ವ್ಯಾಪಕವಾಗಿ ಹರಡುತ್ತಿದೆ ಕೊರೋನಾ ಎರಡನೇ ಅಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕನಿಷ್ಠ ಒಂದು ತಿಂಗಳ ಕಾಲ ಮುಂದೂಡಲು ಆಗ್ರಹ ಖಾಸಗಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾಡಳಿತಗಳ ಒಕ್ಕೂಟ ಆಗ್ರಹ

ಬೆಂಗಳೂರು (ಮೇ.13): ರಾಜ್ಯದಲ್ಲಿ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕನಿಷ್ಠ ಒಂದು ತಿಂಗಳ ಕಾಲ ಮುಂದೂಡುವಂತೆ ಖಾಸಗಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾಡಳಿತಗಳ ಒಕ್ಕೂಟ (ಕ್ಯಾಮ್ಸ್‌) ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. 

ಪ್ರಸ್ತುತ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳು ತೀವ್ರ ಸಂಕಷ್ಟಎದುರಿಸುತ್ತಿದ್ದು, ಪರೀಕ್ಷೆ ವಿಚಾರದಲ್ಲಿಯೂ ಗೊಂದಲಕ್ಕೆ ಸಿಲುಕಿದ್ದಾರೆ. ಆದ್ದರಿಂದ ಜೂ.21ರಿಂದ ಜು.5ರ ವರೆಗೆ ನಿಗದಿಯಾಗಿರುವ ಪರೀಕ್ಷೆಯನ್ನು ಕನಿಷ್ಠ ಒಂದು ತಿಂಗಳ ಕಾಲ ಮುಂದೂಡಬೇಕು. 

ಕೊರೋನಾ ಸಂಕಷ್ಟದ ಮಧ್ಯೆ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಿದ ಸುರೇಶ್ ಕುಮಾರ್ ...

ಹೆಚ್ಚಿನ ಶಿಕ್ಷಕರು ಸೋಂಕಿಗೆ ತುತ್ತಾಗುತ್ತಿದ್ದಾರೆ ಹಾಗೂ ಭಯದಲ್ಲಿ ಕರ್ತವ್ಯದಿಂದ ದೂರವಾಗಿರುವುದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಮಾನವ ಸಂಪನ್ಮೂಲದ ಕೊರತೆ ಉಂಟಾಗಿದೆ. ಈ ಕಾರಣದಿಂದಾಗಿ ಕೊರೋನಾ 2ನೇ ಅಲೆ ನಿಯಂತ್ರಣಕ್ಕೆ ಬರುವ ತನಕ ಪರೀಕ್ಷೆಗಳನ್ನು ಮುಂದೂಡಬೇಕು ಒಕ್ಕೂಟ ಸಚಿವರಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದೆ.

ಮೊದಲನೇ ಪ್ರಯತ್ನವೆಂದು ಪರಿಗಣಿಸಿ

ಮುಂದಿನ ಹಂತದ ವ್ಯಾಸಂಗ ಹಾಗೂ ವೃತ್ತಿಪರ ಕೋರ್ಸ್‌ಗಳ ಆಯ್ಕೆ ನಿರ್ಧರಿಸುವಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಹತ್ವದ ಪಾತ್ರ ವಹಿಸಲಿದೆ. ಆದ್ದರಿಂದ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಹಾಜರಾಗುವವರಿಗೆ ಮೊದಲನೇ ಪ್ರಯತ್ನವೆಂದೇ ಪರಿಗಣಿಸುವಂತೆ ಕ್ಯಾಮ್ಸ್‌ ಪ್ರಧಾನ ಕಾರ‍್ಯದರ್ಶಿ ಡಿ. ಶಶಿಕುಮಾರ್‌,ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಅವರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona