SSLC ಪರೀಕ್ಷಾ ವೆಚ್ಚ ಶುಲ್ಕ ಸಂಗ್ರಹ; ಉಚಿತ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ವಿರೋಧಿ: ಲೋಕೇಶ್ ತಾಳಿಕಟ್ಟೆ
SSLC ಪೂರ್ವಸಿದ್ಧತಾ ಪರೀಕ್ಷಾ ವೆಚ್ಚವೆಂದು ಪ್ರತಿ ವಿದ್ಯಾರ್ಥಿಗಳಿಂದ ಪರೀಕ್ಷೆ ಶುಲ್ಕ ಸಂಗ್ರಹಕ್ಕೆ ಮುಂದಾಗಿರುವ ಕರ್ನಾಟಕ ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಹೊರಡಿಸಿರುವ ಸುತ್ತೋಲೆ ಇದೀಗ ವಿವಾದಕ್ಕೀಡಾಗಿದ್ದು, ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳು ತಿರುಗಿ ಬಿದ್ದಿವೆ.
ವರದಿ- ನಂದೀಶ್ ಮಲ್ಲೇನಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್ ಬೆಂಗಳೂರು
ಬೆಂಗಳೂರು (ಫೆ.6): SSLC ಪೂರ್ವಸಿದ್ಧತಾ ಪರೀಕ್ಷಾ ವೆಚ್ಚವೆಂದು ಪ್ರತಿ ವಿದ್ಯಾರ್ಥಿಗಳಿಂದ ಪರೀಕ್ಷೆ ಶುಲ್ಕ ಸಂಗ್ರಹಕ್ಕೆ ಮುಂದಾಗಿರುವ ಕರ್ನಾಟಕ ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಹೊರಡಿಸಿರುವ ಸುತ್ತೋಲೆ ಇದೀಗ ವಿವಾದಕ್ಕೀಡಾಗಿದ್ದು, ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳು ತಿರುಗಿ ಬಿದ್ದಿವೆ.
ಈ ಸಂಬಂಧ ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಮದ್ಯಪ್ರವೇಶ ಮಾಡಿ ಶುಲ್ಕ ಸಂಗ್ರಹಕ್ಕೆ ಬ್ರೇಕ್ ಹಾಕುವಂತೆ ಮನವಿ ಮಾಡಿದ್ದಾರೆ.
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ!
SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಸರ್ಕಾರ ಪ್ರತಿ ವಿದ್ಯಾರ್ಥಿಯಿಂದ 50 ರೂಪಾಯಿ ಪರೀಕ್ಷೆಯ ಖರ್ಚು ಅಂತಾ ಸಂಗ್ರಹಕ್ಕೆ ಮುಂದಾಗಿದೆ. ಇದಕ್ಕೆ ವ್ಯಾಪಾಕ ವಿರೋಧ ವ್ಯಕ್ತವಾಗಿದೆ. ಖಾಸಗಿ ಶಾಲಾ ಒಕ್ಕೂಟಗಳು ಖಂಡಿಸಿವೆ. ವಿದ್ಯಾರ್ಥಿಗಳಿಂದ 50 ರೂಪಾಯಿ ಶುಲ್ಕ ಸಂಗ್ರಹಿಸದೇ ಸರ್ಕಾರವೇ ಪೂರ್ವ ಸಿದ್ಧತಾ ಪರೀಕ್ಷೆ ಖರ್ಚು ಭರಿಸುವಂತೆ ಒತ್ತಾಯಿಸಲಾಗಿದೆ. ಪರೀಕ್ಷಾ ಶುಲ್ಕದ ಹೆಸರಿನಲ್ಲಿ ಬಡ ವಿದ್ಯಾರ್ಥಿಗಳ ಶೋಷಣೆ ಮಾಡುವುದು ಸರಿಯಲ್ಲ ಎಂದು ಖಾಸಗಿ ಶಾಲೆಗಳ ಒಕ್ಕೂಟದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತಿರುವುದು ಪುಣ್ಯದ ಫಲ: ಮಧು ಬಂಗಾರಪ್ಪ
ಪರೀಕ್ಷಾ ಶುಲ್ಕ ಸಂಗ್ರಹಕ್ಕೆ ಪೋಷಕರು ಸಹ ಆಕ್ರೋಶ ವ್ಯಕ್ತಪಡಿಸಿದ್ದು. ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ಪಡೆಯದೇ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ. ಅಂದಹಾಗೆ ಕಳೆದ ವರ್ಷವೂ ಈ ಶುಲ್ಕ ಸಂಗ್ರಹಕ್ಕೆ ಮುಂದಾಗಿದ್ದಾಗ ಖಾಸಗಿ ಶಾಲಾ ಒಕ್ಕೂಟಗಳು ವಿರೋಧಿಸಿದ್ದವು. ಇದೀಗ ಮತ್ತೆ ಎಸ್‌ಎಸ್‌ಎಲ್‌ಸಿ ಶುಲ್ಕ ವಿಧಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿವೆ. ಮಕ್ಕಳಿಂದ ಪರೀಕ್ಷಾ ಶುಲ್ಕವೆಂದು 50 ರೂ. ಸಂಗ್ರಹಿಸುವ ಹೊಸ ಆದೇಶ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ವಿರೋಧಿಯಾಗಿದೆ. ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಮೊದಲೇ ಶಿಕ್ಷಕರಿಲ್ಲ, ಶಾಲೆಗಳಲ್ಲಿ ಮಕ್ಕಳು ಸಹ ಗಣನೀಯವಾಗಿ ಕಡಿಮೆ ಆಗುತ್ತಿದ್ದಾರೆ. ಶಾಲೆಗಳಿಗೆ ಕನಿಷ್ಟ ಮೂಲಭೂತ ಸೌಲಭ್ಯಗಳು ಇಲ್ಲದಾಗಿದೆ ಹೀಗಿರುವಾಗ ಶಿಕ್ಷಣ ವಿದ್ಯಾರ್ಥಿಗಳಿಂದ ಪರೀಕ್ಷೆ ಶುಲ್ಕ ಸಂಗ್ರಹಿಸುವುದು ಎಷ್ಟು ಸರಿ? ಶಿಕ್ಷಣ ಸಚಿವರ ಇಂತಹ ವ್ಯಾಪಾರಿ ಪ್ರವೃತ್ತಿಗೆ ಬ್ರೇಕ್ ಹಾಕುಬೇಕು, ಶುಲ್ಕ ಸಂಗ್ರಹದ ಆದೇಶ ವಾಪಸ್ ಪಡೆಯುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮನವಿ ಮಾಡಿಕೊಂಡಿದ್ದಾರೆ.