Asianet Suvarna News Asianet Suvarna News

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ: ಅಶ್ವತ್ಥ್ ನಾರಾಯಣ

* ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪಠ್ಯೇತರ ಚಟುವಟಿಕೆ ಕಡ್ಡಾಯ
* ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ ಮಾಹಿತಿ
* ಕನ್ನಡಿಗರು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಬಾರದು ಎಂದ ಅಶ್ವತ್ಥ್ ನಾರಾಯಣ

physical education mandatory In NEP Says Ashwath narayan rbj
Author
Bengaluru, First Published Nov 13, 2021, 7:32 PM IST
  • Facebook
  • Twitter
  • Whatsapp

ಬೆಂಗಳೂರು, (ನ.13): ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (National Education Policy 2020)ಪಠ್ಯೇತರ ಚಟುವಟಿಕೆ ಕಡ್ಡಾಯ ಆಗಿದೆ. ಎನ್​ಇಪಿಯಲ್ಲಿ ಸಾಂಸ್ಕೃತಿಕ ಶಿಕ್ಷಣ, ದೈಹಿಕ ಶಿಕ್ಷಣ(Physical Education), ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಲಾಗುವುದು ಎಂದು ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ (Dr CN Ashwath Narayan) ಹೇಳಿದ್ದಾರೆ.

 ಬೆಂಗಳೂರಿನಲ್ಲಿ ಇಂದು (ನವೆಂಬರ್ 13)  ಮಲ್ಲೇಶ್ವರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಸರ್ಕಾರಿ ಕಾಲೇಜಿನಲ್ಲಿರುವ ವ್ಯವಸ್ಥೆ ಖಾಸಗಿ ವಿವಿಗಳಲ್ಲೂ ಇಲ್ಲ. ಇಡೀ ಭಾರತ ದೇಶವೇ ಬೆಂಗಳೂರಿನಲ್ಲಿ ತಿರುಗಿ ನೋಡುತ್ತಿದೆ. ತಂತ್ರಜ್ಞಾನ, ಆವಿಷ್ಕಾರ ಕ್ಷೇತ್ರದಲ್ಲಿ ಬೆಂಗಳೂರು 23ನೇ ಸ್ಥಾನದಲ್ಲಿ ಇದೆ ಎಂದು ತಿಳಿಸಿದರು.

ಪೋಷಕರಿಗೆ ಗುಡ್‌ ನ್ಯೂಸ್: ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಖಾಸಗಿ ಶಾಲೆಗಳಿಗೆ ಸರ್ಕಾರ ಆದೇಶ

ಕನ್ನಡಿಗರು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಬಾರದು. ವಿಶ್ವದ ಮೂಲೆಮೂಲೆಗಳಲ್ಲೂ ಕನ್ನಡಿಗ ಸಾಧಕರಿದ್ದಾರೆ. ವಿದ್ಯಾರ್ಥಿಗಳು ಇಂಥವರನ್ನು ನೋಡಿ ಪ್ರೇರೇಪಿತರಾಗಬೇಕು. ನಮ್ಮ ನಾಡು-ನುಡಿ ಚೆನ್ನಾಗಿರಬೇಕೆಂದರೆ ಕನ್ನಡಿಗರು ಸದೃಢವಾಗಿ ಬೆಳೆಯಬೇಕು ಎಂದರು.

ಎಇಪಿಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ವಿಕಸನದ ಗುರಿ ಇಟ್ಟುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಕಾಲೇಜುಗಳ ಸಂಪೂರ್ಣ ಡಿಜಿಟಲೀಕರಣವನ್ನು ಮಾಡಿದ್ದು, ಈ ವಿಚಾರದಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಬೋಧನಾ ವ್ಯವಸ್ಥೆಯ ಡಿಜಿಟಲೀಕರಣದಿಂದ ಶಿಕ್ಷಣದ ಗುಣಮಟ್ಟ ಸಾಕಷ್ಟು ಸುಧಾರಿಸಲಿದೆ ಎಂದು ಹೇಳಿದರು.

ಸರ್ಕಾರಿ ಕಾಲೇಜುಗಳಲ್ಲಿ ಇರುವಂತಹ ಆಧುನಿಕ ವ್ಯವಸ್ಥೆಗಳು ರಾಜ್ಯದ ಖಾಸಗಿ ವಿ.ವಿ.ಗಳಲ್ಲೂ ಇಲ್ಲ. ಇವತ್ತು ಇಡೀ ಭಾರತವೇ ಬೆಂಗಳೂರಿನತ್ತ ನೋಡುತ್ತಿದ್ದು, ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ರಾಜ್ಯದ ರಾಜಧಾನಿಯು 23ನೇ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ಭಾರತದ ಬೇರೆ ಯಾವ ನಗರಗಳೂ ಇಲ್ಲ ಎಂದು ಅವರು ಉಲ್ಲೇಖಿಸಿದರು.

ಬೆಂಗಳೂರು ಇವತ್ತು ಸುವರ್ಣಾವಕಾಶಗಳ ನಗರವಾಗಿದೆ. ವಿದ್ಯಾರ್ಥಿಗಳು ಕೇವಲ ಅದೃಷ್ಟವನ್ನು ನಂಬಿ ಕೂರದೇ, ಶ್ರಮ ವಹಿಸಿ ಸಾಧನೆ ಮಾಡಿ, ಇರುವ ಅವಕಾಶಗಳನ್ನು ತಮ್ಮದನ್ನಾಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ನಿರೂಪಕಿ ಅಪರ್ಣಾ, ಪ್ರಾಂಶುಪಾಲರಾದ ಡಾ.ಡಿ.ಎಸ್. ಪ್ರತಿಭಾ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರತ್ನಾಕರ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಎಸ್.ಕೌಸಲ್ಯಾ ಮುಂತಾದವರು ಉಪಸ್ಥಿತರಿದ್ದರು.

ಕನ್ನಡ ಮಾಧ್ಯಮದಲ್ಲಿ ಎಂಜನಿಯರಿಂಗ್‌(Engineering) ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಭರವಸೆ ನೀಡಿದ್ದು, ಪದವಿಯಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯದ ಬಗ್ಗೆ ಕಾನೂನಾತ್ಮಕ ಹೋರಾಟ ಜಾರಿಯಲ್ಲಿದೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹದು.

ಇನ್ನು ಎನ್ಇಪಿ ಆಶಯದಂತೆ ಶಿಕ್ಷಣವನ್ನು ಅಂತಾರಾಷ್ಟ್ರೀಕರಣ ಗೊಳಿಸುವ ನಿಟ್ಟಿನಲ್ಲಿ ಅಮೆರಿಕದ ಮಾಂಟ್ಗೊಮೆರಿ ಕೌಂಟಿ ಕಮ್ಯುನಿಟಿ ಕಾಲೇಜಿನೊಂದಿಗೆ ರಾಜ್ಯದ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಕ್ಕೆ (ಟ್ವಿನ್ನಿಂಗ್) ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಈಗಾಗಲೇ ಚಾಲನೆ ನೀಡಿದ್ದಾರೆ.  

Follow Us:
Download App:
  • android
  • ios