SSLC ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಕುಸಿದುಬಿದ್ದು ವಿದ್ಯಾರ್ಥಿನಿ ಸಾವು

ಪರೀಕ್ಷೆ  ಬರೆಯುವ ಸಂದರ್ಭದಲ್ಲಿ  ವಿದ್ಯಾರ್ಥಿನಿಯೊಬ್ಬಳು ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

student dies after collapsing in SSLC examination center at T narasipura

ಮಧು.ಎಂ.ಚಿನಕುರಳಿ ಏಷ್ಯಾನೆಟ್ ಸುವರ್ಣನ್ಯೂಸ್

ಮೈಸೂರು(ಮಾ.28): ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಬರೆಯುವ ಸಂದರ್ಭದಲ್ಲಿ ಕುಸಿದುಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು (Mysuru) ಜಿಲ್ಲೆಯ ಟಿ.ನರಸೀಪುರ (T narasipura) ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಳು. ತಕ್ಷಣ ಅಲ್ಲಿದ್ದ ಸಿಬ್ಬಂದಿ ಆಕೆಯನ್ನು ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ (Student) ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿಗೆ ಹೃದಯಾಘಾತವಾಗಿ ಈ ದುರಂತ ಸಂಭವಿಸಿದೆ.

ಪರಿಕ್ಷಾ ಕೊಠಡಿಯಲ್ಲಿ ಕಾದು ಕುಳಿತಿದ್ದ ಜವರಾಯ: ಟಿ.ನರಸೀಪು ತಾಲೂಕಿನ ಅಕ್ಕೂರು ಗ್ರಾಮದ ಕೆಂಪರಾಜು ಎಂಬುವರ  ಪುತ್ರಿ ಅನುಶ್ರೀ (16 ವ)  ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಾಂಗ ಮಾಡುತ್ತಿದ್ದರು. ಇಂದಿನಿಂದ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರುವ ಸಲುವಾಗಿ ಅನುಶ್ರೀ ಇಂದು ಟಿ.ನರಸೀಪುರದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿದ್ದಳು. ಪರೀಕ್ಷೆ ಆರಂಭವಾದ ಅರ್ಧ ಗಂಟೆಯಲ್ಲಿ ಕುಸಿದುಬಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

"

ಪರೀಕ್ಷೆ ಬರೆಯಲು ಹೊರಟ ವಿಜಯಪುರ ವಿದ್ಯಾರ್ಥಿಗೆ ತಿಥಿ ಮಾಡಿ ಕಿಡಿಗೇಡಿಗಳ ಕಾಟ!

ಅದ್ಯಾವ ಒತ್ತಡ ಆವರಿಸಿತ್ತು ವಿದ್ಯಾರ್ಥಿನಿಗೆ?: ಮೃತ ವಿದ್ಯಾರ್ಥಿನಿ ಅನುಶ್ರೀ ತಾನು ಪರೀಕ್ಷೆ ಬರೆಯಬೇಕಾಗಿದ್ದ ಕೇಂದ್ರಕ್ಕೆ ಹಾಜರಾಗಬೇಕಾದ ವಿಷಯದಲ್ಲು ಗೊಂದಲ ಮಾಡಿಕೊಂಡು ಪಕ್ಕದಲ್ಲೇ ಇದ್ದ ಶಿವಾನಂದ ಶರ್ಮ ಆಂಗ್ಲ ಮಾಧ್ಯಮ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಮುಂದಾಗಿದ್ದಾಳೆ. ಅಲ್ಲಿಯೇ ಸುಮಾರು ಹದಿನೈದು ನಿಮಿಷಗಳ ಕಾಲ ಪರೀಕ್ಷೆ ಬರೆದಿದ್ದಳು ಎನ್ನಲಾಗಿದೆ. ಆದರೆ ಆಕೆ ಪರೀಕ್ಷೆ ಬರೆಯುತ್ತಿದ್ದ ಹಾಲ್ ಟಿಕೆಟ್ ನಂಬರ್ ವಿದ್ಯಾರ್ಥಿಯೊಬ್ಬನದ್ದಾಗಿದ್ದು, ಇದನ್ನು ಗಮನಿಸಿದ ಪರೀಕ್ಷಾ ಮೇಲ್ವಿಚಾರಕರು ಆಕೆಗೆ ಮನವರಿಕೆ ಮಾಡಿ ಪಕ್ಕದ ಸೆಂಟರ್‌ಗೆ ಕರೆದೊಯ್ಯುತ್ತಿದ್ದ ಸಂಧರ್ಭ ಶಾಲೆಯ ಮೆಟ್ಟಿಲನ್ನು ಹತ್ತುವ ವೇಳೆ ಕುಸಿದು ಬಿದ್ದಳು ನ್ನಲಾಗಿದೆ. ಕೂಡಲೇ ಆಕೆಯನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಆಕೆ ಅಷ್ಟರಲ್ಲಾಗಲೇ ಮೃತ ಪಟ್ಟಿದ್ದಳೆಂದು ವೈದ್ಯರು ಧೃಡೀಕರಿಸಿದರು. ವಿಷಯ ತಿಳಿದ ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ, ಡಿಡಿಪಿಐ ರಾಮಚಂದ್ರ ರಾಜೇ ಅರಸ್,ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ ಮತ್ತಿತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

