ನೀಟ್‌ 2024 ಪರೀಕ್ಷೆ ಫಲಿತಾಂಶ ಪ್ರಕಟ, ಕರ್ನಾಟಕದ 6 ವಿದ್ಯಾರ್ಥಿಗಳು ಟಾಪರ್ಸ್

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ -NEET 2024 ಫಲಿತಾಂಶ ಜೂನ್ 04, 2024ರಂದು ಪ್ರಕಟಗೊಂಡಿದ್ದು,  ಕರ್ನಾಟಕದ 6 ವಿದ್ಯಾರ್ಥಿಗಳು ಮೊದಲ ಸ್ಥಾನ ಪಡೆದಿದ್ದಾರೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಫಲಿತಾಂಶ ಬಿಡುಗಡೆ ಮಾಡಿದ್ದು ನೀಟ್ ಪೋರ್ಟಲ್‌ಗೆ ಲಾಗಿನ್ ಆಗುವ ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ.

NEET 2024 Results released 6 students from Karnataka are toppers rav

ಬೆಂಗಳೂರು (ಜೂ.5) ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ -NEET 2024 ಫಲಿತಾಂಶ ಜೂನ್ 04, 2024ರಂದು ಪ್ರಕಟಗೊಂಡಿದ್ದು, ದೇಶದ ಮೊದಲ ರ‍್ಯಾಂಕ್‌ ಪಡೆದ ಟಾಪ್ 100 ವಿದ್ಯಾರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 6 ವಿದ್ಯಾರ್ಥಿಗಳು ಮೊದಲ ಸ್ಥಾನ ಪಡೆದಿದ್ದಾರೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಫಲಿತಾಂಶ ಬಿಡುಗಡೆ ಮಾಡಿದ್ದು ನೀಟ್ ಪೋರ್ಟಲ್‌ಗೆ ಲಾಗಿನ್ ಆಗುವ ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ.

ಕರ್ನಾಟಕದ ಕಲ್ಯಾಣ್ .ವಿ., ಶ್ಯಾಮ್ ಶ್ರೇಯಸ್ ಜೋಸೆಫ್‌, ಅರ್ಜುನ್ ಕಿಶೋರ್, ಟಾಪ್ 3 ಟಾಪರ್ಸ್ ಆಗಿದ್ದಾರೆ. ಪ್ರಜ್ಞಾ ಪಿ.ಶೆಟ್ಟಿ, ಖುಷಿ ಮಗನೂರ್ ಎಂಬ ವಿದ್ಯಾರ್ಥಿಗಳು ಶೇ.99.98 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಸ್ಥಾನ ಪಡೆದಿದ್ದಾರೆ. ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ಒಟ್ಟು  13 ಭಾಷೆಗಳಲ್ಲಿ ನಡೆಸಲಾಗಿತ್ತು ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಆ ಪೈಕಿ ಬಾಲಕ, ಬಾಲಕಿಯರು ಸೇರಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದಾರೆ. 
 

Latest Videos
Follow Us:
Download App:
  • android
  • ios