Asianet Suvarna News Asianet Suvarna News

ಹಿಜಾಬ್ ವಿವಾದ ಭುಗಿಲೆದ್ದಿದ್ದ ಮಂಗಳೂರಿನ ಕಾಲೇಜಿನಲ್ಲಿ ಮತ್ತೊಂದು ವಿವಾದ!

ಹಿಜಾಬ್ ವಿವಾದ ಭುಗಿಲೆದ್ದಿದ್ದ ಮಂಗಳೂರಿನ ಕಾಲೇಜಿನಲ್ಲಿ ಮತ್ತೊಂದು ವಿವಾದ ಎದ್ದಿದ್ದು, ವಿವಾದದ ಮೂಲಕವೇ ಮಂಗಳೂರು ವಿವಿ ಕಾಲೇಜು ಮತ್ತೆ ಸುದ್ದಿಯಾಗಿದೆ.

NSUI upset with ABVP hosting a Hindu leader for program in Mangalore University College kannada news gow
Author
First Published Jun 22, 2023, 8:01 PM IST

ವರದಿ: ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್  

ಮಂಗಳೂರು (ಜೂ.22): ಹಿಜಾಬ್ ವಿವಾದ (Hijab controversy) ಭುಗಿಲೆದ್ದಿದ್ದ ಮಂಗಳೂರಿನ ಕಾಲೇಜಿನಲ್ಲಿ ಮತ್ತೊಂದು ವಿವಾದ ಎದ್ದಿದ್ದು, ವಿವಾದದ ಮೂಲಕವೇ ಮಂಗಳೂರು ವಿವಿ ಕಾಲೇಜು ಮತ್ತೆ ಸುದ್ದಿಯಾಗಿದೆ. ವಿವಿ ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯ ನೀಡಿದ್ದರ ಬಗ್ಗೆ ಅಪಸ್ವರ ಕೇಳಿಬಂದಿದ್ದು, ವಿವಾದದ ಬೆನ್ನಲ್ಲೇ ಕಾಲೇಜು ಆಡಳಿತ ಕಾರ್ಯಕ್ರಮ ರದ್ದು ಮಾಡಿದೆ.

ಮಂಗಳೂರಿನ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ‌ ಜೂ.23 ರಂದು ಪ್ರತಿಭಾ ದಿನಾಚರಣೆ ಹಾಗೂ ಜೂ.24ರಂದು ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ನಾಳಿನ ಪ್ರತಿಭಾ ದಿನಾಚರಣೆ ಕಾರ್ಯಕ್ರಮಕ್ಕೆ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮುಖ್ಯ ಅತಿಥಿಯಾಗಿ ಆಗಮಿಸುವವರಿದ್ದರು. ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿದೆ ಎನ್ನಲಾಗಿದ್ದು, ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಿದ್ದಕ್ಕೆ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ.

9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಶಿಕ್ಷಣ ಸಚಿವರ

ಕಾಲೇಜಿನಲ್ಲಿ ಕೋಮು ವಿಷಬೀಜ ಬಿತ್ತಲು ಯತ್ನ ಅಂತ ಆರೋಪಿಸಿದೆ. ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಅಂತ ಎಬಿವಿಪಿಗೆ ಎಚ್ಚರಿಕೆ ನೀಡಿದೆ. ಅಲ್ಲದೇ ಮಂಗಳೂರು ಕಮಿಷನರ್ ಹಾಗೂ ಕಾಲೇಜು ಪ್ರಾಂಶುಪಾಲರಿಗೂ ಎನ್ಎಸ್ ಯುಐ ದೂರು ನೀಡಿದ್ದು, ಶ್ರೀಕಾಂತ್ ಶೆಟ್ಟಿ ಅತಿಥಿಯಾದ್ರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿತ್ತು. ಈ ಹಿಂದೆ ಹಿಜಾಬ್ ವಿವಾದ, ಸಾವರ್ಕರ್ ಭಾವಚಿತ್ರ ಹಾಗೂ ಭಗವಾಧ್ಬಜ ಹಿಡಿದ ಭಾರತ್ ಮಾತೆ ಪೂಜನಾ ಕಾರಣದಿಂದ ವಿವಾದಕ್ಕೆ ಕಾರಣವಾಗಿದ್ದ ಕಾಲೇಜು ಇದಾಗಿದೆ. 

ವಿವಾದದ ಬೆನ್ನಲ್ಲೇ ಕಾರ್ಯಕ್ರಮ ಮುಂದೂಡಿಕೆ!
ಇದೀಗ ಕೊನೆಗೂ ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಆಡಳಿತ ಕಾರ್ಯಕ್ರಮ ಮುಂದೂಡಿದೆ. ನಾಳೆ ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಹಾಗೂ ಶನಿವಾರದ ಕಾಲೇಜು ವಾರ್ಷಿಕೋತ್ಸವ ಮುಂದೂಡಿಕೆ ಮಾಡಿದೆ. ನಾಳೆ ಎಂದಿನಂತೆ ತರಗತಿ ನಡೆಯಲಿದೆ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಇದಕ್ಕೂ ಮೊದಲು ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನಿಯೋಗ ಮಂಗಳೂರು ಕಮಿಷನರ್ ಭೇಟಿಯಾಗಿ ಮನವಿ ಸಲ್ಲಿಸಿತ್ತು.

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: 1, 2ನೇ ಕ್ಲಾಸ್‌ ಮಕ್ಕಳ ಬ್ಯಾಗ್‌ ತೂಕ 2 ಕೆಜಿ, ಸರ್ಕಾರದ ಸುತ್ತೋಲೆ

ಕೋಮು ಭಾವನೆ ಕೆರಳಿಸುವ ವ್ಯಕ್ತಿಗಳಿಗೆ ಸರ್ಕಾರಿ ಕಾಲೇಜು ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಕೋಮು ಭಾವನೆ ಕೆರಳಿಸುವ ಕಾರ್ಯ ಇವರಿಂದ ಆಗುತ್ತದೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತರಲಾಗಿದೆ ಎಂದಿತ್ತು.‌ ಆದರೆ ಕಾಲೇಜು ಆಡಳಿತ ಕಾರ್ಯಕ್ರಮ ಮುಂದೂಡಿದೆ. ಈ ಮಧ್ಯೆ ಎಬಿವಿಪಿ ಮತ್ತು ಕಾಲೇಜು ಸಂಘದ ಮುಖಂಡರು ಅತಿಥಿ ಬದಲಾವಣೆ ಮಾಡಲ್ಲ ಅಂತ ಪಟ್ಟು ಹಿಡಿದಿದ್ದು, ನಾಳೆ ಕಾರ್ಯಕ್ರಮ ನಡೆಯದಿದ್ದರೂ ಮುಂದಿನ ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿಯನ್ನೇ ಅತಿಥಿ ಮಾಡುವಂತೆ ಪಟ್ಟು ಹಿಡಿದಿದ್ದಾರೆ.

Follow Us:
Download App:
  • android
  • ios