ಬೆಂಗಳೂರು, (ಏ.20) : ಕರ್ನಾಟಕದದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯಿಲ್ಲದೇ 1ರಿಂದ9 ನೇ ತರಗತಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಆದೇಶವನ್ನು ಶಿಕ್ಷಣ ಇಲಾಖೆ ಅಧಿಕೃತವಾಗಿ ಹೊರಡಿಸಿದೆ.

ಕೋವಿಡ್ ಭೀತಿಯಲ್ಲಿ ರಜೆಯಲ್ಲಿದ್ದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಇನ್ನೆರೆಡು ದಿನಗಳಲ್ಲಿ ಪರೀಕ್ಷೆ ದಿನಾಂಕವನ್ನು ತಿಳಿಸುವುದಾಗಿ ಶಿಕ್ಷಣ ಸಚಿವರು ಹೇಳಿದ್ದರು. ಆದರೆ ಇದೀಗ ಪರೀಕ್ಷೆ ನಡೆಸದೇ 1 ರಿಂದ 9 ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್ ಮಾಡಲು ಆದೇಶ ಹೊರಡಿಸಿದ್ದಾರೆ. ಮೌಲ್ಯಾಂಕ ಆಧರಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ಇಲಾಖೆ ಹೇಳಿದೆ.

ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಘೋಷಣೆ: ಎಷ್ಟು ದಿನ? ಶುರು ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟದಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದೆ. ಪ್ರತಿನಿತ್ಯ ಕೋವಿಡ್ ಸಾವಿನ ಸಂಖ್ಯೆ ಕೂಡ ಏರುತ್ತಲೇ ಇದೆ. ಈಗಾಗಲೇ ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಕೋನದಿಂದ ಹತ್ತು ಹಲವು ಕ್ರಮಗಳನ್ನು ಅನುಸರಿಸಲಾಗಿದ್ದು. ಇದೀಗ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ನಿರ್ಧಾರವನ್ನು ಕೈಗೊಂಡಿದೆ.
"