ಪರೀಕ್ಷೆ ಮುಗಿದು ಮೂರೇ ಗಂಟೆಯಲ್ಲಿ ಫಲಿತಾಂಶ ಪ್ರಕಟ: ವಿಟಿಯು ವಿಶ್ವವಿದ್ಯಾಲಯದ ಹೊಸ ದಾಖಲೆ

ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು  25  ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಹೊಸ ದಾಖಲೆಯನ್ನು ಮಾಡಿದ್ದು, ಅಂತಿಮ ವರ್ಷದ ಬಿ.ಇ./ಬಿ.ಟೆಕ್./ಬಿ.ಆರ್ಕ್/ಬಿ.ಪ್ಲಾನ್ ಅಂತಿಮ ಸೆಮಿಸ್ಟರ್ ಪರೀಕ್ಷೆ ಮುಗಿದ ದಿನವೇ ಅಂತಿಮ 42,323 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆ ಮಾಡಿ ಹೊಸ ದಾಖಲೆ ನಿರ್ಮಿಸಿದೆ. 

Result declared within 3 hours of exam New record of Belagavi VTU University gvd

ಬೆಳಗಾವಿ (ಮೇ.30): ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು  25  ವರ್ಷಗಳ ಇತಿಹಾಸದಲ್ಲಿಯೇ ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಹೊಸ ದಾಖಲೆಯನ್ನು ಮಾಡಿದ್ದು, ಅಂತಿಮ ವರ್ಷದ ಬಿ.ಇ./ಬಿ.ಟೆಕ್./ಬಿ.ಆರ್ಕ್/ಬಿ.ಪ್ಲಾನ್ ಅಂತಿಮ ಸೆಮಿಸ್ಟರ್ ಪರೀಕ್ಷೆ ಮುಗಿದ ದಿನವೇ ಅಂತಿಮ 42,323 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆ ಮಾಡಿ ಹೊಸ ದಾಖಲೆ ನಿರ್ಮಿಸಿದೆ. ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ ಪ್ರಕಟಣೆಯಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

ಫಲಿತಾಂಶವನ್ನು ಬೇಗ ಪ್ರಕಟಣೆ ಮಾಡುವದರಿಂದ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳ ವಿಭಾಗದಲ್ಲಿ ಉದ್ಯೋಗ ಹಾಗೂ ಉನ್ನತ ಶಿಕ್ಷಣದ ವಿದ್ಯಾಭ್ಯಾಸಕ್ಕೆ ಮತ್ತು ಮುಂದಿನ ಭವಿಷ್ಯಕ್ಕೆ ತುಂಬಾ ಅನುಕೂಲವಾಗುತ್ತದೆ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ವಿಟಿಯುದಲ್ಲಿ ಆಡಳಿತ. ಶೈಕ್ಷಣಿಕ, ಪರೀಕ್ಷೆ, ಸಂಶೋಧಾನಾ ವಿಭಾಗದಲ್ಲಿ ಕ್ರಾಂತಿಕಾರಕ ಸುಧಾರಣೆಗಳನ್ನು ತಂದು ಈ ಸಾಧನೆಯನ್ನು ಮಾಡಿದೆ ಎಂದು ಕುಲಪತಿಗಳು ತಿಳಿಸಿದರು.  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲ ಇಂಜಿನಿಯರಿಂಗ್ ಮಹಾವಿದ್ಯಾಲಯಗಳ ಅಂತಿಮ ಸೆಮಿಸ್ಟರನಲ್ಲಿ ಪರೀಕ್ಷೆ ಬರೆದ 42323 ವಿದ್ಯಾರ್ಥಿಗಳ ಪರೀಕ್ಷೆ ಗುರುವಾರ ಮೇ 30, 2024 ರಂದು ಸಂಜೆ 5:30ಗೆ ಪರೀಕ್ಷೆಗಳು ಕೊನೆಗೊಂಡವು.

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಕೇಸ್​: ಸಿಬಿಐ ತನಿಖೆಗೆ ಸರ್ಕಾರಕ್ಕೆ ಪತ್ರ ಬರೆದ ಶಾಸಕ ಯತ್ನಾಳ್

ಪರೀಕ್ಷೆ ಮುಗಿದ ಮೂರು ಗಂಟೆ ಒಳಗಾಗಿ ಅಂದರೆ ರಾತ್ರಿ 8:30ಗೆ ಫಲಿತಾಂಶವನ್ನು ಪ್ರಕಟಣೆ ಮಾಡಿ ವಾಟ್ಸಾಪ್ ಮುಖಾಂತರ ನೇರವಾಗಿ ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡಲಾಗಿದೆ. ಜೊತೆಗೆ ಎಲ್ಲ ಸೆಮಿಸ್ಟರ್ ಪರೀಕ್ಷೆಗಳಲ್ಲಿತೇರ್ಗಡೆ ಹೊಂದಿ ಪದವಿಯನ್ನು ಯಶಸ್ವಿಯಾಗಿ ಮುಗಿಸಿದ ವಿದ್ಯಾರ್ಥಿಗಳು ಪ್ರೋವಿಜನಲ್ ಡಿಗ್ರಿ ಸರ್ಟಿಫಿಕೇಟ್ (ಪಿಡಿಸಿ) ಗಳನ್ನು ಸೋಮವಾರ, ದಿನಾಂಕ 03.06.2024 ದಿಂದ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ ಎಂದು  ತಿಳಿಸಿದರು.

Latest Videos
Follow Us:
Download App:
  • android
  • ios