Asianet Suvarna News Asianet Suvarna News

ಪುನೀತ್ ನಿಧನ: ನಾಳೆ (ಅ.30) ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

* ನಟ ಪುನೀತ್ ರಾಜ್‍ಕುಮಾರ್ ನಿಧನ ಹಿನ್ನೆಲೆ
* ಖಾಸಗಿ ಶಾಲೆಗಳಿಂದ ನಟ ಪುನೀತ್ ರಾಜ್‌ಕುಮಾರ್ ನಿಧಾನಕ್ಕೆ ಸಂತಾಪ
* ಶನಿವಾರ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

private school holiday On Oct 3o Announced By rupsa Over Puneeth Rajkumar demise rbj
Author
Bengaluru, First Published Oct 29, 2021, 6:51 PM IST

ಬೆಂಗಳೂರು, (ಅ.29): ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth rajkumar) ನಿಧನ ಹಿನ್ನೆಲೆಯಲ್ಲಿ ನಾಳೆ (ಅ.30)  ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಖಾಸಗಿ ಶಾಲೆಗಳ (Private School) ಒಕ್ಕೂಟ ರೂಪ್ಸಾ (Rupsa) ಇಂದು (ಅ.29) ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್‌ಕುಮಾರ್ ಅಗಲಿಕ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ (ಶನಿವಾರ) ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ‌ಲೋಕೇಶ್ ತಾಳಿಕಟ್ಟೆ ಮಾಹಿತಿ ನೀಡಿದ್ದಾರೆ.  ಆದ್ರೆ, ಸರ್ಕಾರಿ ಶಾಲೆ ರಜೆ ಕುರಿತು ಇನ್ನೂ ಯಾವುದೇ ತೀರ್ಮಾನವಾಗಿಲ್ಲ. 

ಪುನೀತ್ ರಾಜ್‌ಕುಮಾರ್ ನಿಧನ: ಮದ್ಯ ಮಾರಾಟ ನಿಷೇಧ

ಎಂಬಿಎ ಪರೀಕ್ಷೆಗೆ ಮುಂದೂಡಿಕೆ
ಇನ್ನು ನಾಳೆ (ಅ.30) ನಡೆಯಬೇಕಿದ್ದ ಬೆಂಗಳೂರು ಸಿಟಿ ವಿಶ್ವವಿದ್ಯಾಲದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.  ಪರೀಕ್ಷೆ ‌ಮುಂದೂಡಿಕೆ ಕುರಿತು ಬೆಂಗಳೂರು ಸಿಟಿ ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ.

ಎಂಬಿಎ ಅಂತಿಮ ವರ್ಷದ ಪರೀಕ್ಷೆಗಳನ್ನು ಮಂಗಳವಾರಕ್ಕೆ ಮುಂಡೂಡಲಾಗಿದೆ ಎಂದು ಬೆಂಗಳೂರು ಸಿಟಿ ವಿವಿ ಕುಲಪತಿ ಲಿಂಗರಾಜು ತಿಳಿಸಿದ್ದಾರೆ. 

ಇನ್ನು ವಿವಿ, ಕಾಲೇಜುಗಳಿಗೆ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಇನ್ನು ಯಾವುದೇ ಮಾಹಿತಿ ಬಂದಿಲ್ಲ, ಆದೇಶಕ್ಕೆ ಕಾಯುತ್ತಿದ್ದೇವೆ ಎಂದು ಸ್ಪಷ್ಟಪಡಿಸಿಸದರು.

ಬೆಂಗ್ಳೂರಲ್ಲಿ ಮದ್ಯ ಮಾರಾಟ ನಿಷೇಧ
ಬೆಂಗಳೂರು ನಗರದಲ್ಲಿ ತಕ್ಷಣವೇ ಜಾರಿಗೆ ಬರುವಂತೆ  ಅ.31ರ ಮಧ್ಯರಾತ್ರಿ ವರೆಗೆ  ಸಂಪೂರ್ಣವಾಗಿ ಮದ್ಯ ಮಾರಾಟ (Liquor Sale Ban) ನಿ‍ಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ (Kamal Pant) ಆದೇಶ ಹೊರಡಿಸಿದ್ದು,  ತತಕ್ಷಣವೇ ಜಾರಿಗೆ ಬರಲಿದೆ.

