ಕೋಟೆನಾಡಿನಲ್ಲಿ ಕಡಿಮೆ ಆಗದ ಹಾಸ್ಟೆಲ್ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ!

ಕೋಟೆನಾಡು ಚಿತ್ರದುರ್ಗದಲ್ಲಿ ಕಡಿಮೆ ಆಗದ ಹಾಸ್ಟೆಲ್ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ. ವಾರದಲ್ಲಿ ಎರಡು ಹಾಸ್ಟೆಲ್ ಗಳಲ್ಲಿ ಫುಡ್ ಪಾಯಿಸನ್ ನಿಂದ ಮಕ್ಕಳು ಅಸ್ವಸ್ಥ. ಹಾಸ್ಟೆಲ್ ಸಿಬ್ಬಂದಿ, ಅಧಿಕಾರಿಗಳ ನಿರ್ಲಕ್ಷ್ಯ

students sick food poisoning Chitradurga hostel this second case in a week

ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್

ಚಿತ್ರದುರ್ಗ (ಜು.23): ಹಾಸ್ಟೆಲ್ ಗಳು ಅಂದ್ರೆ ಸಾಕು ಅಲ್ಲಿನ ವ್ಯವಸ್ಥೆ ಎಷ್ಟರ ಮಟ್ಟಿಗೆ ಇರುತ್ತೆ ಎಂದು ಅಲ್ಲಿ ಇದ್ದು ಬಂದವರಿಗೆ ಮಾತ್ರ ಗೊತ್ತಿರುತ್ತೆ. ಆದ್ರೆ ಸರ್ಕಾರಗಳಿಂದ ಹಾಸ್ಟೆಲ್ ಅಭಿವೃದ್ಧಿಗಂತಲೇ ಕೋಟಿ ಕೋಟಿ ಅನುದಾನ ಬಿಡುಗಡೆ ಆಗುತ್ತೆ. ಆದ್ರೆ ಅಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ಮಾತ್ರ ಯಾವ ಅಧಿಕಾರಿಗಳು ಕೂಡ‌ ಮುಂದಾಗುವುದಿಲ್ಲ. ಯಾಕಪ್ಪ ಅಂದ್ರೆ ಎಲ್ಲಾ ಅಧಿಕಾರಿಗಳೂ ನಿರ್ಲಕ್ಷ್ಯ, ಬೇಜವಾಬ್ದಾರಿತನ. ಇದಕ್ಕೆಲ್ಲಾ ಸೂಕ್ತ ನಿದರ್ಶನ ಎಂಬಂತೆ ಇತ್ತೀಚೆಗೆ ಹಾಸ್ಟೆಲ್ ಗಳಲ್ಲಿ ನಡೆಯುತ್ತಿರುವ ಫುಡ್ ಪಾಯಿಸನ್ ಪ್ರಕರಣಗಳೇ ಸಾಕು. 

ಕೋಟೆನಾಡು ಚಿತ್ರದುರ್ಗ(Chitradurga) ಜಿಲ್ಲೆಯಲ್ಲಂತೂ ವಾರಕ್ಕೊಂದು ಹಾಸ್ಟೆಲ್(Hostel) ಗಳಲ್ಲಿ ವಿದ್ಯಾರ್ಥಿಗಳು ಫುಡ್ ಪಾಯಿಸನ್(food poisoning) ನಿಂದಾಗಿ ಅಸ್ವಸ್ಥರಾಗ್ತಿದ್ದಾರೆ. ಆದ್ರೂ ಅಧಿಕಾರಿಗಳು ಮಾತ್ರ ಆ ದಿನ ನೆಪ ಮಾತ್ರಕ್ಕೆ ಹಾಸ್ಟೆಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸೋದು ಬಿಟ್ರೆ ಮತ್ತೆ ಆ ಕಡೆ ತಲೆಯೂ ಹಾಕುವುದಿಲ್ಲ. ಇದ್ರಿಂದಾಗಿ ಅಲ್ಲಿನ ವ್ಯವಸ್ಥೆಯು ಸಿಕ್ಕಾಪಟ್ಟೆ ಅವ್ಯವಸ್ಥೆ ಆಗಿ ಬಿಡುತ್ತೆ. ಹಾಗಾಗಿಯೇ ನಿನ್ನೆ ತಡರಾತ್ರಿ ಹಾಸ್ಟೆಲ್ ನಲ್ಲಿ ಊಟ ಸೇವಿಸಿ 13 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ(holalkere)  ಪಟ್ಟಣದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ BCM ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. ಸದ್ಯ ಘಟನೆಯಿಂದ ಅಸ್ವಸ್ಥಗೊಂಡಿರೋ ವಿಧ್ಯಾರ್ಥಿಗಳು  ಪ್ರಾಣಪಾಯದಿಂದ ಪಾರಾಗಿದ್ದಾರೆ. 

