* ರಾಜ್ಯ ಸರ್ಕಾರದ ಸಿಡಿದೆದ್ದ ಖಾಸಗಿ ಶಾಲಾ ಒಕ್ಕೂಟ* ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದ ರೂಪ್ಸಾ* ಮಹತ್ವದ ಸಭೆ ಕರೆದು ಮಹತ್ವದ ತೀರ್ಮಾನ ಕೈಗೊಳ್ಳಲಿರುವ ಖಾಸಗಿ ಶಾಲಾ ಒಕ್ಕೂಟ

ಬೆಂಗಳೂರು, (ಡಿ.11): ವಿವಿಧ ಬೇಡಿಕೆ ಈಡೇರಿಸುವಂತೆ ಖಾಸಗಿ ಶಾಲಾ ಒಕ್ಕೂಟ ರುಪ್ಸಾ(Private Schools Association), ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದೆ. ಅಲ್ಲದೇ ಡೆಡ್‌ಲೈನ್ ಸಹ ಕೊಟ್ಟಿದೆ.

1995 ರ ನಂತರದ ಕನ್ನಡ ‌ಮಾಧ್ಯಮ ಶಾಲೆಗಳಿಗೆ ಅನುದಾನ ಕೊಟ್ಟಿಲ್ಲ. ಖಾಸಗಿ ಶಾಲಾ೯Private Schools ) ನೌಕರರಿಗೆ ಕೋವಿಡ್ ಪ್ಯಾಕೇಜ್ ಘೋಷಣೆ ಕೊಡದೇ ಇರೋದು. ಕಳೆದ ನಾಲ್ಕು ವರ್ಷದಿಂದ ಆರ್.ಟಿ.ಇ ಶುಲ್ಕ ‌ಮರುಪಾವತಿ ಹೆಚ್ಚಳ ಮಾಡಲ್ಲ. ಕಳೆದ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿ ಆರ್.ಟಿ.ಇ (RTE) ಶುಲ್ಕ ನೀಡುವಂತೆ ರುಪ್ಸಾ ಆಗ್ರಹಿಸಿದೆ.

Covid School SOP: ಖಾಸಗಿ ಶಾಲೆಗಳಿಗೆ ಪ್ರತೇಕ ಮಾರ್ಗಸೂಚಿ ನೀಡುವಂತೆ ಸಚಿವರಿಗೆ ಮನವಿ

ಬೇಡಿಕೆ ಈಡೇರಿಕೆಗೆ ನಾಳೆ (ಡಿ.11) ರುಪ್ಸಾ(RUPSA) ಒಕ್ಕೂಟ ಡೆಡ್ ಲೈನ್ ನೀಡಿದ್ದು, ಶಾಲೆ ಬಂದ್ ಮಾಡಿ ಶಿಕ್ಷಕರು ಹಾಗೂ ಸಿಬ್ಬಂದಿಗಳು
 ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ, ಭಾನುವಾರ ಶಾಸಕರ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಸಲಿದೆ. ಸಭೆಯಲ್ಲಿ ಸುಮಾರು 5 ಕ್ಕೂ ಹೆಚ್ಚು ಖಾಸಗಿ ಶಾಲೆಗಳ ಸಂಘಟನೆಗಳು ‌ಭಾಗಿಯಾಗಲಿದ್ದು, ಖಾಸಗಿ ಶಾಲೆಗಳು ಅನುಭವಿಸುತ್ತಿರುವ ಸಮಸ್ಯೆಗಳ ‌ಕುರಿತು ಚರ್ಚೆ ನಡೆಯಲಿದೆ.

ಬಳಿಕ ಅಂದೇ ಮಧ್ಯಾಹ್ನ 1 ಗಂಟೆಗೆ ರುಪ್ಸಾ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ತಮ್ಮ ಸಭೆಯ ನಿರ್ಧಾರವನ್ನು ಮಾಧ್ಯಮಗಳಿಗೆ ತಿಳಿಸಲಿದೆ.