ನಗರಾದ್ಯಂತ ಫುಲ್ ಸೆಕ್ಯೂರಿಟಿ
ನಗರಾದ್ಯಂತ 6 ಸಾವಿರ ಪೊಲೀಸರು, ಕೆಎಸ್ಆರ್‌ಪಿ KSRP ಪ್ಲಟೂನ್ ನಿಯೋಜನೆ ಮಾಡಲಾಗಿದ್ದು,  ಭಾನುವಾರ ಮಧ್ಯ ರಾತ್ರಿ ವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಎಷ್ಟೇ ಜನ ಬಂದ್ರೂ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗುತ್ತೆ. ಈ ಸಂದರ್ಭದಲ್ಲಿ ಕುಚೇಷ್ಟೇ ಮಾಡಿದ್ರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಕಮಿಷನರ್ ಕಮಲ್ ಪಂಥ್ ಎಚ್ಚರಿಕೆ ಕೊಟ್ಟಿದ್ದಾರೆ.

ಪುನೀತ್ ಅವರ ನಿವಾಸದ ಬಳಿ ಯಾರೂ ತೆರಳದಂತೆ ಸರಕಾರ ಮನವಿ ಮಾಡಿದ್ದು, ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗ ಬೇಡಿ. ಶಾಂತ ರೀತಿಯಲ್ಲಿ ಇರಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಇನ್ನು ಪುನೀತ್ ಅವರ ಅಂತ್ಯಕ್ರಿಯೆ ಬಗ್ಗೆ ಅವರ ಕುಟುಂಬಸ್ಥರು ಯಾವುದೇ ಮಾಹಿತಿ ನೀಡಿಲ್ಲ. ಈ ಬಗ್ಗೆ ಸರ್ಕಾರದವು ಸಹ ಚರ್ಚೆ ನಡೆಸಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕು? ನಗರದಲ್ಲಿ ಪ್ರಮುಖ ರಸ್ತೆಗಳಲ್ಲಿ ಅಂತಿಮ ಮೆರವಣಿಗೆ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ ನಡೆದಿದೆ.

ಚಿತ್ರಪ್ರದರ್ಶನ ಬಂದ್
ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚಿತ್ರಪ್ರದರ್ಶನವನ್ನು ನಿಲ್ಲಿಸಲಾಗಿದೆ. ಈ ಕುರಿತು ಮೈಸೂರಿನಲ್ಲಿ ಕರ್ನಾಟಕದ ಚಲನಚಿತ್ರ ಪ್ರದರ್ಶಕರ ಮಹಾ ಮಂಡಲ್ ಉಪಾಧ್ಯಕ್ಷ ರಾಜಾರಾಮ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಪ್ರಾರಂಭವಾಗಿರುವ ಚಿತ್ರ ಪ್ರದರ್ಶನ ಮುಂದುವರೆಯುತ್ತಿವೆ. 2.30 ಶೋ ಹಾಗೂ 4.30ಯ ನಂತರದ ಶೋಗಳು ಕ್ಯಾನ್ಸಲ್ ಆಗಿವೆ. ಚಿತ್ರರಂಗ ಮೊದಲು ಈ ಶಾಕ್ ನಿಂದ ಹೊರ ಬರಬೇಕು. ಮುಂದೆ ಯಾವಾಗ ಚಿತ್ರ ಪ್ರದರ್ಶನ ಮಾಡಬೇಕು ನೋಡೋಣ. ಪುನೀತ್ ಜೊತೆ ನಾನು ಚಾಮುಂಡಿ ಬೆಟ್ಟ ಹತ್ತಿ ಇಳಿಯುತ್ತಿದ್ದೆ. ಅವರು ಆರೋಗ್ಯದ ಬಗ್ಗೆ ಗಮನ ಹರಿಸುತ್ತಿದ್ದರು. ಅವರಿಗೆ ಈ ರೀತಿ ಆಗಿರೊದು ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ದುಃಖ ವ್ಯಕ್ತಪಡಿಸಿದ್ದಾರೆ.

Follow Us:
Download App:
  • android
  • ios