Doctors Compulsory Rural Service: ವೈದ್ಯಕೀಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ, ಸರಕಾರಕ್ಕೆ ಹೈಕೋರ್ಟ್ ನೋಟಿಸ್

ವೈದ್ಯಕೀಯ ಕೋರ್ಸ್ ಕಾಯಿದೆ ಅಡಿ ಶಿಕ್ಷಣ ಪೂರೈಸಿರುವ ಸ್ನಾತಕೋತ್ತರ ಪದವೀಧರರು ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ಸೇವೆ ಮಾಡುವುದನ್ನು ಕಡ್ಡಾಯ ಎಂದಿರುವ ರಾಜ್ಯ ಉಚ್ಚ ನ್ಯಾಯಾಲಯ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ನೀಡಿದೆ.

one Year Compulsory Rural Service Challenged Karnataka High Court notice to government gow

ಬೆಂಗಳೂರು(ಜ.16): ವೈದ್ಯಕೀಯ ಕೋರ್ಸ್ ಕಾಯಿದೆ (Medical Course Act) ಅಡಿ ಶಿಕ್ಷಣ ಪೂರೈಸಿರುವ ಸ್ನಾತಕೋತ್ತರ ಪದವೀಧರರು ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ಸೇವೆ ಮಾಡುವುದನ್ನು ಕಡ್ಡಾಯಗೊಳಿಸಿರುವ ಕರ್ನಾಟಕ ಕಡ್ಡಾಯ ಸೇವೆ ತರಬೇತಿಯ ಸೆಕ್ಷನ್ 4 ಅನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮನವಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಬುಧವಾರ ಕರ್ನಾಟಕ ಹೈಕೋರ್ಟ್ (Karnataka High Court) ನೋಟಿಸ್ ಜಾರಿ ಮಾಡಿದೆ.

ಡಾ. ಕೀರ್ತಿ ಕರ್ನೂಲ್ (Dr. Keerthi Kurnool) ಮತ್ತು ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಸದರಿ ವಿಚಾರಕ್ಕೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳ ಜೊತೆ ಈ ಪ್ರಕರಣವನ್ನು ಸೇರಿಸಬೇಕು. ರಾಜ್ಯ ಸರ್ಕಾರದ ಸೂಚನೆ ಪಡೆದು ಆಕ್ಷೇಪಣೆ ಸಲ್ಲಿಸಬೇಕು” ಎಂದು ಹೇಳಿ ವಿಚಾರಣೆಯನ್ನು ಫೆಬ್ರವರಿ 22ಕ್ಕೆ ಮುಂದೂಡಿದೆ.

“ಅರ್ಜಿದಾರರು ಸ್ನಾತಕೋತ್ತರ ಪದವೀಧರ ವೈದ್ಯರಾಗಿದ್ದು ಅವರು 2018-19 ಮತ್ತು 2019-20ರಲ್ಲಿ ಪ್ರತಿವಾದಿ ಕಾಲೇಜುಗಳಲ್ಲಿ ಶಿಕ್ಷಣ ಪೂರೈಸಿದ್ದಾರೆ. ವೈದ್ಯಕೀಯ ಕೌನ್ಸೆಲಿಂಗ್ ಸಮಿತಿಯು ಮಾಹಿತಿ ಪಟ್ಟಿಯಲ್ಲಿ ಕೆಸಿಎಸ್ ಕಾಯಿದೆ ಅಡಿ ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು ಎಂದು ಉಲ್ಲೇಖಿಸಿರಲಿಲ್ಲ. ಹೀಗಾಗಿ, ಕಡ್ಡಾಯವಾಗಿ ಗ್ರಾಮೀಣ ಸೇವೆ ಮಾಡಬೇಕು ಎಂಬುದರಿಂದ ತಮಗೆ ವಿನಾಯಿತಿ ನೀಡಬೇಕು” ಎಂದು ಅರ್ಜಿದಾರರ ಪರ ವಕೀಲರು ಕೋರಿದರು.