ಸುಮಾರು 10 ಸಾವಿರಕ್ಕೂ ಹೆಚ್ಚು ಶಿಕ್ಷಕರು, ಸಿಬ್ಬಂದಿಗಳಿಂದ ಅಧಿವೇಶನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ರುಪ್ಸಾ ಅಧ್ಯಕ್ಷ ‌ಲೋಕೇಶ್ ತಾಳಿಕಟ್ಟೆ ಮಾಹಿತಿ ನೀಡಿದ್ದಾರೆ.

1995ರ ನಂತರ ಆರಂಭವಾದ ಖಾಸಗಿ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳನ್ನು ತಕ್ಷಣವೇ ಅನುದಾನಕ್ಕೆ ಒಳಪಡಿಸಬೇಕು ಎಂಬುದು ಸೇರಿ ತಮ್ಮ ಮೂರು ಬೇಡಿಕೆಗಳನ್ನು ಸೆ.15ರೊಳಗೆ ಈಡೇರಿಸದೆ ಹೋದರೆ ಪ್ರತಿಭಟನೆಯ ಹಾದಿ ಹಿಡಿಯಬೇಕಾಗುತ್ತದೆ ಎಂದು ರಾಜ್ಯದ ವಿವಿಧ ಕನ್ನಡ ಮಾಧ್ಯಮ ಅನುದಾನ ರಹಿತ ಶಾಲಾ ಕಾಲೇಜುಗಳ ಸಂಘಟನೆಗಳು ಈ ಹಿಂದೆಯೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದವು. 

ಖಾಸಗಿ ಶಾಲೆಗಳಿಗೆ ಪ್ರತೇಕ ಮಾರ್ಗಸೂಚಿಗೆ ಮನವಿ
ತಮಗೆ ಪ್ರತ್ಯೇಕ ಕೊರೋನಾ ಮಾರ್ಗಸೂಚಿ(Coronavirus Guidelines) ಪ್ರಕಟಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ (Private School Organization) ಒತ್ತಾಯಿಸುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ. ನಾಗೇಶ್​ಗೆ (BC Nagesh) ಖಾಸಗಿ ಶಾಲೆಗಳ ಒಕ್ಕೂಟ ಮನವಿ ಮಾಡಿತ್ತು.

ಶಾಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪಾಲನೆ ಆಗುತ್ತಿಲ್ಲ. ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಮಾರ್ಗಸೂಚಿ ಪಾಲಿಸ್ತಿಲ್ಲ. ಕೋಚಿಂಗ್ ಸೆಂಟರ್, ಟ್ಯುಟೋರಿಯಲ್​ಗಳು ಪಾಲಿಸುತ್ತಿಲ್ಲ. ಹೀಗಾಗಿ ಶಿಕ್ಷಣ ಸಂಸ್ಥೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿ. ಶಿಕ್ಷಣ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್​ ಮನವಿ ಮಾಡಿದ್ದಾರೆ.

ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ
ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ. ಮಕ್ಕಳು ಅಪೌಷ್ಟಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ. ಮಕ್ಕಳ ಮೇಲೆ, ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಸರ್ಕಾರ ಈ ಯೋಜನೆ ಜಾರಿ ಮಾಡಿದೆ. ಪ್ರೊಟೀನ್​ಗಾಗಿ ಮೊಟ್ಟೆ ನೀಡಲಾಗುತ್ತಿದೆ. ತಜ್ಞರು ಸಹ ಹೀಗೆ ಸಲಹೆ ನೀಡಿದ್ದಾರೆ. ನಾವು ಮಕ್ಕಳ ಮೇಲೆ ಒತ್ತಡ ಹೇರಿಲ್ಲ. ಮಕ್ಕಳಿಗೆ ಬಾಳೆ ಹಣ್ಣು ಕೂಡ ಕೊಡ್ತಿದ್ದೇವೆ‌. ಪ್ರೊಟೀನ್ ಯುಕ್ತ ಪದಾರ್ಥ ಆಯ್ಕೆ ಮಾಡ್ತಿದ್ದೇವೆ. ತಜ್ಞರು ಒಪ್ಪಿಕೊಂಡರೆ ಮುಂದಿನ ದಿನಗಳಲ್ಲಿ ಜಾರಿ ಮಾಡ್ತೇವೆ ಎಂದು ಮಂಡ್ಯದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.