2025ರ ಎನ್‌ಎಂಎಮ್‌ಎಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ. 8ನೇ ತರಗತಿ ವಿದ್ಯಾರ್ಥಿಗಳಿಗೆ ₹12,000 ವಾರ್ಷಿಕ ವಿದ್ಯಾರ್ಥಿವೇತನ. ಅರ್ಹತಾ ಮಾನದಂಡ, ಪರೀಕ್ಷಾ ಮಾದರಿ ಮತ್ತು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಲ್ಲಿ ತಿಳಿಯಿರಿ.

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (Karnataka School Examination and Assessment Board - KSEAB) ರಾಷ್ಟ್ರೀಯ ಮಟ್ಟದಲ್ಲಿ ಜಾರಿಗೆ ಬರುವ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ಸ್ಕಾಲರ್‌ಶಿಪ್ (National Means-cum-Merit Scholarship - NMMS 2025) ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಪ್ರವೇಶ ಪರೀಕ್ಷೆ ಆಯೋಜಿಸಿದೆ. ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಕಾಲ ಪ್ರತಿ ವರ್ಷ ₹12,000 ಮೊತ್ತದ ಆರ್ಥಿಕ ನೆರವು ಒದಗಿಸಲಾಗುತ್ತದೆ.

ಯಾರು ಅರ್ಜಿ ಹಾಕಬಹುದು?

  • ಈ ಯೋಜನೆಯ ಉದ್ದೇಶ ಆರ್ಥಿಕವಾಗಿ ಹಿಂದುಳಿದ, ಆದರೆ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಉತ್ತೇಜಿಸುವುದಾಗಿದೆ.
  • ಪ್ರಸ್ತುತ ಶೈಕ್ಷಣಿಕ ವರ್ಷದ 8ನೇ ತರಗತಿಯಲ್ಲಿ ಸರ್ಕಾರಿ, ಅನುದಾನಿತ ಅಥವಾ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
  • ಖಾಸಗಿ ಶಾಲೆಗಳು, ಕೇಂದ್ರೀಯ ವಿದ್ಯಾಲಯ, ನವೋದಯ ಶಾಲೆ, ರಾಜ್ಯ/ಕೇಂದ್ರ ಸರ್ಕಾರ ನಡೆಸುವ ವಸತಿ ಶಾಲೆಗಳು ಹಾಗೂ ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿಗಳು ಅರ್ಹರಲ್ಲ.
  • ವಿದ್ಯಾರ್ಥಿಯ ಪಾಲಕರ ವಾರ್ಷಿಕ ಆದಾಯವು ₹3.50 ಲಕ್ಷ ಮೀರಬಾರದು.
  • 7ನೇ ತರಗತಿಯಲ್ಲಿ ಸಾಮಾನ್ಯ ವಿದ್ಯಾರ್ಥಿಗಳು ಕನಿಷ್ಠ 55% ಅಂಕಗಳು ಹಾಗೂ ಪರಿಶಿಷ್ಟ ವಿದ್ಯಾರ್ಥಿಗಳು 50% ಅಂಕಗಳು ಗಳಿಸಿರಬೇಕು.
  • ಐಟಿಐ ಮತ್ತು ಡಿಪ್ಲೊಮಾ ಅಭ್ಯಾಸ ಮಾಡುವವರನ್ನು ಈ ಯೋಜನೆಯಡಿಯಲ್ಲಿ ಪರಿಗಣಿಸಲಾಗುವುದಿಲ್ಲ.

ಪರೀಕ್ಷೆಯ ದಿನಾಂಕ ಮತ್ತು ಅರ್ಜಿ ಸಲ್ಲಿಕೆ

  • ಈ ವರ್ಷದ ಎನ್‌ಎಂಎಮ್‌ಎಸ್ ಪ್ರವೇಶ ಪರೀಕ್ಷೆ ಡಿಸೆಂಬರ್ 7, 2025ರಂದು ನಡೆಯಲಿದೆ.
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಅಕ್ಟೋಬರ್ 15, 2025 ಆಗಿದೆ.
  • ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ತಾಲೂಕು ಮಟ್ಟದಲ್ಲಿ ಪರೀಕ್ಷಾ ಕೇಂದ್ರಗಳನ್ನು ಸಿದ್ದಪಡಿಸಿದೆ.

