ಶಿಕ್ಷಣ  ಸಂಸ್ಥೆಗಳಲ್ಲಿ ಹಿಜಾಬ್  ನಿಷೇಧಿಸುವ ಕರ್ನಾಟಕ ಹೈಕೋರ್ಟ್  ಆದೇಶದ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್   ಒಪ್ಪಿಗೆ   ಸೂಚಿಸಿದೆ.

ನವದೆಹಲಿ (ಮೇ.28): ಶಿಕ್ಷಣ (Education) ಸಂಸ್ಥೆಗಳಲ್ಲಿ ಹಿಜಾಬ್ (Hijab) ನಿಷೇಧಿಸುವ ಕರ್ನಾಟಕ ಹೈಕೋರ್ಟ್ (Karnataka High Court ) ಆದೇಶದ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ (Supreme Court) ಸಮ್ಮತಿ ಸೂಚಿಸಿದೆ.

ಹಿಜಾಬ್ ವಿವಾದ ಸಂಬಂಧ ಈ ಹಿಂದೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎನ್‌ವಿ ರಮಣ ಅವರ ಮುಂದೆ ಪ್ರಸ್ತಾಪಿಸಲಾಯಿತು. ಮೇಲ್ಮನವಿದಾರರ ಪರವಾಗಿ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಈ ವಿಷಯವನ್ನು ಪ್ರಸ್ತಾಪಿಸಿದರು.

ಈ ವೇಳೆ ನ್ಯಾಯಮೂರ್ತಿಗಳು ನಾವು ಅರ್ಜಿಯನ್ನು ಪರಿಗಣಿಸುತ್ತೇವೆ. ಎರಡು ದಿನ ಕಾಲ ಕಾಯುವಂತೆ ಅವರು ಹೇಳಿದ್ದಾಗಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮಾರ್ಚ್ ತಿಂಗಳಲ್ಲಿ ನಿರಾಕರಿಸಿತ್ತು.

ಶಾಲಾ-ಕಾಲೇಜುಗಳ ಸಮವಸ್ತ್ರದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಈ ಹಿಂದೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ನ್ಯಾಯಾಲಯದ ಈ ಆದೇಶದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕೆಲವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

Ramanagara: ಯಾವ ಖಾಸಗಿ ಶಾಲೆಗೂ ಕಡಿಮೆ ಇಲ್ಲ ಈ ಅಂಗನವಾಡಿ: ಇಲ್ಲಿ ಎಲ್ಲವೂ ಸ್ಮಾರ್ಟ್!

ಹಿಜಾಬ್‌ಧಾರಿಗಳಿಗೆ ತರಗತಿ ಪ್ರವೇಶ ಇಲ್ಲ: ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜಿನ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ತರಗತಿ, ಲೈಬ್ರೆರಿಗೆ ಹಿಜಾಬ್‌ ಧರಿಸಿ ಬರುವಂತಿಲ್ಲ, ಕಾಲೇಜು ಕ್ಯಾಂಪಸ್‌ನಲ್ಲಷ್ಟೇ ಹಿಜಾಬ್‌ ಹಾಕಿಕೊಂಡು ಬರಬಹುದು ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ಸಂಜೆ ಕಾಲೇಜು ಅಭಿವೃದ್ಧಿ ಸಮಿತಿ(ಸಿಡಿಸಿ) ಅಧ್ಯಕ್ಷ, ಶಾಸಕ ವೇದವ್ಯಾಸ ಕಾಮತ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ನಂತರ ಮಾತನಾಡಿದ ವೇದವ್ಯಾಸ ಕಾಮತ್‌, ಸಭೆಯಲ್ಲಿ ಕಾಲೇಜಿನಲ್ಲಿ ನಡೆದ ಘಟನೆಗಳ ಬಗ್ಗೆ ಚರ್ಚಿಸಲಾಗಿದೆ. ಹಿಜಾಬ್‌ಗೆ ತರಗತಿಯಲ್ಲಿ ನಿಷೇಧವಿದ್ದು, ಇದನ್ನು ಕಟ್ಟುನಿಟ್ಟು ಪಾಲಿಸಲಾಗುತ್ತದೆ. ನಿಯಮ ಪಾಲನೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

