ಕರ್ನಾಟಕದಲ್ಲಿ ಶಿಕ್ಷಣ ಕ್ರಾಂತಿಗೆ ಮುನ್ನುಡಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ನಗರ ಪ್ರದೇಶಗಳಿಗೆ ಶಿಕ್ಷಣಕ್ಕಾಗಿ ವಲಸೆ ಹೋಗುವುದು ತಪ್ಪಬೇಕು. ಪ್ರತಿ ಪಂಚಾಯಿತಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಸಿಗಬೇಕು. ಇದಕ್ಕಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಕಟ್ಟಬೇಕು ಎಂಬುದು ನನ್ನ ಕನಸಾಗಿದೆ. ಆದಷ್ಟು ಬೇಗ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಕಾರ್ಯಗತ ಮಾಡಲಿದ್ದೇವೆ. ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸುವುದಾಗಿ ಹೇಳಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

Prelude to Education Revolution in Karnataka says DCM DK Shivakumar grg

ರಾಮನಗರ(ಅ.07):  ರಾಜ್ಯದಲ್ಲಿ 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಕುದೂರಿನ ಕೆಪಿಎಸ್ ಶಾಲಾ ರಂಗಮಂದಿರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಹಕ್ಕು ಪತ್ರಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಅವರು, ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪಿಸಿ ಆ ಮೂಲಕ ಶಿಕ್ಷಣ ಕ್ರಾಂತಿ ಮಾಡಲು ನಾಡಪ್ರಭು ಕೆಂಪೇಗೌಡರ ನೆಲವಾದ ಮಾಗಡಿಯಲ್ಲಿ ಚಾಲನೆ ದೊರೆತಿದೆ ಎಂದರು.

ನಗರ ಪ್ರದೇಶಗಳಿಗೆ ಶಿಕ್ಷಣಕ್ಕಾಗಿ ವಲಸೆ ಹೋಗುವುದು ತಪ್ಪಬೇಕು. ಪ್ರತಿ ಪಂಚಾಯಿತಿಯಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಸಿಗಬೇಕು. ಇದಕ್ಕಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಕಟ್ಟಬೇಕು ಎಂಬುದು ನನ್ನ ಕನಸಾಗಿದೆ. ಆದಷ್ಟು ಬೇಗ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಕಾರ್ಯಗತ ಮಾಡಲಿದ್ದೇವೆ. ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸುವುದಾಗಿ ಹೇಳಿದರು.

ಫ್ರೀ ಗ್ಯಾರಂಟಿ ಕೊಟ್ಟು ಪಂಜಾಬ್ ಸರ್ಕಾರ ದಿವಾಳಿ: ಡಿಕೆಶಿ ನೋ ರಿಯಾಕ್ಷನ್‌..!

ರಾಮನಗರ ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕೆಗಳ ಸಿಎಸ್ಆರ್ ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಮಾತ್ರ ಬಳಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಸುಮಾರು 36 ಕೋಟಿಯಷ್ಟು ಹಣ ಸಿಎಸ್‌ ಆರ್ ಅನುದಾನದ ಅಡಿಯಲ್ಲಿ ಬಳಕೆಗೆ ಬಂದಿದೆ ಎಂದು ತಿಳಿಸಿದರು.

ಕುದೂರು ಗ್ರಾಮದಲ್ಲಿ ಸುಮಾರು 6 ಕೋಟಿ ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆ ನಿರ್ಮಾಣ ಮಾಡಲು ಹೊರಟಿರುವುದು ಕ್ರಾಂತಿಕಾರಿ ಆಲೋಚನೆ. ಇಂತಹ ಸುಸಜ್ಜಿತ ಶಾಲೆ ನಿರ್ಮಾಣ ಮಾಡಲು ಹೊರಟಿರುವ ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆಗೆ ನಾವೆಲ್ಲಾ ಅಭಾರಿಯಾಗಿರುತ್ತೇವೆ. ಈ ಸಂಸ್ಥೆಯವರು ಜಿಲ್ಲೆಯ 4 ತಾಲೂಕುಗಳಲ್ಲಿ ಒಂದೊಂದು ಶಾಲೆ ನಿರ್ಮಾಣ ಮಾಡುವ ಭರವಸೆ ಕೊಟ್ಟಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಕೆಪಿಎಸ್ ಶಾಲಾ ಕಟ್ಟಡ, ಪಾರ್ಕ್ ಅಭಿವೃದ್ಧಿ, ಬಯಲು ರಂಗ ಮಂದಿರಕ್ಕೆ ಶಂಕು ಸ್ಥಾಪನೆ ನೆರವೇರಿಸಿದ್ದಲ್ಲದೆ, ರೈತರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್ .ರವಿ, ಜಿಲ್ಲಾಕಾರಿ ಅವಿನಾಶ್, ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆ ಉಪಾಧ್ಯಕ್ಷ ಸುದೀಪ್ ದಾಲ್ವಿ, ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಡಿಕೆಶಿ ಕಿವಿಮಾತು

