ನವದೆಹಲಿ (ಫೆ.19): ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷ 9-12ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಂವಾದಿಸುವ ‘ಪರೀಕ್ಷಾ ಪೇ ಚರ್ಚಾ’ ಕಾರ‍್ಯಕ್ರಮ ಕೊರೋನಾ ಹಿನ್ನೆಲೆಯಲ್ಲಿ ಈ ವರ್ಷ ಮಾರ್ಚಲ್ಲಿ ಆನ್‌ಲೈನ್‌ ಮೂಲಕ ನಡೆಯಲಿದೆ.

 ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ‘ಪರೀಕ್ಷಾ ಪೇ ಚರ್ಚಾ ಕಾರ‍್ಯಕ್ರಮ ಮತ್ತೆ ಬಂದಿದೆ. ಆದರೆ ಈ ಬಾರಿ ಸಂಪೂರ್ಣವಾಗಿ ಆನ್‌ಲೈನ್‌ ಮೂಲಕ ನಡೆಯಲಿದೆ. 

ವಿದ್ಯಾರ್ಥಿಗಳಿಗೆ ಸಿಗಲಿದೆ ಅತ್ಯಾಧುನಿಕ ಟ್ಯಾಬ್‌..! ..

ಈ ಮೂಲಕ ಜಗತ್ತಿನಾದ್ಯಂತ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ಬನ್ನಿ, ಭಯ ಇಲ್ಲದೆ, ನಗುವಿನಿಂದ ಪರೀಕ್ಷೆಯನ್ನು ಎದುರಿಸೋಣ’ ಎಂದು ತಿಳಿಸಿದ್ದಾರೆ. ಜೊತೆಗೆ ಈ ಬಾರಿ ಪರೀಕ್ಷಾ ಪೇ ಚರ್ಚಾ ಕಾರ‍್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರೂ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.