Asianet Suvarna News Asianet Suvarna News

5, 8ನೇ ತರಗತಿ ಮಕ್ಕಳಿಗೆ ಈ ವರ್ಷ ಹೊಸ ಪರೀಕ್ಷೆ: ಬಿ.ಸಿ.ನಾಗೇಶ್‌

ಕಲಿಕಾ ಗುಣಮಟ್ಟ ಮೌಲ್ಯಮಾಪನ ಟೆಸ್ಟ್‌, ಯಾರನ್ನೂ ಫೇಲ್‌ ಮಾಡಲ್ಲ: ನಾಗೇಶ್‌

New Exam This Year for 5th and 8th Class Students in Karnataka Says BC Nagesh grg
Author
First Published Oct 14, 2022, 10:00 AM IST

ಬೆಂಗಳೂರು(ಅ.14):  ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಹಂತಕ್ಕೆ ತಲುಪುವ ಮುನ್ನ ಅವರ ಕಲಿಕಾ ಮಟ್ಟಮೌಲ್ಯಮಾಪನ ಮಾಡುವ ದೃಷ್ಟಿಯಿಂದ 5 ಮತ್ತು 8ನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಈ ವರ್ಷದಿಂದಲೇ ಆರಂಭಿಸಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ನಗರದ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 10ನೇ ತರಗತಿಯಲ್ಲಿ ಪಬ್ಲಿಕ್‌ ಪರೀಕ್ಷೆ ಎದುರಿಸುವ ಮುನ್ನ 5 ಮತ್ತು 8ನೇ ತರಗತಿಯಲ್ಲಿ ಅವರ ಕಲಿಕಾ ಮಟ್ಟವನ್ನು ಮೌಲ್ಯಮಾಪನ ಮಾಡಲು ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

5, 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಪ್ರಸ್ತಾವನೆ ಕೈಬಿಡಲು ರುಪ್ಸಾ, ಎಐಡಿಎಸ್‌ಒ ಆಗ್ರಹ

ಆದರೆ, ಈ ಪರೀಕ್ಷೆಗಳು ಪಬ್ಲಿಕ್‌ ಪರೀಕ್ಷೆಗಳಾಗಿರುವುದಿಲ್ಲ. ಸಾಮಾನ್ಯ ಪರೀಕ್ಷೆಯಾಗಿರುತ್ತದೆ. ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ. ಬದಲಿಗೆ ಪರೀಕ್ಷೆ ಅಥವಾ ಮೌಲ್ಯಮಾಪನದಲ್ಲಿ ಯಾವುದೇ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿರುವುದು ಕಂಡು ಬಂದರೆ ಅಂತಹವರಿಗೆ ಕೆಲ ತಿಂಗಳು ಮತ್ತೆ ತರಗತಿ ನಡೆಸಿ ಅಥವಾ ತರಬೇತಿ ನೀಡಿ ಮತ್ತೊಮ್ಮೆ ಪರೀಕ್ಷೆ ಬರೆಸಲಾಗುತ್ತದೆ. ಆ ಮೂಲಕ ಅವರ ಕಲಿಕಾ ಮಟ್ಟಸುಧಾರಿಸಿ ಮುಂದಿನ ತರಗತಿಗೆ ಇತರೆ ವಿದ್ಯಾರ್ಥಿಗಳ ಜೊತೆಯಲ್ಲೇ ಕಳುಹಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಈ ಎರಡು ತರಗತಿ ಮಕ್ಕಳಿಗೆ ಈ ವರ್ಷದಿಂದಲೇ ಪರೀಕ್ಷೆ ಆರಂಭಿಸುವ ಚಿಂತನೆ ಇದೆ. ಪರೀಕ್ಷೆ ಹೇಗೆ ನಡೆಸಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದ್ದು ಶೀಘ್ರ ರೂಪರೇಷೆ ಸಿದ್ದಪಡಿಸಲಾಗುತ್ತದೆ ಎಂದರು.
 

Follow Us:
Download App:
  • android
  • ios