ನಾಳೆ‌ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಈ ವೆಬ್‌ಸೈಟ್‌ ನೋಡಿ

ಏಪ್ರಿಲ್‌ 21ರ ಶುಕ್ರವಾರ ಬೆಳಗ್ಗೆ ದ್ವಿತೀಯ ಪಿಯು ಫಲಿತಾಂಶ (PUC Exam result)  ಪ್ರಕಟವಾಗಲಿದೆ. ಮಾರ್ಚ್‌ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಾಗುತ್ತದೆ. 

Second PUC exam announced on April 21 sat

ಬೆಂಗಳೂರು (ಏ.20): ಏಪ್ರಿಲ್‌ 21ರ ಶುಕ್ರವಾರ ಬೆಳಗ್ಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್‌ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು https://karresults.nic.in/  ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಾಗುತ್ತದೆ. 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಆದೇಶ ಹೊರಡಿಸಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಪರೀಕ್ಷಾ ಮಂಡಳಿಯಿಂದ ಸುದ್ದಿಗೋಷ್ಟಿ ನಡೆಸಲಾಗುತ್ತದೆ. ನಂತರ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್‌ನಲ್ಲಿ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೋವಿಡ್‌ ನಂತರ ಪೂರ್ಣ ಪ್ರಮಾಣದ ಪಿಯು ಪರೀಕ್ಷೆ:  ರಾಜ್ಯದಲ್ಲಿ ಮಾ.9 ರಿಂದ ಮಾ.29ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 7.26 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆಗೆ ನೋಂದಣಿ ಮಾಡಿಕೊಮಡಿದ್ದರು. ಅದರಲ್ಲಿ ಶೇ.6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆದಿದ್ದರು. ಇನ್ನು ಕಳೆದ ಎರಡು ವರ್ಷಗಳ ಕಾಲ ಕೋವಿಡ್‌ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಕೋವಿಡ್‌ ಬಳಿಕ ಪೂರ್ಣ ಪ್ರಮಾಣದಲ್ಲಿ ಪರೀಕ್ಷೆ ಬರೆದಿದ್ದರು. ಹೀಗಾಗಿ, ಪರೀಕ್ಷೆಯ ಫಲಿತಾಂಶದ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

ಪಿಯು ಪರೀಕ್ಷಾ ಕೊಠಡಿಯೊಳಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಸ್ಕ್ವಾಡ್‌: ಎಡವಟ್ಟು ಮಾಡಿಕೊಂಡ ಅಧಿಕಾರಿಗೆ ನೋಟಿಸ್‌

 

ಪಾಸಾಗುವ ಗಡಿಯಲ್ಲಿದ್ದರೆ ಗ್ರೇಸ್‌ ಅಂಕ: ದ್ವಿತೀಯ ಪಿಯುಸಿ ಫಲಿತಾಂಶ ಉತ್ತಮ ಪಡಿಸುವ ದೃಷ್ಟಿಯಿಂದ ಈ ಬಾರಿಯ ಪರೀಕ್ಷೆಗಳಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು ಹೆಚ್ಚಿಸಲಾಗಿತ್ತು. ಜತೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರತಿ ವರ್ಷ ಅನುಸರಿಸುತ್ತಿದ್ದ ಗ್ರೇಸ್‌ ಅಂಕಗಳನ್ನು ಮುಂದುವರಿಸಲು ಕೂಡ ನಿರ್ಧರಿಸಿದೆ. ಒಟ್ಟಾರೆ ಫಲಿತಾಂಶ 219 ಅಂಕ ಬಂದಿದ್ದು ಮೂರು ವಿಷಯಗಳಲ್ಲಿ ಪಾಸಾಗಲು ಗಡಿ ರೇಖೆಯಲ್ಲಿದ್ದರೆ ಅಂತಹ ಮಕ್ಕಳಿಗೆ ಗ್ರೇಸ್‌ ಅಂಕ ನೀಡಿ ಪಾಸು ಮಾಡಲಾಗುತ್ತದೆ. ಇದು ಪಿಯುಸಿ ಮಾತ್ರವಲ್ಲ ಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಅನ್ವಯಿಸುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದರು.

ಕೋವಿಡ್‌ ವೇಳೆ ಪರೀಕ್ಷೆ ಬರೆಯದೇ ಎಸ್‌ಎಸ್‌ಎಲ್‌ಸಿ ಪಾಸಾದವರ ಪಿಯುಸಿ ಫಲಿತಾಂಶ: ಇನ್ನು ಜಾಗತಿಕವಾಗಿ 2020-21ನೇ ಸಾಲಿನಲ್ಲಿ ಭಾರಿ ಆತಂಕ ಸೃಷ್ಟಿಸಿದ್ದ ಕೋವಿಡ್‌ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯಿಸಿ, ಪದವಿ ತರಗತಿ ಸೇರಿದಂತೆ ಎಲ್ಲ ವಿದ್ಯಾರ್ಥಿಗಳನ್ನು ಕೂಡ ಪರೀಕ್ಷೆ ಬರೆಯದೇ ಪಾಸ್‌ ಮಾಡಲಾಗಿತ್ತು. ಹೀಗೆ, 2020-21ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯದೇ ಉತ್ತೀರ್ಣರಾಗಿದ್ದ ವಿದ್ಯಾರ್ಥಿಗಳು ಈ ಬಾರಿ 2022-23ನೇ ಸಾಲಿನಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಬರೆದಿದ್ದರು. ಆದರೆ, ಪಬ್ಲಿಕ್‌ ಪರೀಕ್ಷೆಯ ಅನುಭವವೇ ಇಲ್ಲದೆ ಒಮ್ಮೆಲೆ ದ್ವಿತೀಯ ಪಿಯನಲ್ಲಿ ಪಬ್ಲಿಕ್‌ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಫಲಿತಾಂಶದ ಮೇಲೆಯೂ ಹೆಚ್ಚಿನ ನಿರೀಕ್ಷೆಯಿದೆ. 

Latest Videos
Follow Us:
Download App:
  • android
  • ios