ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟಿಸುವ ಬಗ್ಗೆ ಸಚಿವ ಸುರೇಶ್ ಕುಮಾರ್ ಮಹತ್ವದ ಘೋಷಣೆ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ 
ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ದಿನಾಂಕ ತಿಳಿಸಿದ ಸಚಿವ

Second PUC Result announce In July 2nd Week Says Minister Suresh Kumar rbj

ಬೆಂಗಳೂರು, (ಜೂನ್.28):  ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ 2ನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌  ತಿಳಿಸಿದ್ದಾರೆ.

ಕೊರೋನಾ ಭೀತಿ ಹಿನ್ನೆಲೆಲ್ಲಿ ರದ್ದು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಇದೀಗ ಫಲಿತಾಂಶ ಪ್ರಕಟಿಸುವುದು ಬಾಕಿ ಇದೆ.

ಇನ್ನು ಈ ಬಗ್ಗೆ ಇಂದು (ಸೋಮವಾರ) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸುರೇಶ್ ಕುಮಾರ್, ಜುಲೈ 30ರ ಒಳಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಜು. 19 ಹಾಗೂ 22ಕ್ಕೆ SSLC ಪರೀಕ್ಷೆ: ಯಾವ ಪರೀಕ್ಷೆ ಯಾವಾಗ? ಇಲ್ಲಿದೆ ಮಾಹಿತಿ

ಯಾರಿಗೂ ಅನ್ಯಾಯವಾಗದ ರಿತಿಯಲ್ಲಿ ಫಲಿತಾಂಶ ಬರಲಿದೆ. ತಜ್ಞರು ಸೂಚಿಸಿದ ಮಾನದಂಡದ ಮೇಲೆ ಫಲಿತಾಂಶ ನೀಡಲಾಗುತ್ತದೆ. ಒಂದು ವೇಳೆ ಯಾವುದೇ ವಿದ್ಯಾರ್ಥಿಗೆ ಫಲಿತಾಂಶ ತೃಪ್ತಿಯಾಗದೇ ಇದ್ದಲ್ಲಿ, ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದರು.

ಕೋವಿಡ್ ಕಾರಣದಿಂದ ಈ ಬಾರಿ ರಾಜ್ಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಮತ್ತು ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಫಲಿತಾಂಶ ಪ್ರಕಟಿಸಲಾಗುತ್ತದೆ.
 

Latest Videos
Follow Us:
Download App:
  • android
  • ios