ಕಣ್ಣು ಚೆನಾಗಿದ್ದರೆ ನೋಟ ಚೆನ್ನಾಗಿರುತ್ತದೆ. ನಾಲಿಗೆ, ನಡತೆ ಚೆನ್ನಾಗಿದ್ದರೆ ಇಡೀ ಜಗತ್ತೇ ನಮ್ಮನ್ನು ಹಿಂಬಾಲಿಸುತ್ತದೆ, ಇದಕ್ಕೆ ಶಿಕ್ಷಣ ಅತ್ಯಗತ್ಯ. ಸಮಯ ನಿಲ್ಲುವುದಿಲ್ಲ, ಆಡಿದ ಮಾತು ಮರಳಿ ಬರುವುದಿಲ್ಲ, ಆದ ಕಾರಣ ವಿದ್ಯೆ ಕಲಿಯುವ ವಯಸ್ಸು ಕಳೆದು ಹೋದರೆ ಮತ್ತೆ ದೊರೆಯುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ಎಷ್ಟು ಕಲಿಯಲು ಸಾಧ್ಯವೋ ಅಷ್ಟು ಕಲಿಯಬೇಕು. ನಿಮ್ಮ ತಂದೆ- ತಾಯಿ ಕನಸು ಕಂಡಿರುತ್ತಾರೆ, ಆ ಕನಸಿಗೆ ನೀವು ಸಹಕಾರಿಯಾಗಿ ಬೆಳೆಯಬೇಕು If you forget the route, you will not get the Fruit ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿವಿಮಾತು ಹೇಳಿದರು.

ಉದ್ಯೋಗ ಸೃಷ್ಟಿ ಉದ್ದೇಶದಿಂದ ಸೂಕ್ತ ಸ್ಥಳದಲ್ಲಿ ಮದ್ಯದಂಗಡಿ ತೆರೆಯಲು ಚಿಂತನೆ: ಡಿಕೆಶಿ

ಗೃಹಲಕ್ಷ್ಮಿ ತಾಂತ್ರಿಕ ಸಮಸ್ಯೆಗೆ ಶೀಘ್ರ ಪರಿಹಾರ

ರಾಜ್ಯದಲ್ಲಿ ಶೇ 88 ರಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ತಲುಪಿದೆ. ಉಳಿದ ಅರ್ಜಿದಾರರಿಗೆ ಬ್ಯಾಂಕ್ ಖಾತೆ ಸಮಸ್ಯೆಯಿಂದ ಹಣ ತಲುಪಿಲ್ಲ. ಈ ಸಮಸ್ಯೆಯನ್ನು ಬೇಗ ಬಗೆಹರಿಸಲಾಗುವುದು. ಬೆಲೆ ಏರಿಕೆಯಿಂದ ನಮ್ಮ ಗ್ರಾಮೀಣ ಪ್ರದೇಶದ ಜನರು ತತ್ತರಿಸಿ ಹೋಗಿದ್ದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ವಲ್ಪ ಉಸಿರಾಡುವಂತೆ ಮಾಡಿವೆ. ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು

ಶ್ರೀರಂಗ ನೀರಾವರಿ ಯೋಜನೆಗೆ ಮರುಜೀವ

ರಾಮನಗರ ಜಿಲ್ಲೆಯ ಶ್ರೀರಂಗ ನೀರಾವರಿ ಯೋಜನೆಗೆ ಮತ್ತೆ ಮರುಜೀವ ನೀಡಲಿದ್ದು, ಕೃಷಿ ಹಾಗೂ ಕುಡಿಯುವ ನೀರಿನ ಕೊರತೆಯನ್ನು ಶೀಘ್ರ ಬಗೆಹರಿಸಲಿದ್ದೇವೆ. ಸಂಸದ ಡಿ.ಕೆ.ಸುರೇಶ್ ಮತ್ತು ಶಾಸಕ ಬಾಲಕೃಷ್ಣ ಅವರು ಕ್ಷೇತ್ರದ ಅನೇಕ ಯೋಜನೆ ಹಾಗೂ ಸಮಸ್ಯೆಗಳ ಗಮನ ಸೆಳೆದಿದ್ದಾರೆ. ಮುಖ್ಯವಾಗಿ ಬಗರ್ ಹುಕುಂ ಜಮೀನುಗಳ ಬಗ್ಗೆ ಶೀಘ್ರ ಗಮನ ಹರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios