Coronavirus: ಕೊರೋನಾ ಏರಿಕೆ, ಜ. 31ರವರೆಗೆ ಶಾಲೆಗಳು ಬಂದ್

* ದೇಶದಲ್ಲಿ ಒಮಿಕ್ರಾನ್ ಆತಂಕದ ಮಧ್ಯೆ ಕೊರೋನಾ ಹೆಚ್ಚಳ
* ದೇಶದ ಕೆಲ ರಾಜ್ಯಗಳಲ್ಲಿ ಕೋವಿಡ್ ಕಠಿಣ ರೂಲ್ಸ್ ಜಾರಿ
* ಮುಂಜಾಗ್ರತಾ ಕ್ರಮವಾಗಿ ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ

Schools colleges closed In Some States Over Corona and Omicron In India rbj

ಬೆಂಗಳೂರು,(ಜ.03): ಒಮಿಕ್ರಾನ್ (Omicron) ಆತಂಕದ ಮಧ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ (Coronavirus) ಸಂಖ್ಯೆಯಲ್ಲಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲ ರಾಜ್ಯಗಳಲ್ಲಿ ಕೆಲ ಕಠಿಣ ನಿಯಮಗಳನ್ನ ಜಾರಿಗೆ ತರಲಾಗಿದೆ.

ಅದರಂತೆ ಮುಂಬೈನಲ್ಲಿ (Mumbai) 1 ರಿಂದ 9ನೇ ತರಗತಿಗಳು ಜನವರಿ 31ರವರೆಗೂ ಬಂದ್​ ಇರಲಿವೆ. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ(Students) ಎಂದಿನಂತೆ ತರಗತಿ ಮುಂದುವರಿಯಲಿದೆ ಎಂದು ಬೃಹನ್​ ಮುಂಬೈ ಮುನ್ಸಿಪಾಲ್​ ಕಾರ್ಪೋರೇಷನ್​ ಅಧಿಕೃತ ಮಾಹಿತಿ ನೀಡಿದೆ.

"

School Holiday: ಯುಪಿಯಲ್ಲಿ 15 ದಿನ ಶಾಲೆಗಳಿಗೆ ಚಳಿಗಾಲ ರಜೆ ಘೋಷಣೆ

ಉತ್ತರ ಪ್ರದೇಶದಲ್ಲಿ ಚಳಿಗಾಲ ರಜೆ ಘೋಷಣೆ
ಮಹಾಮಾರಿ ಕೊರೋನಾ ಸೋಂಕಿನ(Coronavirus) ಪ್ರಮಾಣ ಹೆಚ್ಚುತ್ತಿರುವ ಬೆನ್ನಲ್ಲೇ ಒಮಿಕ್ರಾನ್(Omicron) ಭೀತಿ ಸಹ ಶುರುವಾಗಿದೆ.

ಅದರಲ್ಲೂ ಚಳಿಗಾಲದಲ್ಲಿ ಶೀತ ಹೆಚ್ಚಾಗುತ್ತಿರುವುದರಿಂದ ಮಕ್ಕಳ ಆರೋಗ್ಯ ದೃಷ್ಠಿಯಿಂದ ಉತ್ತರ ಪ್ರದೇಶ(Uttar Pradesh) ಸರ್ಕಾರ ಶಾಲೆಗಳಿಗೆ ರಜೆ(School Holiday) ಘೋಷಿಸಿದೆ. ಇಂದಿನಿಂದ ಅಂದ್ರೆ ಡಿ.31ರಿಂದ ಜನವರಿ 14 ರವರೆಗೆ ಬಂದ್ ಮಾಡಲು ಮುಂದಾಗಿದ್ದು, 15 ದಿನಗಳ ಚಳಿಗಾಲದ ರಜಾ(Winter Vacations) ಎಂದು ನೀಡಿದೆ.

ಪಶ್ಚಿಮ ಬಂಗಾಳ ಮತ್ತೆ ಕೋವಿಡ್ ನಿರ್ಬಂಧ
 ಪಶ್ಚಿಮ ಬಂಗಾಳ ಮತ್ತೆ ಕೋವಿಡ್ ನಿರ್ಬಂಧಗಳನ್ನು ಮರಳಿ ಜಾರಿಗೊಳಿಸಿದೆ. ರಾಜ್ಯದಲ್ಲಿ ಭಾಗಶಃ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ. ಖಾಸಗಿ ಮತ್ತು ಸರ್ಕಾರಿ ಕಚೇರಿಗಳಲ್ಲಿನ ಉದ್ಯೋಗಿಗಳ ಹಾಜರಾತಿಯನ್ನು ಶೇ 50ರಷ್ಟು ನಿಗದಿಗೊಳಿಸಲಾಗಿದೆ. 

