Asianet Suvarna News Asianet Suvarna News

ರಾಜ್ಯ ಸರ್ಕಾರ ಹೊರಡಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ ಆದೇಶ ಹಿಂಪಡೆಯುವಂತೆ ಸಿದ್ದು ಆಗ್ರಹ

* ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಿದ್ದರಾಮಯ್ಯ ಆಕ್ಷೇಪ
* ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ
* ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾದ ಆದೇಶವನ್ನು ಹಿಂಪಡೆಯುವಂತೆ ಆಗ್ರಹ

Siddaramaiah opposes implementing NEP-2020 In Karnataka rbj
Author
Bengaluru, First Published Aug 8, 2021, 7:57 PM IST

ಬೆಂಗಳೂರು, (ಆ.08): ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾದ ಆದೇಶವನ್ನು ಕೂಡಲೇ ಹಿಂಪಡೆದು ವಿಸ್ತೃತ ಚರ್ಚೆ ನಡೆಸಿದ ಬಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೇಶದಲ್ಲೇ ಮೊದಲು: ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕದಲ್ಲಿ ಜಾರಿ, ಅಶ್ವತ್ಥ್‌

ಯಾವುದೇ ಚರ್ಚೆ ನಡೆಸದೆ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ನಿಲುವು, ದೇಶದ ಒಕ್ಕೂಟ ತತ್ವಕ್ಕೆ ಮಾಡಿರುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಾಡಿನ ಶಿಕ್ಷಣ ತಜ್ಞರು, ಉಪನ್ಯಾಸಕರು, ಹಿರಿಯರು ಮತ್ತು ವಿರೋಧ ಪಕ್ಷಗಳ ಮುಖಂಡರು ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ರಾಜ್ಯದ ಮೇಲೆ ಹೇರಬೇಡಿ, ಸಂಬಂಧಿಸಿದ ವಲಯಗಳ ಜನರ ಜೊತೆಗೆ ವಿಸ್ತೃತ ಚರ್ಚೆ ನಡೆಸಿ, ಸಾಧಕ ಬಾಧಕಗಳನ್ನು ಪರಿಶೀಲಿಸಿದ ನಂತರ ತೀರ್ಮಾನಿಸಿ ಎಂದು‌ ಹೇಳಿದ್ದೆವು.

 ಆದರೆ ಹಾಗೆ ಮಾಡದೆ ಈ ಅನಾಹುತಕಾರಿ ನೀತಿಯನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೆ ಜಾರಿಗೊಳಿಸಲು ಆದೇಶ ಹೊರಡಿಸಲಾಗಿದೆ. ಈ ಆದೇಶದಲ್ಲಿ ಹಲವಾರು ಅಪಾಯಕಾರಿಯಾದ ಅಂಶಗಳಿವೆ. ಬಡವರ, ಮಧ್ಯಮ ವರ್ಗದವರ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯುವ ಕನಸಿಗೆ ನೇರವಾಗಿ ಬೆಂಕಿ ಇಡುವ ಪ್ರಕ್ರಿಯೆಯ ಭಾಗವಾಗಿ ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಕಿಡಿಕಾರಿದರು.

Follow Us:
Download App:
  • android
  • ios