Asianet Suvarna News Asianet Suvarna News

ಪಿಯು ಫಲಿತಾಂಶ ತೃಪ್ತಿಕರವಾಗದಿದ್ದಲ್ಲಿ ಆಗಸ್ಟ್‌ನಲ್ಲಿ ಪರೀಕ್ಷೆ

  • ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ
  • ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ತಮ್ಮ  ಫಲಿತಾಂಶ ರದ್ದುಪಡಿಸಿಕೊಂಡಿದ್ದರೆ ಅವರಿಗೆ ಆಗಸ್ಟ್‌ನಲ್ಲಿ ಪರೀಕ್ಷೆ
PU supplement exam to be held in August snr
Author
Bengaluru, First Published Jul 21, 2021, 8:09 AM IST

ಬೆಂಗಳೂರು (ಜು.21): ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ತಮ್ಮ  ಫಲಿತಾಂಶ ರದ್ದುಪಡಿಸಿಕೊಂಡಿದ್ದರೆ ಅವರಿಗೆ ಆಗಸ್ಟ್‌ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. 

ಅಂತಹ ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಾಂಶುಪಾಲರನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬಹುದು. ಆ ಅರ್ಜಿಗಳನ್ನು ಪ್ರಾಂಶುಪಾಲರು ಸ್ಟೂಡೆಂಟ್ಸ್ ಅಚೀವ್ಮೆಂಟ್ ಟ್ರ್ಯಾಕಿಂಗ್‌ ಪೋರ್ಟಲ್‌ನಲ್ಲಿ ದಾಖಲಿಸಲು ಜು.30 ಕೊನೆಯ ದಿನವಾಗಿದೆ.  ಜು.31ರೊಳಗೆ  ಅರ್ಜಿಗಳನ್ನು ಕಡ್ಡಾಯವಾಗಿ ತನ್ನ ಜಿಲ್ಲಾ ಉಪ ನಿರ್ದೇಶಕರು ಆಗಸ್ಟ್‌ 2 ರೊಳಗೆ ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸಬೇಕು. 

ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟಿಸಿದ ಸಚಿವ, ಎಲ್ಲ ವಿದ್ಯಾರ್ಥಿಗಳೂ ಪಾಸ್

ಪಿಯು ಪರೀಕ್ಷಾ ಶುಲ್ಕ ಮರುಪಾವತಿ ಇಲ್ಲ : 2020 - 21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಗೆ  ಹಿಂತಿರುಗಿಸುವ ಯಾವುದೇ ಚಿಂತನೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌ ಸುರೇಶ್ ಕುಮಾರ್ ಸ್ವಷ್ಟಪಡಿಸಿದ್ದಾರೆ. 

Follow Us:
Download App:
  • android
  • ios