ನಾಳೆಯಿಂದ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ
ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ: ಮಂಡಳಿ ಅಧ್ಯಕ್ಷೆ ಮಂಜುಶ್ರೀ
ಬೆಂಗಳೂರು(ಮಾ.24): ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಸೋಮವಾರದಿಂದ (ಮಾ.25) ರಾಜ್ಯಾದ್ಯಂತ ವಾರ್ಷಿಕ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 2,750 ಕೇಂದ್ರಗಳಲ್ಲಿ ಏ.6ರವರೆಗೆ ಪರೀಕ್ಷೆಗಳು ನಡೆಯಲಿವೆ.
ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಈ ដូ៖ 4,41, 910 5, 4,28,058 ಬಾಲಕಿಯರಾಗಿದ್ದಾರೆ.ಒಟ್ಟುವಿದ್ಯಾರ್ಥಿಗಳ ಪೈಕಿ8.10 ಲಕ್ಷಕ್ಕೂ ಹೆಚ್ಚುಶಾಲಾವಿದ್ಯಾರ್ಥಿ ಗಳು (ರೆಗ್ಯುಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾ ವರ್ತಿತ ವಿದ್ಯಾರ್ಥಿಗಳಿದ್ದಾರೆ. 5,4254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ದ್ವಾರದ ಕಡೆ ಮುಖ ಮಾಡುವುದು ನಿರ್ಬಂಧ
ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.