ಖಾಸಗಿ ಶಾಲೆಗಳ ಬೋಧನಾ ಶುಲ್ಕ: ರಾಜ್ಯ ಸರ್ಕಾರದಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ

ಖಾಸಗಿ ಶಾಲೆಗಳಲ್ಲಿನ ಬೋಧನಾ ಶುಲ್ಕ ವಿಚಾರ
ರಾಜ್ಯ ಸರ್ಕಾರದಿಂದ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ
ಶೇ.70 ರಷ್ಟು ಶುಲ್ಕ ಪಡೆಯುವಂತೆ ಸರ್ಕಾರ ಆದೇಶಿಸಿದೆ

private-school-fees-issue Karnataka govt Submits  plea to  high-court rbj

ಬೆಂಗಳೂರು, (ಜೂನ್.15): ಖಾಸಗಿ ಶಾಲೆಗಳಲ್ಲಿನ ಬೋಧನಾ ಶುಲ್ಕ ವಿಚಾರವಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ. ರಾಜ್ಯದ ಅಡ್ವೋಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಈ ಬಗ್ಗೆ ಇಂದು (ಜೂನ್ 15) ಹೇಳಿಕೆ ನೀಡಿದ್ದಾರೆ. 

ಖಾಸಗಿ ಶಾಲೆಗಳಲ್ಲಿನ ಶುಲ್ಕ ನಿಗದಿ ಬಗ್ಗೆ ಸಮಿತಿ ರಚನೆ ಮಾಡುವಂತೆ ಪ್ರಸ್ತಾಪ ಮಾಡಲಾಗಿದೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಬೇಕು. ಬಳಿಕ, ಸಮಿತಿ ಸೂಚನೆಯಂತೆ ಶುಲ್ಕ ನಿಗದಿ ಮಾಡಲು ಪರಿಶೀಲನೆ ನಡೆಸಬೇಕು ಎಂದು ಹೇಳಲಾಗಿದೆ. ಈ ಬಗ್ಗೆ ವಿಚಾರಣೆಯನ್ನು ಜೂನ್ 21ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ.

ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಶೇಕಡಾ 70ರಷ್ಟು ಶುಲ್ಕ ಪಡೆಯುವಂತೆ ಸರ್ಕಾರ ಆದೇಶಿಸಿತ್ತು. ಶೇಕಡಾ 30ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಸೂಚಿಸಿತ್ತು. ಆದರೆ, ಇದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸಿತ್ತು. ಕೋವಿಡ್​ನಿಂದ ಪೂರ್ಣ ಶುಲ್ಕ ಭರಿಸಲು ಪೋಷಕರಿಗೆ ಕಷ್ಟವಾಗಬಹುದು. ಕೊರೋನಾ ಹಾಗೂ ಲಾಕ್​ಡೌನ್​ನಿಂದ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಶುಲ್ಕದ ವಿಚಾರದಲ್ಲಿ ಸರ್ಕಾರ ಆದೇಶ ನೀಡಿತ್ತು.

Latest Videos
Follow Us:
Download App:
  • android
  • ios