Coronavirus Update: ಕೊರೋನಾ ಹೆಚ್ಚಳ, ಕಠಿಣ ಕ್ರಮದ ಎಚ್ಚರಿಕೆ ಕೊಟ್ಟ ಸಿಎಂ ಬೊಮ್ಮಾಯಿ

ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ಸಮಯದಲ್ಲಿ ಅಗತ್ಯ ಹಾಗೂ ತುರ್ತು ಸೇವೆಗಳಿಗೆ ಮಾತ್ರವೇ ಅನುಮತಿ ನೀಡಲಾಗಿದೆ. ಸೋಮವಾರದಿಂದ ಎಲ್ಲ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗುತ್ತದೆ. ಜತೆಗೆ ಈಜುಕೊಳಗಳು, ಜಿಮ್‌ಗಳು, ಬ್ಯೂಟಿ ಪಾರ್ಲರ್, ಸಲೂನ್ ಹಾಗೂ ಯೋಗ ಕೇಂದ್ರಗಳನ್ನೂ ಮುಚ್ಚಲು ಸೂಚಿಸಲಾಗಿದೆ.

ಕರ್ನಾಟಕದ ಗೃಹ ಸಚಿವರ ಮಾತುಗಳು
ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕಫ್ರ್ಯೂವನ್ನು ಮುಂದುವರೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾತ್ರಿ ಕಫ್ರ್ಯೂವನ್ನು ಜಾರಿಗೊಳಿಸಲಾಗುತ್ತಿದೆ.

ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮತ್ತಷ್ಟು ದಿನ ರಾತ್ರಿ ಕಫ್ರ್ಯೂ ಮುಂದುವರೆಯಲಿದೆ. ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಲಾಕ್‍ಡೌನ್ ಅನಿವಾರ್ಯವಾಗಬಹುದು ಎಂದರು.

ಸದ್ಯಕ್ಕೆ ಲಾಕ್‍ಡೌನ್ ಮಾಡುವ ಉದ್ದೇಶ ಇಲ್ಲ. ಅನಿವಾರ್ಯವಾದರೆ ಮಾಡಬೇಕಾಗಬಹುದು. ಜನರ ಜೀವ ಉಳಿಸಲು ಆರ್ಥಿಕಾಭಿವೃದ್ಧಿ ಮತ್ತು ಶಾಲಾ -ಕಾಲೇಜು ಬಂದ್ ಮಾಡಬೇಕಾಗಬಹುದು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಕೋವಿಡ್ ನಿಯಮಗಳನ್ನು ಮುರಿಯದೆ ಸ್ವಯಂ ಅನುಸರಿಸಬೇಕು ಎಂದು ಹೇಳಿದರು.

ಸಾರ್ವಜನಿಕರ ಸಹಕಾರ ಸೂಕ್ತ ರೀತಿಯಲ್ಲಿ ದೊರೆಯದಿದ್ದರೆ ಲಾಕ್‍ಡೌನ್ ಅನಿವಾರ್ಯವಾಗಬಹುದು. ಈಗಾಗಲೇ ಮಾಸ್ಕ್ ಧರಿಸದೆ ಓಡಾಟ ಮಾಡುವುದು ಕಂಡು ಬರುತ್ತಿದೆ. ಮದುವೆ ಮೊದಲಾದ ಕಾರ್ಯಕ್ರಮಗಳಿಗೆ ಸಾವಿರಾರು ಜನ ಸೇರುತ್ತಿದ್ದಾರೆ. ಇದು ಸೋಂಕು ಹರಡಲು ಎಡೆಮಾಡಿಕೊಡಬಹುದು. ಈಗಾಗಲೇ ಕೋವಿಡ್ 2ನೇ ಅಲೆಯಲ್ಲಿ ಉಂಟಾದ ಸಾವು-ನೋವುಗಳು ನಮ್ಮ ನೆನಪಿನಲ್ಲಿವೆ. ಅದಕ್ಕೆ ಅವಕಾಶ ಕೊಡದಂತೆ ತಡೆಯುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ.97ರಷ್ಟು ಮೊದಲ ಹಾಗೂ ಶೇ.81ರಷ್ಟು ಎರಡನೇ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಇದಕ್ಕಾಗಿ ಅಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ತಿಳಿಸಿದರು.

ಸಂಪುಟ ಸಭೆಯಲ್ಲಿ ನಿರ್ಣಯ
 ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳ ಅಗತ್ಯವನ್ನು ಮನಗಂಡು ತಜ್ಞರ ಜೊತೆ ಮಾತುಕತೆ, ಚರ್ಚೆ ನಡೆಸುತ್ತೇವೆ. ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಜೊತೆ ಸಚಿವ ಸಂಪುಟ ನಡೆಸಿ ಚರ್ಚಿಸುತ್ತೇನೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಒಟ್ಟಾರೆ ಸ್ಥಿತಿಗತಿ, ತೆಗೆದುಕೊಳ್ಳಬೇಕಾದ ದೀರ್ಘಾವಧಿ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇಂದು ರಾಜ್ಯಾದ್ಯಂತ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತಿದ್ದೇನೆ. ಯುವಜನತೆಯನ್ನು ಕೊರೋನಾ ಸುರಕ್ಷಾ ಚಕ್ರದ ಒಳಗೆ ತರಬೇಕು ಎಂಬುದು ಸರ್ಕಾರದ ಆದ್ಯತೆಯಾಗಿದೆ. ಇದಕ್ಕೆ ಶಿಕ್ಷಕರು, ಪೋಷಕರು, ಮಕ್ಕಳು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.

Latest Videos
Follow Us:
Download App:
  • android
  • ios