ಕಾವಲು ಕಾಯೋ ಕೆಲಸ ಮಾಡುತ್ತಲೇ PhD ಕನಸು ನನಸಾಗಿಸಿಕೊಂಡ ದಲಿತ ಹುಡುಗ

ಹೈಕೋರ್ಟ್‌ ಆದೇಶ ಬಳಿಕ ಪರೀಕ್ಷಾ ಪ್ರಕ್ರಿಯೆ ಇದ್ದ ಹಿನ್ನೆಲೆಯಲ್ಲಿ ಮಾರ್ಗಸೂಚಿ ಕಳುಹಿಸಲು ತಡವಾಯಿತು. ಆ ಬಳಿಕ ಸಿಂಡಿಕೇಟ್‌ ಸಭೆ ನಡೆಸಿ ಕ್ರಮ ಕೈಗೊಂಡಿದ್ದೇವೆ. ಇದರ ಪಾಲನೆ ವಿಚಾರದಲ್ಲಿ ಶಿಕ್ಷಕರ ವಿರುದ್ಧ ದೂರಿಗೆ ಸಾಕ್ಷ್ಯ ಇದ್ದರೆ ಕ್ರಮ ಕೈಗೊಳ್ಳಲಾಗುವುದು. ನಮಗೆ ಬಂದ ಆದೇಶದ ಪ್ರಕಾರ ಪದವಿ ಕಾಲೇಜಿಗೂ ಕೋರ್ಚ್‌ ಆದೇಶ ಅನ್ವಯ ಆಗುತ್ತದೆ. ಸೋಮವಾರದಿಂದ ನೂರಕ್ಕೆ ನೂರು ಕೋರ್ಟ್‌ ಆದೇಶ ಪಾಲಿಸಬೇಕು. ವಿದ್ಯಾರ್ಥಿನಿಯರು ವಿಶ್ರಾಂತಿ ಕೊಠಡಿಯಲ್ಲಿ ಹಿಜಾಬ್‌ ತೆಗೆದಿಟ್ಟು ತರಗತಿಗೆ ಹೋಗಲಿ. ಹಿಜಾಬ್‌ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿನಿಯರಿಗೆ ಕೌನ್ಸೆಲಿಂಗ್‌ ಮಾಡುವ ಕೆಲಸವನ್ನು ಉಪ ಕುಲಪತಿ ಮಾಡಲಿದ್ದಾರೆ ಎಂದರು.

ಮಂಗಳೂರಿನಲ್ಲಿ ಹಿಜಾಬ್ ಕಿಚ್ಚು, ABVP ಬೆಂಬಲಿತ ಕಾಲೇಜು ಅಧ್ಯಕ್ಷ ರಾಜೀನಾಮೆ!

ಪದವಿ ಕಾಲೇಜುಗಳಿಗೆ ಕೋರ್ಚ್‌ ಆದೇಶ ಅನ್ವಯ ಆಗುತ್ತದೆಯೇ ಎನ್ನುವ ಪ್ರಶ್ನೆ ಇದೆ. ಕೋರ್ಟ್‌ ಆದೇಶದಲ್ಲಿ ಸರ್ಕಾರ, ಉನ್ನತ ಶಿಕ್ಷಣ ಇಲಾಖೆ ಮತ್ತು ವಿವಿಗಳನ್ನು ಪಾರ್ಟಿ ಮಾಡಲಾಗಿದೆ. ಹೀಗಿರುವಾಗ ಈ ಆದೇಶ ಸಹಜವಾಗಿ ಎಲ್ಲ ಕಾಲೇಜುಗಳಿಗೆ ಅನ್ವಯ ಆಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್‌ ಸ್ಪಷ್ಟಪಡಿಸಿದ್ದಾರೆ.