ಬಗೆಹರಿಯದ ಪರಿಷ್ಕೃತ ಪಠ್ಯ ವಿವಾದ: ಅರ್ಧ ವರ್ಷ ಶಾಲೆ ಮುಗಿದರೂ ಸಿಗಲಿಲ್ಲ ಪುಸ್ತಕ
ಶಾಲಾ ಪಠ್ಯಪುಸ್ತು ಪರಿಷ್ಕೃತ ಸಮಸ್ಯೆ ಇದುವರೆಗೂ ಬಗೆಹರಿಯುತ್ತಿಲ್ಲ ಇದರಿಂದ ಅರ್ಧ ವರ್ಷ ಶಾಲೆ ಮುಗೀತಾ ಬಂದ್ರು ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಸಿಕ್ಕಿಲ್ಲ
ವರದಿ- ನಂದೀಶ್ ಮಲ್ಲೇನಹಳ್ಳಿ,ಏಷ್ಯಾನೆಟ್ ಸುವರ್ಣ ನ್ಯೂಸ್ ಬೆಂಗಳೂರು
ಬೆಂಗಳೂರು (ಸೆ.21): ಅರ್ಧ ವರ್ಷ ಶಾಲೆ ಮುಗೀತಾ ಬಂದ್ರು ಶಾಲಾ ವಿದ್ಯಾರ್ಥಿಗಳಿಗೆ ಪರಿಷ್ಕೃತ ಪಠ್ಯ ಪುಸ್ತಕ ಸಿಕ್ಕಿಲ್ಲ.ಹೀಗಾಗಿ ಪಠ್ಯಪುಸ್ತಕ ಇಲ್ಲದೆ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಶಿಕ್ಷಕರು ಪರದಾಡುತ್ತಿದ್ದಾರೆ.
9 ಹಾಗೂ 10 ನೇ ತರಗತಿ ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರಿಷ್ಕೃತ ಪಠ್ಯಪುಸ್ತಕ ದೊರೆತಿಲ್ಲ.ಪರಿಷ್ಕೃತ ಪಠ್ಯ ಪುಸ್ತಕ ಕಳುಹಿಸಿ ಕೊಡುವಂತೆ ಶಿಕ್ಷಣ ಇಲಾಖೆಗೆ ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಮನವಿ ಮಾಡಿದೆ. ಕಲ್ಯಾಣ ಕರ್ನಾಟಕ ಭಾಗದ ಇಂಗ್ಲೀಷ್ ಮಾಧ್ಯಮ ಶಾಲೆಗಳಿಗೆ ಪಠ್ಯ ಪುಸ್ತಕ ಕೊಡದ ಶಿಕ್ಷಣ ಇಲಾಖೆ ವಿರುದ್ಧ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಲ್ಲದೇ ಇರುವ ಪಠ್ಯ ಬಿಡುವಂತೆ ಸರ್ಕಾರಕ್ಕೆ ಪತ್ರ, ಪೇಚಿಗೆ ಸಿಲುಕಿದ ಸಾಹಿತಿಗಳು..!
9ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 10ನೇ ತರಗತಿಯ ಕನ್ನಡ ಪಠ್ಯಪುಸ್ತಕ ಪುಸ್ತಕ ಸಿಕ್ಕಿಲ್ಲ. ಶೈಕ್ಷಣಿಕ ವರ್ಷ ಪ್ರಾರಂಭವಾಗಿ ನಾಲ್ಕು ತಿಂಗಳು ಕಳೆದಿದೆ.ಆದ್ರೆ ಶಿಕ್ಷಣ ಇಲಾಖೆ ಇದುವರೆಗೂ ಪರಿಷ್ಕೃತ ಪಠ್ಯಪುಸ್ತಕಗಳನ್ನ ಶಾಲೆಗಳಿಗೆ ಕೊಟ್ಟಿಲ್ಲ.ಈ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ಭಾರಿ ಪತ್ರ ಬರೆದಿದ್ರು ಯಾವುದೇ ಪ್ರಯೋಜನವಾಗಿಲ್ಲ ಅಂತ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.
ಕೊನೆಯದಾಗಿ ಶಿಕ್ಷಣ ಇಲಾಖೆ ಪಠ್ಯಪುಸ್ತಕ ಕೊಡದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದು ಪಠ್ಯಪುಸ್ತಕ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಶಿಕ್ಷಣ ಇಲಾಖೆಗೆ ಸಾಕಷ್ಟು ಭಾರಿ ಮನವಿ ಮಾಡಲಾಗಿದ್ರು ಪಠ್ಯಪುಸ್ತಕ ಕೊಟ್ಟಿಲ್ಲ ಪಠ್ಯ ಪುಸ್ತಕ ಸಿಗದೆ ಮಕ್ಕಳಿಗೆ ಸಾಕಷ್ಟು ಸಮಸ್ಯೆ ಆಗ್ತಿದೆ.ಕೂಡಲೇ ಸರ್ಕಾರ ಇದನ್ನ ಗಂಭೀರವಾಗಿ ತೆಗೆದುಕೊಂಡು ಪಠ್ಯಪುಸ್ತಕ ಸಮಸ್ಯೆ ಬಗೆಹರಿಸುವಂತೆ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.