ಎಸ್‌ಎಸ್‌ಎಲ್‌ಸಿ ಪ್ರಿಪರೇಟರಿ ಪರೀಕ್ಷೆ ಶುಲ್ಕ ಹೆಚ್ಚಿಸಿಲ್ಲ: ಸಚಿವ ಬಿ.ಸಿ.ನಾಗೇಶ್‌

ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಹಿನ್ನೆಲೆಯಲ್ಲಿ ಹಿಂದಿನಂತೆಯೇ ವಿದ್ಯಾರ್ಥಿಗೆ ತಲಾ 60 ರು. ಪರೀಕ್ಷಾ ಶುಲ್ಕ ಮುಂದುವರೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

SSLC Preparatory Exam fees has not increased Says Minister BC Nagesh gvd

ವಿಧಾನ ಪರಿಷತ್‌ (ಫೆ.14): ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಹಿನ್ನೆಲೆಯಲ್ಲಿ ಹಿಂದಿನಂತೆಯೇ ವಿದ್ಯಾರ್ಥಿಗೆ ತಲಾ 60 ರು. ಪರೀಕ್ಷಾ ಶುಲ್ಕ ಮುಂದುವರೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ. ಸೋಮವಾರ ಜೆಡಿಎಸ್ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರು ಮಂಡಿಸಿದ ಸೂಚನಾ ಪತ್ರಕ್ಕೆ ಉತ್ತರಿಸಿದ ಸಚಿವರು, 2021-22ನೇ ಸಾಲಿನ ಎಸ್ಸೆಸ್ಸೆಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಪತ್ರಿ ವಿದ್ಯಾರ್ಥಿಗೆ 60 ರು. ಪರೀಕ್ಷಾ ಶುಲ್ಕ ನಿಗದಿಪಡಿಸಿದ್ದು, ಈ ಶುಲ್ಕವನ್ನು ಪಡೆದು ಪರೀಕ್ಷೆ ನಡೆಸಲಾಗಿದೆ. ಶುಲ್ಕವನ್ನೇ ಈ ಬಾರಿಯೂ ಪಡೆಯಲಾಗುತ್ತಿದೆ ಎಂದು ಹೇಳಿದರು.

ಈ ಪರೀಕ್ಷೆಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ರಾಜ್ಯವ್ಯಾಪ್ತಿ ವಿತರಿಸಲಾಗಿತ್ತು ಎಂದರು. ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ ಮಾದರಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಬಿಇಓಗಳ ಲಾಗಿನ್‌ಗೆ ಅಪ್ಲೋಡ್‌ ಮಾಡಲಾಗುತ್ತದೆ. ಬಳಿಕ ಬಿಇಓ ಹಂತದಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯಂತೆ ವಿಷಯವಾರು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿಕೊಂಡು ಪರೀಕ್ಷೆ ನಡೆಸಲು ಸರ್ಕಾರ ಆದೇಶಿಸಿದೆ. ಇಲ್ಲಿ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿಲ್ಲ. 2021-22ನೇ ಸಾಲಿನಲ್ಲಿ ನಿಗದಿಗೊಳಿಸಿದ್ದ ಶುಲ್ಕವನ್ನೇ ಈ ಬಾರಿಯೂ ಪಡೆಯಲಾಗುತ್ತಿದೆ ಎಂದು ಹೇಳಿದರು.

ಯಾರ ಹಂಗಿಲ್ಲದೆ ಸರ್ಕಾರ ರಚಿಸುವ ಶಕ್ತಿ ನೀಡಿ: ನಿಖಿಲ್‌ ಕುಮಾರಸ್ವಾಮಿ

ಹೈಸ್ಕೂಲ್‌ ಶಿಕ್ಷಕರಿಗೆ ಪಿಯು ಕಾಲೇಜಿಗೆ ಬಡ್ತಿ ನೀಡಲು ತಾಂತ್ರಿಕ ಅಡ್ಡಿ: ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಿಗೆ ಪದವಿ ಪೂರ್ವ ಉಪನ್ಯಾಸಕರಾಗಿ ಬಡ್ತಿ ನೀಡಲು ಕೆಲವು ತಾಂತ್ರಿಕ ಸಮಸ್ಯೆಗಳಾಗಿರುವುದರಿಂದ ಬಡ್ತಿ ನೀಡಲು ಆಗುತ್ತಿಲ್ಲ. ಈ ಬಗ್ಗೆ ಶೀಘ್ರವೇ ಪರಿಹಾರ ಕಂಡುಕೊಂಡು ಬಡ್ತಿ ನೀಡಲು ಕ್ರಮ ಕೈಗೊಳ್ಳಲಾಗುವುದು. ಜತೆಗೆ, ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಭರವಸೆ ನೀಡಿದರು. ಬಿಜೆಪಿಯ ಹಣಮಂತ ನಿರಾಣಿ ಹಾಗೂ ಎಸ್‌.ವಿ.ಸಂಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 1998ರ ವೃಂದ ಮತ್ತು ನೇಮಕಾತಿ ನಿಯಮ ಅನ್ವಯ 2011-12ನೇ ಸಾಲಿನಲ್ಲಿ ಉಪನ್ಯಾಸಕರ ವೃಂದಕ್ಕೆ ಬಡ್ತಿ ಕೋಟಾದಲ್ಲಿ ಶೇ.50:50 ಅನುಪಾತದಲ್ಲಿ 1184 ಹುದ್ದೆಗಳಿಗೆ ಬಡ್ತಿ ನೀಡಲು ಆದೇಶಿಸಲಾಗಿತ್ತು. 

ಕರ್ನಾಟಕದಲ್ಲಿ ಸಿನಿಮಾ ಸ್ಕೂಲ್‌ ಸ್ಥಾಪನೆ ಆಗಲಿ: ನಿರ್ದೇಶಕ ಸತ್ಯಪ್ರಕಾಶ್‌

ಆದರೆ 2014ಲ್ಲಿ 371 ಜೆ (ಕಲ್ಯಾಣ ಕರ್ನಾಟಕ) ಅಧಿಸೂಚನೆ ಹೊರಡಿಸಿದ ಕಾರಣ ಉಪನ್ಯಾಸಕ ಜ್ಯೇಷ್ಠತಾ ಪಟ್ಟಿವಿಂಗಡಿಸಿ ತಯಾರಿಸಬೇಕಾಗಿದೆ. ಸುಪ್ರೀಂಕೋರ್ಚ್‌ ತೀರ್ಪು, ಎಸ್ಸಿ ಎಸ್ಟಿಮೀಸಲು ಹೆಚ್ಚಳ ಕಾರಣಗಳಿಂದ ಬಡ್ತಿ ನೀಡಲು ಆಗಿಲ್ಲ ಎಂದು ವಿವರಿಸಿದರು. ಪ್ರಸ್ತುತ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನೇರ ನೇಮಕಾತಿ ಹಾಗೂ ಮುಂಬಡ್ತಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ರೋಸ್ಟರ್‌ ಬಿಂದುಗಳನ್ನು ನಿಗದಿಗೊಳಿಸಿದೆ. ಅದರನ್ವಯ ಮುಂಬಡ್ತಿ ಕೋಟಾ ಅಡಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Latest Videos
Follow Us:
Download App:
  • android
  • ios