Asianet Suvarna News Asianet Suvarna News

ಬಿ.ಎ, ಬಿ.ಕಾಂ, ಬಿಎಸ್ಸಿ, ಬಿ.ಸಿ.ಎ ವಿದ್ಯಾರ್ಥಿಗಳಿಗೆ ಫ್ರೀ ಟ್ರೈನಿಂಗ್

ಬಿ.ಎ, ಬಿ.ಕಾಂ, ಬಿಎಸ್ಸಿ, ಬಿ.ಸಿ.ಎ ರೆಗ್ಯೂಲರ್ ಕ್ಲಾಸ್ ಪಡೆದ ಆಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

Online Training For BA Bcom BSC BCA Students
Author
Bengaluru, First Published Sep 5, 2020, 4:00 PM IST
  • Facebook
  • Twitter
  • Whatsapp

ಮೈಸೂರು, (ಸೆ.05) : ಟಾಟಾ ಕನ್ಸಲ್ಟೇಸ್ಸಿ ಸರ್ವಿಸ್ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಷ ಪಂಗಡ ಹಾಗೂ ಆರ್ಥಿಕವಾಗಿ ಹಿಂದೂಳಿದ ಅಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಟಿಸಿಎಸ್ ಯುಥ್ ಎಂಪ್ಲಾಯ್‍ಬ್ಲೀಟಿ ಟ್ರೈನಿಂಗ್ ಪ್ರೋಗ್ರಾಂ ಮೂಲಕ ಬಿ.ಎ, ಬಿ.ಕಾಂ, ಬಿಎಸ್ಸಿ, ಬಿ.ಸಿ.ಎ ರೆಗ್ಯೂಲರ್ ಕ್ಲಾಸ್ ಪಡೆದ ಆಭ್ಯರ್ಥಿಗಳಿಗೆ ಉಚಿತವಾಗಿ Virtual Instructor Led Training And Self Lerning Interventions (Online-Training ) ತರಬೇತಿಯನ್ನು ನೀಡಲಾಗುತ್ತದೆ.

ಸಿಹಿ ಸುದ್ದಿ: ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ

ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಕಾರ್ಪೋರೇಟ್ ಜಗತ್ತಿನಲ್ಲಿ ಈ ಪ್ರಮಾಣ ಪತ್ರವು ಮಾನ್ಯತೆ ಹೊಂದಿದ್ದು, ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗಲಿದೆ.

ಈ ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9900575685 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ:- 0821-2489972 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios