SSLC, PUC ಪರೀಕ್ಷೆ ಯಾವಾಗ? ದಿನಾಂಕ ಘೋಷಿಸಿದ ಸಚಿವ ಸುರೇಶ್ ಕುಮಾರ್

ಕೊರೋನಾ ಭೀತಿಯ ನಡುವೆ ಮಕ್ಕಳ ಮುಂದಿನ ಶೈಕ್ಷಣಿಕ ಹಿತದೃಷ್ಟಿಯಿಂದ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಅಲ್ಲದೇ ಇದೀಗ ಪರೀಕ್ಷೆಗಳ ಬಗ್ಗೆ ಸಚಿವರು ಮಹತ್ವದ ಮಾಹಿತಿ ಕೊಟ್ಟಿದ್ದಾರೆ.

sslc exam to be held in june and second puc exams on may Says Suresh Kumar rbj

ಬಾಗಲಕೋಟೆ, (ಜ.23): ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜೂನ್ ಮೊದಲ ವಾರದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

 ಇಂದು (ಶನಿವಾರ) ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ಈಗಾಗಲೇ ಶೇಕಡಾ 30ರಷ್ಟು ಪಠ್ಯ ಕಡಿಮೆ ಮಾಡಲಾಗಿದೆ. ಮುಂದಿನ ತರಗತಿ ಕಲಿಕೆಗೆ ಕೊರತೆಯಾಗದಂತೆ ಪಠ್ಯವಿಷಯ ಕಡಿಮೆ ಮಾಡಿದ್ದೇವೆ. ಕೋವಿಡ್ ಕಾರಣದಿಂದ ಪರೀಕ್ಷೆಗೆ ಶಾಲಾ ಮಕ್ಕಳ ಹಾಜರಾತಿ ಕಡ್ಡಾಯವಲ್ಲ ಎಂದು ತಿಳಿಸಿದರು.

ಖಾಸಗಿ ಶಾಲೆಗಳ ಫೀ ಕಿರಿಕಿರಿ : ಮಹತ್ವದ ಸಲಹೆ ಕೊಟ್ಟ ಸರ್ಕಾರ

ಪರೀಕ್ಷೆ ಯಾವ ರೀತಿ ನಡೆಸಬೇಕು ಅಂತ ಎಸ್‌ಎಸ್​​ಎಲ್​​ಸಿ ಮತ್ತು ಪಿಯು ಬೋಡ್೯ಗಳು ತೀಮಾ೯ನಿಸುತ್ತವೆ. ಪರೀಕ್ಷೆಗೆ ಶಾಲಾ ಮಕ್ಕಳ ಹಾಜರಾತಿ ಕಡ್ಡಾಯವಲ್ಲ, ಕೋವಿಡ್ ಕಾರಣ ವಿನಾಯಿತಿ ನೀಡಿದೆ ಎಂದು ಮಾಹಿತಿ ನೀಡಿದರು.

Latest Videos
Follow Us:
Download App:
  • android
  • ios