ಪರೀಕ್ಷೆಯ ಮಾದರಿ

ಪರೀಕ್ಷೆಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ:

ಬೌದ್ಧಿಕ ಸಾಮರ್ಥ್ಯ ಪರೀಕ್ಷೆ (Mental Ability Test - MAT)

ಒಟ್ಟು 90 ಬಹು ಆಯ್ಕೆ ಪ್ರಶ್ನೆಗಳು.

ಪ್ರತಿ ಪ್ರಶ್ನೆಗೆ 1 ಅಂಕದಂತೆ 90 ಅಂಕಗಳು.

ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (Scholastic Ability Test - SAT)

ವಿಜ್ಞಾನ: 35 ಪ್ರಶ್ನೆಗಳು

ಸಮಾಜ ವಿಜ್ಞಾನ: 35 ಪ್ರಶ್ನೆಗಳು

ಗಣಿತ: 20 ಪ್ರಶ್ನೆಗಳು

ಒಟ್ಟು: 90 ಪ್ರಶ್ನೆಗಳು (90 ಅಂಕಗಳು)

ಆಯ್ಕೆ ಪ್ರಕ್ರಿಯೆ

  • ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಕನಿಷ್ಠ 40% ಅಂಕ ಹಾಗೂ ಪರಿಶಿಷ್ಟ ವರ್ಗದವರು 32% ಅಂಕಗಳನ್ನು ಗಳಿಸಬೇಕು.
  • ಪ್ರತಿ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ, ಮೀಸಲಾತಿ ಪ್ರಮಾಣ ಹಾಗೂ ಅರ್ಹತಾ ನಿಯಮಗಳ ಆಧಾರದ ಮೇಲೆ ಡಿಎಸ್‌ಇಆರ್‌ಟಿ (DSERT) ಅಂತಿಮ ಆಯ್ಕೆಯನ್ನು ನಡೆಸುತ್ತದೆ.
  • ಆಯ್ಕೆಯಾದ ವಿದ್ಯಾರ್ಥಿಗಳು ನಂತರ ಸ್ಕಾಲರ್‌ಶಿಪ್ ಪಡೆಯಲು ಪ್ರತ್ಯೇಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ವಿದ್ಯಾರ್ಥಿವೇತನದ ಮೊತ್ತ ಮತ್ತು ಷರತ್ತುಗಳು

  • ಆಯ್ಕೆಯಾದ ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದ 12ನೇ ತರಗತಿಯವರೆಗೆ ನಿರಂತರವಾಗಿ ಪ್ರತಿ ತಿಂಗಳು ₹1,000 (ವಾರ್ಷಿಕ ₹12,000) ಮೊತ್ತವನ್ನು ನೇರವಾಗಿ ವಿದ್ಯಾರ್ಥಿಯ ಖಾತೆಗೆ ವರ್ಗಾಯಿಸಲಾಗುತ್ತದೆ.
  • ವಿದ್ಯಾರ್ಥಿವೇತನವನ್ನು ಮುಂದುವರಿಸಲು ಕೆಲವು ಷರತ್ತುಗಳನ್ನು ಪಾಲಿಸಬೇಕಾಗುತ್ತದೆ:
  • 9ನೇ, 10ನೇ ಮತ್ತು 11ನೇ ತರಗತಿಗಳನ್ನು ಒಂದೇ ಯತ್ನದಲ್ಲಿ ಪಾಸಾಗಿರಬೇಕು.
  • 9ನೇ ಮತ್ತು 11ನೇ ತರಗತಿಯಲ್ಲಿ ಕನಿಷ್ಠ 55% ಅಂಕಗಳು (ಪರಿಶಿಷ್ಟರಿಗೆ ಸಡಿಲಿಕೆ ಅನ್ವಯಿಸುತ್ತದೆ).
  • ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಪರೀಕ್ಷೆಯಲ್ಲಿ ಕನಿಷ್ಠ 60% ಅಂಕಗಳು ಪಡೆಯಬೇಕು.

NMMS Scholarship 2025 ಯೋಜನೆ, ಆರ್ಥಿಕ ಅಸಮರ್ಥತೆಯಿಂದ ತಮ್ಮ ಪ್ರತಿಭೆಯನ್ನು ಮುಂದುವರಿಸಲಾಗದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವಾಗಿದೆ. ಈ ಯೋಜನೆ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ನಿರಂತರವಾಗಿ ಪ್ರೋತ್ಸಾಹಿಸಿ, ಅವರ ಭವಿಷ್ಯ ನಿರ್ಮಾಣಕ್ಕೆ ಸಹಕಾರಿಯಾಗಿದೆ.