Asianet Suvarna News Asianet Suvarna News

5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ಮುಂದೂಡುವಂತೆ ಹೈಕೋರ್ಟ್ ಗೆ ಮತ್ತೆ ಅರ್ಜಿ!

ಮಾ. 27 ರಿಂದ  ಐದು ಮತ್ತು ಎಂಟನೇ ತರಗತಿ  ಬೋರ್ಡ್ ಪರೀಕ್ಷೆ ಮಾಡುವಂತೆ ಆದೇಶಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠದ ನಿರ್ಧಾರವನ್ನು  ಮುಂದೂಡುವಂತೆ ಮತ್ತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

Petition again in High Court for postponement of board examination for 5th and 8th class gow
Author
First Published Mar 21, 2023, 7:01 PM IST

ಬೆಂಗಳೂರು (ಮಾ.21): ರಾಜ್ಯ ಪಠ್ಯಕ್ರಮವಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಮುಂದಿನ ವಿಚಾರಣೆಯನ್ನು ಮಾರ್ಚ್‌ 27 ಕ್ಕೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಇದರ ಬೆನ್ನಲ್ಲೇ ಮಾ. 27 ರಿಂದ ಪರೀಕ್ಷೆ ನಿಗದಿ ಮಾಡುವಂತೆ ಆದೇಶಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠದ ನಿರ್ಧಾರವನ್ನು  ಮುಂದೂಡುವಂತೆ ಮತ್ತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ದಿನವೇ ಪರೀಕ್ಷೆ ಆರಂಭ ಆಗಬೇಕಿರುವ ಹಿನ್ನೆಲೆಯಲ್ಲಿ ಕುಸ್ಮಾ( ಖಾಸಗಿ ಶಾಲೆಗಳ ಸಂಘ)ದಿಂದ‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಒಂದು ವಾರಗಳ‌ ಕಾಲ ಪರೀಕ್ಷೆ ದಿನಾಂಕ ಮುಂದೂಡುವಂತೆ ಮುಖ್ಯ ನ್ಯಾಯಮೂರ್ತಿ ಪೀಠದಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಈ ವೇಳೆ ಹೈಕೋರ್ಟ್ ರಿಜಿಸ್ಟ್ರಾರ್ ಗೆ ಮನವಿ‌ ಸಲ್ಲಿಸಲು ಸಿಜೆ‌ ಪೀಠ ಸೂಚನೆ‌ ನೀಡಿದೆ. ಹೀಗಾಗಿ  ಕುಸ್ಮಾ ವತಿಯಿಂದ ರಿಜಿಸ್ಟ್ರಾರ್ ಗೆ ಮನವಿ‌ ಸಲ್ಲಿಕೆಯಾಗಿದೆ. ಈ ಬಗ್ಗೆ ಗುರುವಾರ ವಿಶೇಷ ಪೀಠ ರಚನೆ‌ ಬಗ್ಗೆ‌ ನಿರ್ಧಾರ ಸಾಧ್ಯತೆ ಇದೆ. ಪರೀಕ್ಷೆ ಒಂದು ವಾರಗಳ ಮುಂದೂಡಿಕೆ ಮನವಿ‌ ಬಗ್ಗೆ ನಿರ್ಧಾರ ಆಗುವ ಸಾಧ್ಯತೆ ಇದೆ.

5 ಮತ್ತು 8 ತರಗತಿಗಳಿಗೆ ಬೋರ್ಡ್ ಪರೀಕ್ಷೆ ವಿಚಾರಣೆ ಮಾ.27ಕ್ಕೆ ಮುಂದೂಡಿದ ಸುಪ್ರೀಂ

ರಾಜ್ಯ ಪಠ್ಯಕ್ರಮವಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಹಸಿರು ನಿಶಾನೆ ತೋರಿತ್ತು. ಮಾ.27ರಿಂದ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದ ಶಾಲೆಗಳ 5 ಮತ್ತು 8ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್‌) ಪರೀಕ್ಷೆ ನಡೆಸಲು ತೀರ್ಮಾನಿಸಿ ಹೊರಡಿಸಲಾಗಿದ್ದ ಸುತ್ತೋಲೆಯನ್ನು ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ ರದ್ದುಪಡಿಸಿತ್ತು.

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪರೀಕ್ಷೆ ವೇಳೆ ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣ

ಈ ತೀರ್ಪು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್‌ ಅವರ ನೇತೃತ್ವದ ವಿಭಾಗೀಯ ಪೀಠ ಬುಧವಾರ ಮಧ್ಯಂತರ  ಆದೇಶ  ಹೊರಡಿಸಿ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು.  ಅದರಂತೆ ಸರ್ಕಾರವು ಮಾ.27ರಿಂದ ಪರೀಕ್ಷೆ ನಡೆಸಲು ತಿಳಿಸಿತ್ತು. ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯೇತರವಾದ ಯಾವುದೇ ಪ್ರಶ್ನೆಗಳು ಇರದಂತೆ ಸರ್ಕಾರ ನೋಡಿಕೊಳ್ಳಬೇಕು. ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿಯನ್ನೂ ಅನುತ್ತೀರ್ಣಗೊಳಿಸುವಂತಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಸೂಚಿಸಿತ್ತು.  

Follow Us:
Download App:
  • android
  • ios