5 ಮತ್ತು 8 ತರಗತಿಗಳಿಗೆ ಬೋರ್ಡ್ ಪರೀಕ್ಷೆ ಮೇಲ್ಮನವಿ ವಜಾ, ಮಧ್ಯಾಹ್ನ 2.30ರಿಂದ ಪರೀಕ್ಷೆ ನಡೆಸಲು ಸುಪ್ರೀಂ ಸೂಚನೆ!
5 ಮತ್ತು 8 ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಹೀಗಾಗಿ ಇಂದಿನಿಂದ ಪರೀಕ್ಷೆ ಆರಂಭವಾಗಲಿದೆ.
ಬೆಂಗಳೂರು (ಮಾ.27): 5 ಮತ್ತು 8 ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ಮೂಲಕ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ 5 ಹಾಗೂ 8 ನೇ ತರಗತಿ ಮೌಲ್ಯಂಕನ ಪರೀಕ್ಷೆ ಮುಂದೂಡುವಂತೆ ಖಾಸಗಿ ಶಾಲೆ ಸಂಘಟನೆ ಕುಸ್ಮಾ, ರುಪ್ಸಾ ಸಲ್ಲಿಸಿತ್ತು. ಇಂದು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್. ಹೀಗಾಗಿ ನಿಗದಿಯಂತೆ ಮೌಲ್ಯಂಕನ ಪರೀಕ್ಷೆ ನಡೆಯಲಿದೆ. ಇಂದು ಮಧ್ಯಾಹ್ನ 2:30 ಕ್ಕೆ ಪರೀಕ್ಷೆ ಪ್ರಾರಂಭವಾಗಲಿದೆ.
ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಂಡಳಿ ಪರೀಕ್ಷೆಗಳು ಆರಂಭವಾಗಲಿವೆ. ರಾಜ್ಯ ಸರಕಾರ ನಿರ್ಧಾರದಂತೆಯೇ ಇದೇ ಮೊದಲ ಬಾರಿಗೆ 5 ಮತ್ತು 8ನೇ ತರಗತಿ ಮಕ್ಕಳಿಗೆ ಮಂಡಳಿ ಪರೀಕ್ಷೆ ನಡೆಯುತ್ತಿದೆ.
ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಪರೀಕ್ಷೆಗೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದು, ಎಲ್ಲ ಶಾಲೆಗಳಿಗೂ ರವಾನಿಸಲಿದೆ. ಈ ಪ್ರಶ್ನೆ ಪತ್ರಿಕೆ ಆಧಾರಿಸಿ ಎಲ್ಲ ಶಾಲೆಗಳು ಪರೀಕ್ಷೆ ನಡೆಸುತ್ತವೆ. ಆಯಾ ಶಾಲೆಗಳೇ ಪರೀಕ್ಷಾ ಕೇಂದ್ರಗಳಾಗಿದ್ದು, ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಪರೀಕ್ಷೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ.
ಐದನೇ ತರಗತಿ ಮಕ್ಕಳಿಗೆ ಮಾ.27ರಿಂದ 30ರ ವರೆಗೆ ಮತ್ತು ಎಂಟನೇ ತರಗತಿಗೆ ಮಾ.27ರಿಂದ ಏ.1ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಮಾ.30ರಂದು ನಡೆಯಲಿರುವ ಗಣಿತ ವಿಷಯದ ಪರೀಕ್ಷೆ ಮಾತ್ರ ಬೆಳಗ್ಗೆ 10.30ರಿಂದ 12.30ರ ವರೆಗೆ ನಡೆಯಲಿದೆ. ಉಳಿದೆಲ್ಲ ಪರೀಕ್ಷೆಗಳು ಮಧ್ಯಾಹ್ನ 2.30ರಿಂದ 4.30ರವರೆಗೆ ನಡೆಯಲಿವೆ.
5ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಲು ನಿರಾಕರಣೆ, ಸುಪ್ರೀಂ
ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾ.ಪಿ.ಎಸ್.ನರಸಿಂಹ ಮತ್ತು ನ್ಯಾ. ಜೆ.ಬಿ.ಪರ್ಡೀವಾಲಾ ಅವರಿದ್ದ ಪೀಠ, ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ‘ಹೈಕೋರ್ಟ್‌ಗಳ ಆದೇಶದಲ್ಲಿ ಮಧ್ಯಪ್ರವೇಶಿಸುವುದು ಸರಿಯಲ್ಲ. ಒಂದು ರಾಜ್ಯಕ್ಕೆ ಏನು ಬೇಕು ಎಂಬುದು ಹೈಕೋರ್ಟ್‌ಗಳಿಗೆ ಚೆನ್ನಾಗಿ ತಿಳಿದಿರುತ್ತದೆ’ ಎಂದು ಹೇಳಿ ವಿಚಾರಣೆಯನ್ನು ಮಾ.27ಕ್ಕೆ ಮುಂದೂಡಿತ್ತು. ಇಂದು ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಜಾಗೊಳಿಸಿ ಪರೀಕ್ಷೆ ನಡೆಸುವಂತೆ ಸೂಚಿಸಿದೆ.
2nd PUC Annual Exam: ದ್ವಿತೀಯ ಪಿಯುಸಿ ಮಾದರಿ ಉತ್ತರ ಪ್ರಕಟ
ರಾಜ್ಯ ಶಿಕ್ಷಣ ಇಲಾಖೆಯು 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಕೈಗೊಂಡು ಕಳೆದ ನವೆಂಬರ್‌ನಲ್ಲಿ ಅಧಿಕೃತ ಸುತ್ತೋಲೆ ಹೊರಡಿಸಿತ್ತು. ಶೈಕ್ಷಣಿಕ ವರ್ಷದ ಆರಂಭದಲ್ಲೇ ಬೋರ್ಡ್ ಪರೀಕ್ಷೆಯ ಬಗ್ಗೆ ತಿಳಿಸದೆ ವರ್ಷದ ಮಧ್ಯದಲ್ಲಿ ಪ್ರಕಟಿಸಿದ್ದನ್ನು ಪ್ರಶ್ನಿಸಿ ಅವರ್ ಸ್ಕೂಲ್ಸ್, ರುಪ್ಸಾ ಸೇರಿದಂತೆ ಕೆಲ ಸಂಘಟನೆಗಳು ಮೊದಲು ಹೈಕೋರ್ಟ್ ಮೆಟ್ಟಿಲೇರಿದಾಗ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಹೋದಾಗ ಏಕಸದಸ್ಯ ಪೀಠದ ಆದೇಶಕ್ಕೆ ದ್ವಿಸದಸ್ಯ ಪೀಠ ತಡೆ ನೀಡಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿತ್ತು.