KCET 2022 Exam: ಜೂನ್ 16ರಿಂದ ಸಿಇಟಿ ಪರೀಕ್ಷೆ ಆರಂಭ

ಆಸ್ಪತ್ರೆಗೆ ಭೇಟಿ ನೀಡಿದ ಡಿಡಿಪಿಐ ರಾಮಚಂದ್ರರಾಜೇ ಅರಸ್ ವಿದ್ಯಾರ್ಥಿನಿ ಅನುಶ್ರೀ ಕುಟುಂಬಕ್ಕೆ ಸಾಂತ್ವನ ಹೇಳಿದರು. ನಂತರ ಮಾತನಾಡಿ ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರೀತಿಯ ಮುಂಜಾಗ್ರತ ಕ್ರಮವನ್ನ ಕೈಗೊಳ್ಳಲಾಗಿತ್ತು ಎಂದರು. ಕೋವಿಡ್ ಪರೀಕ್ಷೆ ಹಾಗೂ ವಿದ್ಯಾರ್ಥಿಗಳಿಗೆ ತಾಪಮಾನ ಪರೀಕ್ಷೆ ಎಲ್ಲವನ್ನ ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸಿದ್ದರು. ಘಟನೆ ಬಗ್ಗೆ ತಿಳಿದು ಶಿಕ್ಷಣ ಸಚಿವರು ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಮರಣೋತ್ತರ ಪರೀಕ್ಷೆ ನಂತರ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತದೆ ಎಂದು ಅವರು ತಿಳಿಸಿದ್ದಾರೆ.

"

ಸರ್ಕಾರದಿಂದ 1 ಲಕ್ಷ ಪರಿಹಾರ: ಪರೀಕ್ಷಾ ಕೇಂದ್ರದಲ್ಲಿ ಸಾವಿಗೀಡಾದ ಹಿನ್ನಲೆಯಲ್ಲಿ ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಅಶ್ವಿನ್ ಕುಮಾರ್ ಭೇಟಿ ನೀಡಿದರು. ಪರಿಸ್ಥಿತಿ ಅವಲೋಕಿಸಿದ ಅವರು ವಿದ್ಯಾರ್ಥಿನಿಯ ಕುಟುಂಬಕ್ಕೆ ಸಾಂತ್ವನ ಹೇಳಿದರು. ನಂತರ ಮಾತನಾಡುತ್ತ ಇಂತಹ ಘಟನೆ ತಾಲ್ಲೂಕಿನಲ್ಲಿ ನಡೆಯಬಾರದಿತ್ತು. ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದ್ದು, ಪೋಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದೇನೆ. ಮೃತ ಬಾಲಕಿಗೆ ಇಲಾಖೆ ವತಿಯಿಂದ 1 ಲಕ್ಷ ಪರಿಹಾರ ನೀಡುತ್ತಿದ್ದು, ತಾವೂ ವಯಕ್ತಿಕವಾಗಿ ಸಹಾಯ ಮಾಡುವುದಾಗಿ ಶಾಸಕ ಅಶ್ವಿನ್ ತಿಳಿಸಿದ್ದಾರೆ. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Latest Videos
Follow Us:
Download App:
  • android
  • ios