26): ರಾಜ್ಯದಲ್ಲಿ ಈಗಾಗಲೇ ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸಿರುವ ಸರ್ಕಾರ ಮುಂಬರುವ ಶೈಕ್ಷಣಿಕ ಸಾಲಿನಿಂದ ಶಾಲಾ ಶಿಕ್ಷಣದಲ್ಲಿ ಎನ್‌ಇಪಿ ಜಾರಿಗೆ ತರುವ ನಿಟ್ಟಿನಲ್ಲಿ ನವೆಂಬರ್‌ನಿಂದ ಮೊದಲ ಹಂತದಲ್ಲಿ 20 ಸಾವಿರ ಅಂಗನವಾಡಿಗಳಲ್ಲಿ ಪ್ರಾಯೋಗಿಕವಾಗಿ ಎನ್‌ಇಪಿ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್‌ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು.

ರಾಜ್ಯದಲ್ಲಿರುವ 66 ಸಾವಿರ ಅಂಗನವಾಡಿಗಳ ಪೈಕಿ ಮೊದಲ ಹಂತವಾಗಿ 20 ಸಾವಿರ ಅಂಗನವಾಡಿಗಳಲ್ಲಿ ಎನ್‌ಇಪಿ ಜಾರಿಗೊಳಿಸಲಾಗುವುದು. ಎನ್‌ಇಪಿ ಅಡಿ ರೂಪಿಸಿರುವ ‘ಬಾಲ್ಯ ಪೂರ್ವ ಆರೈಕೆ ಮತ್ತು ಶಿಕ್ಷಣ’ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ಮೂಲಕ ಇನ್ನು ಮುಂದೆ ಮೂರನೇ ವರ್ಷದಿಂದಲೇ ಪ್ರತಿ ಮಗುವಿಗೂ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭವಾಗುತ್ತದೆ. 3ರಿಂದ 5 ವರ್ಷಗಳ ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಕ್ಕಳ ಆರೈಕೆಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ಶಾಲಾಹಂತದಲ್ಲಿಯೇ ಎನ್‌ಇಪಿ ಅನುಷ್ಠಾನದತ್ತ ಹೆಜ್ಜೆ ಇಟ್ಟಿರುವ ಇಡೀ ದೇಶದಲ್ಲಿ ಮೊದಲ ರಾಜ್ಯವಾಗಲಿದೆ. ಈ ವರ್ಷ ಕೊಂಚ ತಡವಾದರೂ ಪೂರ್ವ ಪ್ರಾಥಮಿಕ ಹಂತದಲ್ಲಿ ಎನ್‌ಇಪಿ ಜಾರಿ ಪ್ರಯತ್ನ ನಡೆದಿದೆ. ಅದೇ ರೀತಿ ಮುಂದಿನ ಶೈಕ್ಷಣಿಕ ವರ್ಷದಿಂದ ಹಂತ ಹಂತವಾಗಿ ಶಾಲಾ ಶಿಕ್ಷಣದಲ್ಲೂ ಎನ್‌ಇಪಿ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಅಮೂಲ್ಯ ಬದಲಾವಣೆಗೆ ಎನ್‌ಇಪಿ ಜಾರಿ: ಸಚಿವ ಬಿ.ಸಿ.ನಾಗೇಶ್‌

ಅಕ್ಟೋಬರ್‌ಗೆ ಎನ್‌ಸಿಎಫ್‌: ಕೇಂದ್ರ ಸರ್ಕಾರ ಎನ್‌ಇಪಿ ಅಡಿ ಬರುವ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್‌) ಅಕ್ಟೋಬರ್‌ನಲ್ಲಿ ಬಿಡುಗಡೆ ಮಾಡಲಿದೆ. ಈ ಸಂಬಂಧ ರಾಜ್ಯದಿಂದಲೂ 26 ವಿಷಯ ಪತ್ರಿಕೆಗಳನ್ನು (ಪೊಸಿಷನ್‌ ಪೇಪ​ರ್‍ಸ್) ಸಿದ್ದಪಡಿಸಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಇದರಲ್ಲಿ ಮಕ್ಕಳ ಆರೈಕೆ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ ಇದೆ.ಇದೇ ರೀತಿ ಎಲ್ಲ ರಾಜ್ಯಗಳೂ ತಮ್ಮ ಸಲಹೆ, ಸೂಚನೆಗಳನ್ನು ನೀಡಿವೆ. ಅವುಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಬಿಡುಗಡೆ ಮಾಡಲಿದ್ದು, ಅದರ ಆಧಾರದ ಮೇಲೆ ರಾಜ್ಯ ಪಠ್ಯಕ್ರಮ ಚೌಕಟ್ಟ(ಕೆಸಿಎಫ್‌) ರಚಿಸಲಿದೆ. ಇದಕ್ಕಾಗಿ ಈಗಾಗಲೇ 6 ಉಪ ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದರು.

ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ರಾಜ್ಯಪಾಲರು

40 ಸಾವಿರ ಜನರಿಗೆ ಅರ್ಹತೆ ಸಮಸ್ಯೆ: ಸಚಿವ ಹಾಲಪ್ಪ ಆಚಾರ್‌ ಮಾತನಾಡಿ, ರಾಜ್ಯದ 66 ಸಾವಿರ ಅಂಗನವಾಡಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರ ಪೈಕಿ 40,786 ಮಂದಿ ಕೇವಲ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿದ್ದು ಇವರನ್ನು ಎನ್‌ಇಪಿ ಅಡಿ ಬೋಧನಾ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದಿಲ್ಲ. ಹಾಗಾಗಿ ಅವರಿಗೆ ಸೂಕ್ತ ತರಬೇತಿ ನೀಡಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಉಳಿದವರಲ್ಲಿ 14,303 ಜನ ಪಿಯುಸಿ, 6017 ಜನ ಪದವೀಧರರು, 732 ಜನ ಸ್ನಾತಕೋತ್ತರ ಪದವಿ ಪಡೆದವರಾಗಿದ್ದಾರೆ ಎಂದರು. ಕಲ್ಯಾಣ ಕರ್ನಾಟಕ ಭಾಗದ 14 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಟಾಟಾ ¶ೌಂಡೇಷನ್‌ ಮೂಲಕ ತರಬೇತಿ ನೀಡಲಾಗಿದೆ. ತರಬೇತಿ ಪ್ರಕ್ರಿಯೆ ಶೈಕ್ಷಣಿಕ ವರ್ಷ ಪೂರ್ಣಗೊಳ್ಳುವ ವೇಳೆಗೆ ಮುಕ್ತಾಯವಾಗಲಿದೆ ಎಂದರು.

Follow Us:
Download App:
  • android
  • ios