ಆಡಳಿತ ಯಂತ್ರ ಕುಸಿಯುವ ಆತಂಕ, ಶಿಕ್ಷಣ ಇಲಾಖೆಯಿಂದ ಸಿ ದರ್ಜೆ ನೌಕರರಿಗೆ 100 ಅಂಕಗಳ ಕಾರ್ಯಕ್ಷಮತೆ ಪರೀಕ್ಷೆ ಕಡ್ಡಾಯ

“2021ರ ಆಗಸ್ಟ್ 21ರಂದು ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದ್ದು, ಡೀಮ್ಡ್ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ವರ್ಷ ಗ್ರಾಮೀಣ ಸೇವೆ ಮಾಡಬೇಕು ಎಂದು ಕೆಸಿಎಸ್ ಕಾಯಿದೆಯಲ್ಲಿ ಹೇಳಿದೆ. ಆದರೆ, ಈ ಕುರಿತು ಎಂಸಿಸಿ ಅಥವಾ ರಾಜ್ಯ ಸರ್ಕಾರವು ಪ್ರವೇಶ ಪಡೆಯುವುದಕ್ಕೂ ಮುನ್ನ ಈ ಕುರಿತು ಮಾಹಿತಿ ನೀಡಿಲ್ಲ. ಹೀಗಾಗಿ, ತಮಗೆ ಗ್ರಾಮೀಣ ಸೇವೆ ಕಡ್ಡಾಯ ಮಾಡಿರುವುದರಿಂದ ವಿನಾಯಿತಿ ನೀಡಬೇಕು” ಎಂದು ಮನವಿ ಮಾಡಲಾಗಿದೆ.

Guest Lecturer ಸಂಕ್ರಾಂತಿ ಕೊಡುಗೆ ಶುದ್ಧ ಸುಳ್ಳು, ಸರ್ಕಾರದ ತೀರ್ಮಾನಕ್ಕೆ ಅತಿಥಿ ಉಪನ್ಯಾಸಕರ ಆಕ್ರೋಶ

ಗ್ರಾಮೀಣ ಸೇವೆ ಈ ಹಿಂದೆಯೂ ಕಡ್ಡಾಯವೇ ಆಗಿದ್ದರೂ ದಂಡ ತೆತ್ತು ಗ್ರಾಮೀಣ ಸೇವೆ ತಪ್ಪಿಸಿಕೊಳ್ಳಬಹುದಿತ್ತು. 2011ರ ತನಕ ದಂಡ ಮೊತ್ತ ತಲಾ ಒಂದು ಲಕ್ಷ ರೂ. ಇತ್ತು. ಮುಂದೆ ಅದನ್ನು 25 ಲಕ್ಷ ರೂ.ವರೆಗೆ ಏರಿಸಲಾಗಿತ್ತು. ಭಾರೀ ಪ್ರಮಾಣದ ದಂಡವನ್ನು ಪಾವತಿಸಿಯೂ ಅಭ್ಯರ್ಥಿಗಳು ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಳ್ಳುತ್ತಿದ್ದರು. ಹೀಗಾಗಿ 2015ರಲ್ಲಿ ಗ್ರಾಮೀಣ ಕಡ್ಡಾಯ ಸೇವೆ ಕಾಯಿದೆ ಜಾರಿಗೆ ತರಲಾಗಿತ್ತು.

SWAYAM Aircraft Courses: ವಿಮಾನದ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಇಚ್ಚಿಸುವವರಿಗೆ ಸ್ವಯಂ ಆನ್‌ಲೈನ್ ಕೋರ್ಸ್

ಇದಾದ ನಂತರ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳಲ್ಲಿ 2016-17 ಹಾಗೂ 2017-18ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಪಡೆದುಕೊಂಡ ಅಭ್ಯರ್ಥಿಗಳಿಗೆ ಗ್ರಾಮೀಣ ಕಡ್ಡಾಯ ಸೇವೆ ಅನ್ವಯಿಸುವುದಿಲ್ಲ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿತ್ತು. ಆದರೆ 2018-19 ಹಾಗೂ ನಂತರದಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ಪಡೆದು ಒಂದು ವರ್ಷದ ಸರಕಾರಿ ಮತ್ತು ಗ್ರಾಮೀಣ ಸೇವೆಗಳಿಗೆ ಬಾಂಡ್ ಬರೆದು ಕೊಡುವ ಅಭ್ಯರ್ಥಿಗಳಿಗೆ "ಕಡ್ಡಾಯ ಸೇವಾ ಅಧಿನಿಯಮ-2012" ಅನ್ವಯವಾಗಲಿದೆ ಎಂದು 2021ರ ಎಪ್ರಿಲ್‌ನಲ್ಲಿ  ಹೈಕೋರ್ಟ್ ಸ್ಪಷ್ಟಪಡಿಸಿತ್ತು.

NVS Recruitment 2022: ಬರೋಬ್ಬರಿ 1925 ಹುದ್ದೆಗಳ ಭರ್ತಿಗೆ ಮುಂದಾದ ನವೋದಯ ವಿದ್ಯಾಲಯ ಸಮಿತಿ

Latest Videos
Follow Us:
Download App:
  • android
  • ios