SSLC ಅಂತಿಮ ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ನೋಡಿ ವೇಳಾಪಟ್ಟಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಮಾ.31ರಿಂದ ಏ.12ರವರೆಗೆ ಆರು ವಿಷಯಗಳ ಪರೀಕ್ಷೆ ನಡೆಯಲಿದೆ.
ಬೆಂಗಳೂರು (ಜ.18): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಮಾ.31ರಿಂದ ಏ.12ರವರೆಗೆ ಆರು ವಿಷಯಗಳ ಪರೀಕ್ಷೆ ನಡೆಯಲಿದೆ. ಇಲ್ಲಿದೆ ನೋಡಿ ವೇಳಾಪಟ್ಟಿಯ ಪೂರ್ಣ ವಿವರ..
ಮಾ.31ರಂದು - ಪ್ರಥಮ ಭಾಷೆ
ಏ.3ರಂದು - ಗಣಿತ, ಸಮಾಜಶಾಸ್ತ್ರ
ಏ. 6ರಂದು - ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
ಏ. 8ರಂದು - ಕೋರ್ ವಿಷಯ, ಅರ್ಥಶಾಸ್ತ್ರ
ಏ. 10ರಂದು - ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ
ಏ. 12ರಂದು - ತೃತೀಯ ಭಾಷೆ