Textbook Revision Row: ಪರಿಷ್ಕೃತ ಪಠ್ಯ ಕಸದ ಬುಟ್ಟಿಗೆ ಎಸೆಯಿರಿ: ಸಿದ್ದರಾಮಯ್ಯ

ಶಾಲಾ ಪಠ್ಯ ಪರಿಷ್ಕರಣೆಯಲ್ಲಿ ಅಂಬೇಡ್ಕರ್‌, ಬಸವಣ್ಣ, ಕುವೆಂಪು, ನಾರಾಯಣಗುರು ಸೇರಿದಂತೆ ಹಲವರಿಗೆ ಅವಮಾನ ಮಾಡಲಾಗಿದೆ. ಅವರು ಹಿಂದೂಗಳಲ್ಲವೇ. ಕನ್ನಡಿಗರ ಸಹನೆ ಪರೀಕ್ಷಿಸದೆ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

siddaramaiah hits out at basavaraj bommai govt over textbook revision gvd

ಬೆಂಗಳೂರು (ಜೂ.06): ಶಾಲಾ ಪಠ್ಯ ಪರಿಷ್ಕರಣೆಯಲ್ಲಿ ಅಂಬೇಡ್ಕರ್‌, ಬಸವಣ್ಣ, ಕುವೆಂಪು, ನಾರಾಯಣಗುರು ಸೇರಿದಂತೆ ಹಲವರಿಗೆ ಅವಮಾನ ಮಾಡಲಾಗಿದೆ. ಅವರು ಹಿಂದೂಗಳಲ್ಲವೇ. ಕನ್ನಡಿಗರ ಸಹನೆ ಪರೀಕ್ಷಿಸದೆ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಭಾನುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ಹಿಂದೂ ಭಾವನೆಗಳಿಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆ ಮಾಡಿರುವುದಾಗಿ ಸಚಿವ ಬಿ.ಸಿ. ನಾಗೇಶ್‌ ಅಸಲಿ ಕಾರಣ ಹೇಳಿದ್ದಾರೆ. ಸಚಿವರ ಪ್ರಕಾರ ಹಿಂದೂಗಳು ಯಾರು? ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯ ಧರ್ಮೀಯರಲ್ಲ, ಹಿಂದೂಗಳೇ ಅಲ್ಲವೇ ಸಚಿವರೇ ಎಂದಿದ್ದಾರೆ.

ಪಠ್ಯ ಪರಿಷ್ಕರಣೆ ವಿವಾದ: ಸಚಿವ ಬಿಸಿ ನಾಗೇಶ್​ಗೆ ಸಿದ್ದರಾಮಯ್ಯ ಸಾಲು-ಸಾಲು ಪ್ರಶ್ನೆ

ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹು ಸಂಖ್ಯಾತ ಹಿಂದೂಗಳಿಗೂ ಸೇರಿದಂತೆ ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲ. ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ? ಬಸವಣ್ಣ ಮತ್ತು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಹಿಂದೂ ಧರ್ಮವನ್ನು ತ್ಯಜಿಸಿದವರು ಎನ್ನುವ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? 

40% ಭ್ರಷ್ಟಾಚಾರಕ್ಕೆ ಮಂತ್ರಿಸ್ಥಾನ ಕಳೆದುಕೊಂಡ ಈಶ್ವರಪ್ಪನಿಂದ ನಾನು ಪಾಠ ಕಲಿಬೇಕಾ?: ಸಿದ್ದರಾಮಯ್ಯ

ನಾರಾಯಣ ಗುರು, ಪೆರಿಯಾರ್‌, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿ ತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೆ? ಹಾಗೆಂದು ಹೇಳಿಬಿಡಿ ಎಂದು ಸವಾಲು ಎಸೆದಿದ್ದಾರೆ. ಈ ದೇಶದ ಬಡವರಲ್ಲಿ ಹೆಚ್ಚು ಮಂದಿ ಹಿಂದೂ ಧರ್ಮದಲ್ಲಿರುವ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವಣ್ಣ, ಅಂಬೇಡ್ಕರ್‌, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Latest Videos
Follow Us:
Download App:
  • android
  • ios