Yadgir| ಹಾಸ್ಟೆಲ್‌ನಲ್ಲಿ ತಯಾರಿಸಿದ ಉಪ್ಪಿಟ್ಟಿನಲ್ಲಿ ಸತ್ತ ಹಾವು: 5 ವಿದ್ಯಾರ್ಥಿಗಳು ಅಸ್ವಸ್ಥ

ತಡರಾತ್ರಿ 9 ಗಂಟೆ ಸುಮಾರಿನಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟ ಸೇವಿಸಿದ್ದಾರೆ. ಬಳಿಕ 13 ಮಂದಿ ವಿದ್ಯಾರ್ಥಿಗಳಿಗೆ ವಾಂತಿ- ಭೇದಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನ ಹೊಳಲ್ಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಗಂಭೀರವಾಗಿದ್ದ ಇಬ್ಬರೂ ವಿವಿದ್ಯಾರ್ಥಿಗಳನ್ನ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ತಡರಾತ್ರಿ ಅನ್ನ ಸಾಂಬಾರ್ ಸೇವಿಸಿದ ವಿದ್ಯಾರ್ಥಿಗಳು ಬಳಿಕ ಅಸ್ವಸ್ಥಗೊಂಡಿದ್ದಾರೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ರೀತಿಯ ಪ್ರಕರಣಗಳು ಜಿಲ್ಲೆಯಲ್ಲಿ ಇದೇ ಮೊದಲಲ್ಲ. ಕೇವಲ ಒಂದು ವಾರದ ಹಿಂದಷ್ಟೇ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಬಳಿ ಇರುವ ಇಸಾಮುದ್ರ ಗೊಲ್ಲರಹಟ್ಟಿ ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಸುಮಾರು  ೪೦ಕ್ಕೂ ಅಧಿಕ ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿ ವಾಂತಿ. ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಅದ್ರಲ್ಲಿ ನಾಲ್ಕು ವಿದ್ಯಾರ್ಥಿಗಳ ಸ್ಥಿತಿ ತುಂಬಾ ಗಂಭೀರವಾಗಿತ್ತು. ಸದ್ಯ ಯಾವುದೇ ಪ್ರಾಣಹಾನಿ ಆಗಿಲ್ಲ ಎಂಬುದು ಸಮಾಧಾನಕರ ಸಂಗತಿ.

ಗದಗ: ವಿಷಪೂರಿತ ಆಹಾರ ಸೇವನೆ, 14 ವಿದ್ಯಾರ್ಥಿಗಳು ಅಸ್ವಸ್ಥ

ಆ ಸಂದರ್ಭದಲ್ಲಿ ಮಾತ್ರ ಘಟನೆ ನಡೆದ ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಅದಾದ ಮೇಲಾದ್ರು ಅಧಿಕಾರಿಗಳು, ಜನಪ್ರತಿನಿಧಿಗಳು ಹೆಚ್ಚೆತ್ತು ಹಾಸ್ಟೆಲ್ ಗಳ ಮೇಲೆ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಬೇಕಿತ್ತು‌. ಆದ್ರೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಮಾತ್ರ ಫುಲ್ ಸೈಲೆಂಟ್ ಆಗಿರೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಬಳಿಕ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸೋ ಮಹಾನ್ ಭಾವರು, ಮೊದಲೇ ಎಲ್ಲಾ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಮೊದಲು ಅಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಿ ಇಂತಹ ಪ್ರಕರಣಗಳು ಮತ್ತೊಮ್ಮೆ ಮರುಕಳಿಸದಂತೆ ಸೂಕ್ತ ಕ್ರಮ ವಹಿಸಲಿ ಎಂಬುದು ಎಲ್ಲರ ಆಗ್ರಹ.

Latest Videos
Follow Us:
Download App:
  • android
  • ios