ಏಪ್ರಿಲ್‌ 10ರ ಆಸುಪಾಸಲ್ಲಿ ದ್ವಿತೀಯ ಪಿಯು ಫಲಿತಾಂಶ?

ಇನ್ನೊಂದು ವಾರದೊಳಗೆ ಮೌಲ್ಯಮಾಪನ ಪೂರ್ಣ ಮುಗಿದು ಅಂಕಗಳನ್ನು ಕಂಪ್ಯೂಟರೀಕರಣಗೊಳಿಸುವ ಕಾರ್ಯವೂ ಪೂರ್ಣಗೊಳ್ಳಲಿದೆ. ಹಾಗಾಗಿ ಎಲ್ಲ ಅಂದುಕೊಂಡಂತೆ ನಡೆದರೆ ಏಪ್ರಿಲ್‌ ಎರಡನೇ ವಾರ ಫಲಿತಾಂಶ ಪ್ರಕಟಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ. ಏ.10 ಅಥವಾ ಆಸುಪಾಸಿನ ದಿನದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

Second PUC Result Will be Announce Around April 10th in Karnataka grg

ಬೆಂಗಳೂರು(ಏ.02):  ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್‌ ಎರಡನೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ಮಾರ್ಚ್‌ 1ರಿಂದ 22ರವರೆಗೆ ರಾಜ್ಯದ 1120ಕ್ಕೂ ಹೆಚ್ಚು ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸಿದ್ದು, ಸುಮಾರು 7 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಮಂಡಳಿಯ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಬಹುತೇಕ ಮೌಲ್ಯಮಾಪನ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದೆ. ಇನ್ನೊಂದು ವಾರದೊಳಗೆ ಮೌಲ್ಯಮಾಪನ ಪೂರ್ಣ ಮುಗಿದು ಅಂಕಗಳನ್ನು ಕಂಪ್ಯೂಟರೀಕರಣಗೊಳಿಸುವ ಕಾರ್ಯವೂ ಪೂರ್ಣಗೊಳ್ಳಲಿದೆ. ಹಾಗಾಗಿ ಎಲ್ಲ ಅಂದುಕೊಂಡಂತೆ ನಡೆದರೆ ಏಪ್ರಿಲ್‌ ಎರಡನೇ ವಾರ ಫಲಿತಾಂಶ ಪ್ರಕಟಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ. ಏ.10 ಅಥವಾ ಆಸುಪಾಸಿನ ದಿನದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಪಿಯು-2 ಪರೀಕ್ಷೆ ಪೂರ್ಣಕ್ಕೆ ಮೊದಲೇ ಮಾದರಿ ಉತ್ತರ ಪ್ರಕಟ..!

ಇನ್ನು, ಮಾ.28ಕ್ಕೆ ಮುಕ್ತಾಯವಾದ 5, 8 ಮತ್ತು 9ನೇ ತರಗತಿ ಮಕ್ಕಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಕೂಡ ತಾಲೂಕು ಹಂತದಲ್ಲಿ ನಡೆಯುತ್ತಿದ್ದು, ಅಂತಿಮ ಹಂತಕ್ಕೆ ಬಂದಿದೆ. ಈ ಮಕ್ಕಳ ಫಲಿತಾಂಶವನ್ನು ಕೂಡ ಏ.8ರಿಂದ 10ರೊಳಗೆ ಪ್ರಕಟಿಸಲು ಮಂಡಳಿ ಮುಂದಾಗಿದೆ ಎಂದು ತಿಳಿದು ಬಂದಿದೆ.

Latest Videos
Follow Us:
Download App:
  • android
  • ios