Asianet Suvarna News Asianet Suvarna News

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ‘ಪರೀಕ್ಷೆ-2’ರ ಫಲಿತಾಂಶವನ್ನು ಇಂದು ಪ್ರಕಟಿಸಲಾಗುತ್ತದೆ. ಇಲಾಖೆಯ ವೆಬ್‌ಸೈಟ್‌ನಲ್ಲಿ karresults.nic.in ಫಲಿತಾಂಶ ಲಭ್ಯವಾಗಲಿದೆ.

PUC 2 Result Will be Announce on May 21st in Karnataka grg
Author
First Published May 21, 2024, 6:48 AM IST

ಬೆಂಗಳೂರು(ಮೇ.21):  ದ್ವಿತೀಯ ಪಿಯುಸಿ ‘ಪರೀಕ್ಷೆ-2’ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ. ಇಲಾಖೆಯ ವೆಬ್‌ಸೈಟ್‌ನಲ್ಲಿ karresults.nic.in ಫಲಿತಾಂಶ ಲಭ್ಯವಾಗಲಿದೆ.

ಪಿಯುಸಿ ಪರೀಕ್ಷೆ- 2 ಫಲಿತಾಂಶ ಬಳಿಕ ಸಿಇಟಿ ರಿಸಲ್ಟ್‌

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಮತ್ತು ಕೃಷಿ ವಿಶ್ವವಿದ್ಯಾಲಯದ ಬಿ.ಎಸ್ಸಿ ಪದವಿ ಪ್ರವೇಶದ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರ ಸಾಮಾನ್ಯ ಪ್ರವೇಶ ಪರೀಕ್ಷೆ ‘ಸಿಇಟಿ-2024’ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪಿಯು ಪರೀಕ್ಷೆ 2: ನೋಂದಾಯಿಸಿದ ವಿಷಯಕ್ಕೆ ಮಾತ್ರ ಹಾಜರಾದರೆ ಸಾಕು

ದ್ವಿತೀಯ ಪಿಯುಸಿ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ ಶೇ.50ರಷ್ಟು ಅಂಕಗಳನ್ನು ಸೇರಿಸಿ ಸಿಇಟಿ ರ‍್ಯಾಂಕ್‌ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣಿಸಬೇಕಾಗುತ್ತದೆ. ಹೀಗಾಗಿ, ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುವುದು ಕೆಇಎಗೆ ಅನಿವಾರ್ಯ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಬಿ.ಎಸ್ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದ್ದು, ಅದರ ಫಲಿತಾಂಶ ಕೂಡ ಬರಬೇಕಾಗುತ್ತದೆ. ಇದು ಸಹ ಸಿಇಟಿ ರ‍್ಯಾಂಕ್‌ಗೂ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

Latest Videos
Follow Us:
Download App:
  • android
  • ios