Prize Money Scholarship: ಪ್ರೋತ್ಸಾಹಧನಕ್ಕಾಗಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ SC/ST ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್‌ಗಳನ್ನು ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರ ರೂ.35,000 ವರೆಗೆ ಪ್ರೋತ್ಸಾಹಧನ ನೀಡುವುದಾಗಿ ಪ್ರಕಟಣೆ ಹೊರಡಿಸಿದೆ.

Prize Money For Completing Course In First Attempt First Class SC/ST Students of State of Karnataka gow

ಬೆಂಗಳೂರು(ಜ.3): ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್‌ಗಳನ್ನು ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರ ರೂ.35,000 ವರೆಗೆ ಪ್ರೋತ್ಸಾಹಧನ ನೀಡುವುದಾಗಿ ಪ್ರಕಟಣೆ ಹೊರಡಿಸಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಪ್ರೋತ್ಸಾಹಧನಕ್ಕಾಗಿ ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮಾತ್ರ  ಅರ್ಜಿ ಸಲ್ಲಿಸ ಬಹುದಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ಜನವರಿ 30,2022 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ https://sw.kar.nic.in/index.aspx ಗೆ ಭೇಟಿ ನೀಡಿ.

ಅರ್ಜಿಗಳನ್ನು ಸಲ್ಲಿಸಲು ಕೊನೆ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ. ಆನ್‌ಲೈನ್‌ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು.ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇರುವ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ / ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.

ಯಾವ್ಯಾವ ಕೋರ್ಸ್‌ ವಿದ್ಯಾರ್ಥಿಗಳಿಗೆ ಎಷ್ಟು ಪ್ರೋತ್ಸಾಹಧನ?
ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ : 20,000
ಪದವಿ : 25,000
ಯಾವುದೇ ಸ್ನಾತಕೋತ್ತರ ಪದವಿ : 30,000
ಅಗ್ರಿಕಲ್ಚರ್, ಇಂಜಿನಿಯರ್, ವೆಟರಿನರಿ, ಮೆಡಿಷನ್‌: 35,000

KARNATAKA SCHOOLS NAMED AMBEDKAR: ರಾಜ್ಯದ ಶಾಲೆಗಳಿಗೆ ಡಾ. ಬಿಆರ್ ಅಂಬೇಡ್ಕರ್ ಹೆಸರು

ಅರ್ಜಿ ಸಲ್ಲಿಕೆ : ವಿದ್ಯಾರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sw.kar.nic.in/index.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಅಗತ್ಯ ದಾಖಲೆಗಳಾದ ಅಂಕಪಟ್ಟಿ, ಪಾಸ್ ಸರ್ಟಿಫಿಕೇಟ್‌, ಆಧಾರ್ ಕಾರ್ಡ್‌, ಬ್ಯಾಂಕ್‌ ಪಾಸ್‌ ಪುಸ್ತಕ, ಫೋಟೋ ಇತರೆ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಿರುತ್ತದೆ. ಈ ಮೂಲಕ ಜನವರಿ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಅರ್ಜಿಕೆಗೆ ಈ ಲಿಂಕ್ ಕ್ಲಿಕ್ ಮಾಡಿ: https://sw.kar.nic.in/swprizemoney/WebPages/validation.aspx

ಸಲ್ಲಿಕೆಯಾದ ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಲು :
ಅಭ್ಯರ್ಥಿಗಳು ನೀವು ನಿಮ್ಮ ಕೋರ್ಸ್ ನಲ್ಲಿ ಉತ್ತೀರ್ಣರಾದ ವರ್ಷವನ್ನು ಆಯ್ಕೆ ಮಾಡಿ. ತದನಂತರ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ. ಅಂತಿಮವಾಗಿ ಡೌನ್‌ಲೋಡ್ ಮಾಡಿಕೊಳ್ಳಿ.

ಅರ್ಜಿ ಮರುಮುದ್ರಣಕ್ಕೆ ಈ ಲಿಂಕ್ ಕ್ಲಿಕ್ ಮಾಡಿ  https://sw.kar.nic.in/SWPRIZEMONEY/Home.aspx?ReturnUrl=%2fswprizemoney%2fWebPages%2fReprintAcknowledge

Karnataka schools self defence training: ರಾಜ್ಯದ ವಿದ್ಯಾರ್ಥಿನಿಯರಿಗೆ 'ಸ್ವಯಂ ರಕ್ಷಣಾ' ಕೌಶಲ್ಯ ತರಬೇತಿ

ಗಮನಿಸಿ, ಪಿಹೆಚ್‌ಡಿ ಫೆಲೋಶಿಪ್‌ ಅರ್ಜಿ ಅವಧಿ ವಿಸ್ತರಣೆ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯಿಂದ ನೀಡಲಾಗುವ ಪಿಹೆಚ್‌ಡಿ ಫೆಲೋಶಿಪ್‌ ಗೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. 2021-22ನೇ ಸಾಲಿನ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರಾತಿಗಾಗಿ ಹಿಂದುಳಿದ ವರ್ಗಗಳ ಇಲಾಖೆಯಿಂದ ಅರ್ಜಿಗಳನ್ನು  ಜನವರಿ 16, 2022 ರವರೆಗೆ ಸಲ್ಲಿಸಬಹುದಾಗಿದೆ. ಈ ಹಿಂದೆ ಡಿಸೆಂಬರ್ 30 ಕೊನೆಯ ದಿನವಾಗಿತ್ತು. 2021-22ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

ಪ್ರಸಕ್ತ ಸಾಲಿನಲ್ಲಿ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ/ಫೆಲೋಶಿಪ್ ಕೊಡಲಾಗುತ್ತದೆ.  ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 8050770004 ಮತ್ತು ಅಧಿಕೃತ ವೆಬ್‌ಸೈಟ್‌: https://bcwd.karnataka.gov.in/ ಗೆ ಭೇಟಿ ನೀಡಬಹುದು.

Latest Videos
Follow Us:
Download App:
  • android
  • ios