Asianet Suvarna News Asianet Suvarna News

ಆನ್ ಲೈನ್ ಮೂಲಕವೇ ಪದವಿ ಪ್ರವೇಶ ಪ್ರಕ್ರಿಯೆ, ಸಚಿವ ಡಾ‌. ಅಶ್ವಥ್ ನಾರಾಯಣ

* ಶಾಲಾ ಕಾಲೇಜುಗಳ ಪುನರಾರಂಭಕ್ಕೆ ಸರ್ಕಾರ ಒತ್ತಾಸೆ
* ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾವಕಾಶ
* ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಮಾಧ್ಯಮ ಪ್ರಕಟಣೆ

pg degree colleges admission to start through online says dr cn Ashwath Narayan rbj
Author
Bengaluru, First Published Jun 13, 2022, 8:44 PM IST

ಬೆಂಗಳೂರು, (ಜೂನ್.13):  ಮಹಾಮಾರಿ ಕೊರೋನಾ ಕಾಟಕೊಟ್ಟಿದ್ದು, ಅಷ್ಟಿಷ್ಟಲ್ಲ. ಕಳೆದೆರಡು ವರ್ಷಗಳಿಂದ ಶಿಕ್ಷಣ ಕ್ಷೇತ್ರ ಸೆರಿದಂತೆ ಹಲವು ಕ್ಷೇತ್ರಗಳನ್ನು ಕಟ್ಟಿಕಾಡಿದೆ. ಇದರಿಂದ ಕ್ಷೇತ್ರಗಳು ಎಲ್ಲಾ ರೀತಿಯಿಂದಲೂ ನಷ್ಟ ಅನುಭಿಸಿವೆ.

ಇದೀಗ ಕೊರೋನಾ ಕಡಿಮೆಯಾಗಿದ್ದು, ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳತ್ತ ಹೆಜ್ಜೆಹಾಕಲು ಹಾತೊರೆಯುತ್ತಿದ್ದಾರೆ. ಇನ್ನು  ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾವಕಾಶ ಕಲ್ಪಿಸಿದೆ.

ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ (Dr CN Ashwath Narayan) ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, 2022-23ನೇ ಸಾಲಿನ ಪದವಿ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಆದರೆ ಸದ್ಯಕ್ಕೆ ಆನ್ ಲೈನ್ ಮೂಲಕವೇ ಪ್ರವೇಶ ಪ್ರಕ್ರಿಯೆ (online admission) ನಡೆಸುವಂತೆ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಏಳು ಡಿಜಿಟಲ್‌ ವಿವಿ ಸ್ಥಾಪನೆಗೆ ನಿರ್ಧಾರ: ಸಿಎಂ ಬೊಮ್ಮಾಯಿ

ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಿಗೆ ಆನ್ ಲೈನ್ ಪ್ರವೇಶಕ್ಕೆ ಕಾಲೇಜು ಶಿಕ್ಷಣ ಇಲಾಖೆ, ವಿವಿಗಳು ಮತ್ತು ಕಾಲೇಜುಗಳು ಸಜ್ಜುಗೊಂಡಿವೆ. ಕಾಲೇಜು ಶಿಕ್ಷಣ ಇಲಾಖೆ, ವಿ.ವಿ.ಗಳು ಮತ್ತು ವಿವಿ ಕಾಲೇಜುಗಳು ಇದಕ್ಕಾಗಿ https://uucms.karnataka.gov.in/ ವಿಳಾಸವನ್ನು ತಮ್ಮ ವೆಬ್ ಸೈಟುಗಳಲ್ಲಿ ಲಿಂಕ್ ಮಾಡಿ, ಲಭ್ಯವಾಗುವಂತೆ ಮಾಡಬೇಕು. ಜತೆಗೆ ಎಲ್ಲ ಕಾಲೇಜುಗಳೂ ಪ್ರವೇಶಾತಿಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್ ಸೈಟ್ ಗಳಲ್ಲಿ ಪ್ರಕಟಿಸಬೇಕೆಂದು‌ ಉನ್ನತ ಶಿಕ್ಷಣ ಸಚಿವ ಅಶ್ವಥ ನಾರಾಯಣ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Follow Us:
Download App:
  • android
  • ios